ಕಲುಷಿತ ನೀರಿನ ಬಳಕೆಯಿಂದ ಅನಾರೋಗ್ಯ: ಜನತೆಗೆ ಆರೋಗ್ಯ ಇಲಾಖೆ ಎಚ್ಚರಿಕೆ

ಮಳೆಗಾಲದಲ್ಲಿ ಕಲುಷಿತ ನೀರಿನಿಂದ ಅನೇಕ ರೋಗಗಳು ಕಾಣಿಸಿಕೊಳ್ಳುವ  ಸಾಧ್ಯತೆಗಳಿರುವುದರಿಂದ ಜನರು ನೀರಿನ ಸ್ವಚ್ಛತೆಯ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಎಂದು ಆರೋಗ್ಯ ಇಲಾಖೆ ಸೂಚಿಸಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಮಳೆಗಾಲದಲ್ಲಿ ಕಲುಷಿತ ನೀರಿನಿಂದ ಅನೇಕ ರೋಗಗಳು ಕಾಣಿಸಿಕೊಳ್ಳುವ  ಸಾಧ್ಯತೆಗಳಿರುವುದರಿಂದ ಜನರು ನೀರಿನ ಸ್ವಚ್ಛತೆಯ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಎಂದು ಆರೋಗ್ಯ ಇಲಾಖೆ ಸೂಚಿಸಿದೆ. 

ಈ ಕುರಿತು ಆದೇಶ ಹೊರಡಿಸಿರುವ ಇಲಾಖೆ, ಕಲುಷಿತ ನೀರನ್ನು ಸೇವಿಸಿದಲ್ಲಿ ಅತಿಸಾರ, ಕಾಮಾಲೆ, ಕಾಲರಾ, ಪೋಲಿಯೊ, ಚರ್ಮರೋಗ, ಆಮಶಂಕೆ ಸೇರಿದಂತೆ ವಿವಿಧ ರೋಗಗಳು ಬರುವ ಸಾಧ್ಯತೆಗಳು ಇರುತ್ತವೆ. ಆದ್ದರಿಂದ ಕುಡಿಯುವ ನೀರು
 ಕಲುಷಿತವಾಗದಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದೆ. 

ಪರವಾನಗಿ ಇಲ್ಲದ ವ್ಯಕ್ತಿಗಳು ನೀರು ಸರಬರಾಜು ಮಾಡದಂತೆ ನೋಡಿಕೊಳ್ಳಬೇಕು. ಕುದಿಸಿ ಆರಿಸಿದ ನೀರನ್ನು ಕುಡಿಯುವುದು ಉತ್ತಮ. ಆಹಾರಕ್ಕೆ ಕೂಡ ಕುದಿಸಿದ ನೀರನ್ನೇ ಬಳಕೆ ಮಾಡಬೇಕು. ಕುಡಿಯಲು ಬಳಸದ ನೀರಿಗೆ ಬ್ಯಾಕ್ಟೀರಿಯಾಗಳನ್ನು ಕೊಲ್ಲುವ ರಾಸಾಯನಿಕಗಳನ್ನು ಬಳಸಬೇಕು ಎಂದು ಸೂಚಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com