ಮೈಸೂರು-ಬೀದರ್ ಕೈಗಾರಿಕಾ ಕಾರಿಡಾರ್: 5 ವರ್ಷಗಳಲ್ಲಿ 35 ಲಕ್ಷ ಕೋಟಿ ರೂ. ಜಿಡಿಪಿ ಗುರಿ; ಡಿಸಿಎಂ

ಕೈಗಾರಿಕೆ ಮತ್ತು ವಾಣಿಜ್ಯ ಅಭಿವೃದ್ಧಿಗೆ ಬೇಕಾದ ಎಲ್ಲ ಸೌಕರ್ಯಗಳನ್ನು ಒದಿಸಲು ಸರ್ಕಾರ ಮುಂದಾಗಿದ್ದು, ಇದಕ್ಕೆ ಪೂರಕವಾಗಿ ಮೈಸೂರು- ಬೀದರ್ ಕೈಗಾರಿಕಾ ಕಾರಿಡಾರ್ ನಿರ್ಮಾಣಕ್ಕೆ ನಿರ್ಧರಿಸಲಾಗಿದೆ
ಅಶ್ವತ್ಥ ನಾರಾಯಣ
ಅಶ್ವತ್ಥ ನಾರಾಯಣ

ಬೆಂಗಳೂರು: ಕೈಗಾರಿಕೆ ಮತ್ತು ವಾಣಿಜ್ಯ ಅಭಿವೃದ್ಧಿಗೆ ಬೇಕಾದ ಎಲ್ಲ ಸೌಕರ್ಯಗಳನ್ನು ಒದಿಸಲು ಸರ್ಕಾರ ಮುಂದಾಗಿದ್ದು, ಇದಕ್ಕೆ ಪೂರಕವಾಗಿ ಮೈಸೂರು- ಬೀದರ್ ಕೈಗಾರಿಕಾ ಕಾರಿಡಾರ್ ನಿರ್ಮಾಣಕ್ಕೆ ನಿರ್ಧರಿಸಲಾಗಿದೆ. ಈಗಾಗಲೇ ಇರುವ ಬೆಂಗಳೂರು- ಚೆನ್ನೈ ಮತ್ತು ಬೆಂಗಳೂರು- ಮುಂಬಯಿ ಕಾರಿಡಾರ್’ಗಳಂತೆ ಈ ಕಾರಿಡಾರ್  ಅಭಿವೃದ್ಧಿಪಡಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಅಶ್ವತ್ಥ ನಾರಾಯಣ ಹೇಳಿದ್ದಾರೆ.

ಸ್ಪೇರ್ ಟ್ರಾವೆಲ್ ಮೀಡಿಯಾ ಮತ್ತು ಎಕ್ಸಿಬೀಷನ್ ಸಂಸ್ಥೆ ಆಯೋಜಿಸಿದ್ದ 'ಭವಿಷ್ಯದ ಕರ್ನಾಟಕ ಶೃಂಗಸಭೆ- 2020’ಯಲ್ಲಿ ಆನ್‌ಲೈನ್ ಮೂಲಕವೇ ಮುಖ್ಯ ಭಾಷಣ ಮಾಡಿದ ಅವರು,  ಕೈಗಾರಿಕೆ ಭೂಮಿ ಸಿಗುವುದೂ ಸೇರಿದಂತೆ ಬೇರೆ ಯಾವುದೇ ರೀತಿಯಲ್ಲಿ ತೊಂದರೆ ಆಗದಂತೆ ಅನೇಕ ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಭೂ ಸುಧಾರಣೆ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದಪಡಿ ಕಾಯ್ದೆ, ಕಾರ್ಮಿಕ ಕಾಯ್ದೆಗಳ ಸರಳೀಕರಣ ಸೇರಿದಂತೆ ಹತ್ತಾರು ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಇದರಿಂದ ರಾಜ್ಯದಲ್ಲಿ ಕೈಗಾರಿಕೆಗಳನ್ನು ಸ್ಥಾಪನೆ ಮಾಡುವುದು ಅತ್ಯಂತ ಸರಳವಾಗಿದೆ ಎಂದು  ಹೇಳಿದರು.

ಈಗಾಗಲೇ ರಾಜ್ಯವು 18 ಲಕ್ಷ ಕೋಟಿ ರೂ. ಜಿಡಿಪಿಯನ್ನು ಹೊಂದಿದೆ. ಐದು ವರ್ಷಗಳಲ್ಲಿ ಇದರ ಪ್ರಮಾಣ 35 ಲಕ್ಷ ಕೋಟಿ ರೂ. ದಾಟಲಿದೆ. ಅದರ ನಂತರದ ಐದು ವರ್ಷಗಳಲ್ಲಿ 75 ಲಕ್ಷ ಕೋಟಿ ರೂ. ಜಿಡಿಪಿ ಹೊಂದುವುದು ನಮ್ಮ ಹೆಗ್ಗುರಿ ಎಂದು ತಿಳಿಸಿದ್ದಾರೆ.

ರಾಜ್ಯದ ಆರ್ಥಿಕತೆಗೆ ಬೆನ್ನೆಲುಬಾಗಿರುವ ಕೃಷಿ, ಐಟಿ-ಬಿಟಿ, ಕೈಗಾರಿಕೆ, ಉತ್ಪಾದನೆ ಹಾಗೂ ಸೇವಾ ವಲಯಗಳಿಗೆ ಮತ್ತಷ್ಟು ಶಕ್ತಿ ತುಂಬುವ ನಿಟ್ಟಿನಲ್ಲಿ ಸರ್ಕಾರ ಅನೇಕ ಕ್ರಮಗಳನ್ನುಕೈಗೊಂಡಿದೆ. ಐದು ವರ್ಷಗಳಲ್ಲಿ ನಿಗದಿತ ಮೈಲುಗಲ್ಲು ದಾಟಲು ಸರ್ವ ಪ್ರಯತ್ನಗಳನ್ನು ನಡೆಸಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಹೇಳಿದರು.

ಇದೇ ರೀತಿಯಲ್ಲಿ ಕೈಗಾರಿಕೆ ಭೂಮಿ ಸಿಗುವುದೂ ಸೇರಿದಂತೆ ಬೇರೆ ಯಾವುದೇ ರೀತಿಯಲ್ಲಿ ತೊಂದರೆ ಆಗದಂತೆ ಅನೇಕ ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಭೂ ಸುಧಾರಣೆ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದಪಡಿ ಕಾಯ್ದೆ, ಕಾರ್ಮಿಕ ಕಾಯ್ದೆಗಳ ಸರಳೀಕರಣ ಸೇರಿದಂತೆ ಹತ್ತಾರು ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಇದರಿಂದ ರಾಜ್ಯದಲ್ಲಿ ಕೈಗಾರಿಕೆಗಳನ್ನು ಸ್ಥಾಪನೆ ಮಾಡುವುದು ಅತ್ಯಂತ ಸರಳವಾಗಿದೆ ಎಂದು ಅವರು ಹೇಳಿದರು.

ರಾಜ್ಯದಲ್ಲಿ ಸದ್ಯಕ್ಕೆ ಕೋವಿಡ್-19 ಸೋಂಕು ನಿಯಂತ್ರಣದಲ್ಲಿದೆ ಎಂದ ಉಪ ಮುಖ್ಯಮಂತ್ರಿ, ಇನ್ನೂ ಸರಕಾರದ ವಶದಲ್ಲಿರುವ ಒಟ್ಟು ಕೋವಿಡ್ ಹಾಸಿಗೆಗಳ ಪೈಕಿ ಶೇ.30ರಷ್ಟು ಖಾಲಿ ಇವೆ. ಈಗ ಬೇಡಿಕೆಗಿಂತ ನಮ್ಮಲ್ಲಿರುವ ಸೌಲಭ್ಯಗಳೇ ಹೆಚ್ಚಾಗಿವೆ. ಹೀಗಾಗಿ ಯಾವುದೇ ಆತಂಕವಿಲ್ಲ. ಜನರು ಧೈರ್ಯವಾಗಿರಬಹುದು ಎಂದು ಅವರು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com