ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣ: ಶಾಸಕ ದೂರು ಹಿನ್ನೆಲೆ ಎಫ್ಐಆರ್ ದಾಖಲು, ಆಗಸ್ಟ್ 18ರವರೆಗೂ ನಿಷೇಧಾಜ್ಞೆ ಮುಂದುವರಿಕೆ

ನಗರದ ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿಯಲ್ಲಿ ಗಲಭೆ ನಡೆದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಆಗಸ್ಟ್ 18ರವರೆಗೂ 144 ಸೆಕ್ಷನ್'ನ್ನು ಮುಂದುವರೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ನಗರದ ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿಯಲ್ಲಿ ಗಲಭೆ ನಡೆದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಆಗಸ್ಟ್ 18ರವರೆಗೂ 144 ಸೆಕ್ಷನ್'ನ್ನು ಮುಂದುವರೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಸೆಕ್ಷನ್ 144 ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಕೆಜಿ ಹಳ್ಳಿ ಹಾಗೂ ಡಿಜೆ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪುಗೂಡುವಂತಿಲ್ಲ ಎಂದು ತಿಳಿದುಬಂದಿದೆ. 

ಈ ನಡುವೆ ತಮ್ಮ ಮನೆಯ ಮೇಲೆ ನಡೆದ ದಾಳಿ ಕುರಿತು ಪುಲಿಕೇಶಿನಗರ ಶಾಸಕ ಅಖಂಡ ಶ್ರೀನಿವಾಸ ಮೂರ್ತಿಯವರು ನೀಡಿದ್ದು, ಈ ಹಿನ್ನೆಲೆಯಲ್ಲಿ ಡಿಜೆ ಹಳ್ಳಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆಂದು ತಿಳಿದುಬಂದಿದೆ. 

ಡಿಜೆ ಹಳ್ಳಿಯಲ್ಲಿರುವ ತಮ್ಮ ಮನೆಯ ಮೇಲೆ ಗಲಭೆಕೋರರು ದಾಳಿ ನಡೆಸಿದ್ದು, ಮನೆ ಹಾಗೂ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಅಲ್ಲದೆ, ರೂ.3 ಕೋಟಿ ಬೆಲೆಬಾಳುವ ವಸ್ತುಗಳನ್ನೂ ದರೋಡೆ ಮಾಡಿದ್ದಾರೆಂದು ಶಾಸಕ ಶ್ರೀನಿವಾಸ ಮೂರ್ತಿಯವರು ನಿನ್ನೆಯಷ್ಟೇ ಪೊಲೀಸರಿಗೆ ದೂರು ನೀಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com