ಬೆಂಗಳೂರು ಗಲಭೆ ಪ್ರಕರಣ: ಎನ್ಐಎ ತನಿಖೆ ಸಾಧ್ಯತೆ

ಆಗಸ್ಟ್ 11 ರಂದು ನಗರದ ಡಿಜೆ ಹಳ್ಳಿಯಲ್ಲಿ ಸಂಭವಿಸಿದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಷೇಧಿತ ಅಲ್-ಹಿಂದ್ ಭಯೋತ್ಪಾದನೆ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಎನ್ನಲಾದ ಆರೋಪಿ ಸೇರಿ ಇಬ್ಬರನ್ನು ಬೆಂಗಳೂರು ಪೊಲೀಸರು ಬಂಧನಕ್ಕೊಶಪಡಿಸಿದ್ದು, ಆರೋಪಿಗಳನ್ನು ಕೇಂದ್ರ ಅಪರಾಧ ವಿಭಾಗದ ಭಯೋತ್ಪಾದನಾ ನಿಗ್ರಹ ದಳ ಪೊಲೀಸರು ತೀವ್ರ ವಿಚಾರಣೆಗೊಳಪಡಿಸಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಆಗಸ್ಟ್ 11 ರಂದು ನಗರದ ಡಿಜೆ ಹಳ್ಳಿಯಲ್ಲಿ ಸಂಭವಿಸಿದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಷೇಧಿತ ಅಲ್-ಹಿಂದ್ ಭಯೋತ್ಪಾದನೆ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಎನ್ನಲಾದ ಆರೋಪಿ ಸೇರಿ ಇಬ್ಬರನ್ನು ಬೆಂಗಳೂರು ಪೊಲೀಸರು ಬಂಧನಕ್ಕೊಶಪಡಿಸಿದ್ದು, ಆರೋಪಿಗಳನ್ನು ಕೇಂದ್ರ ಅಪರಾಧ ವಿಭಾಗದ ಭಯೋತ್ಪಾದನಾ ನಿಗ್ರಹ ದಳ ಪೊಲೀಸರು ತೀವ್ರ ವಿಚಾರಣೆಗೊಳಪಡಿಸಿದ್ದಾರೆ. 

ನಿಷೇಧಿತ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದಾನೆಂದು ಹೇಳಲಾಗುತ್ತಿರುವ ಸಮಿಯುದ್ದೀನ್ ಹಾಗೂ ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಧ್ಯಕ್ಷ ವಾಜೀತ್ ಬಂಧಿತ ವ್ಯಕ್ತಿಗಳಾಗಿದ್ದಾರೆ. 

ಸಮಿಯುದ್ದೀನ್ ನನ್ನು ಕೇಂದ್ರ ಅಪರಾಧ ವಿಭಾಗದ ಭಯೋತ್ಪಾದನಾ ನಿಗ್ರಹ ದಳ ಪೊಲೀಸು ತೀವ್ರ ವಿಚಾರಣೆಗೊಳಪಡಿಸಿದ್ದಾರೆ.

ತಮಿಳುನಾಡಿನಲ್ಲಿ ಅಲ್-ಉಮ್ಮಾ ಸಂಘಟನೆಯ ಮತ್ತೊಂದು ರೂಪವಾಗಿ ಎರಡು ವರ್ಷಗಳ ಹಿಂದೆ ಅಲ್-ಹಿಂದ್ ಭಯೋತ್ಪಾದನಾ ಸಂಘಟನೆಯನ್ನು ಭಾರತದಲ್ಲಿ ಸ್ಥಾಪಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಈ ಭಯೋತ್ಪಾದನಾ ಸಂಘಟನೆ ಹಲವು ಸಂಚುಗಳನ್ನು ನಡೆಸುತ್ತಿದೆ. ಎನ್ಐಎ ಅಧಿಕಾರಿಗಳು ಈ ಸಂಘಟನೆಯ ತನಿಖೆ ನಡೆಸುತ್ತಿದ್ದಾರೆ. ಇಸಿಸ್ ಜಾಗತಿಕ ಭಯೋತ್ಪಾದಕ ಸಂಘಟನೆಗೆ ಈ ಅಲ್-ಹಿಂದ್ ಭಾರತದಲ್ಲಿ ಬೆಂಬಲವಾಗಿ ನಿಂತಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಮತ್ತಷ್ಟು ಆಳವಾಗಿ ತನಿಖೆ ಆರಂಭಿಸಿದ್ದು, ಬೆಂಗಳೂರಿನ ಗಲಭೆಗೆ ರಾಷ್ಟ್ರೀಯ ಅಥವಾ ಅಂತರಾಷ್ಟ್ರೀಯ ಮಟ್ಟದ ಸಂಬಂಧ ಇರಬಹುದೇ ಎಂಬುದರ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ. ಪ್ರಕರಣ ಸಂಬಂಧ ಎನ್ಐಎ ಕೂಡ ತನಿಖೆ ನಡೆಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com