ಚಾಮರಾಜನಗರ ಮಾಜಿ ಶಾಸಕ ಸಿ. ಗುರುಸ್ವಾಮಿ ಕೋವಿಡ್ ನಿಂದ ಸಾವು

ಚಾಮರಾಜನಗರ ಮಾಜಿ ಶಾಸಕ, ಬಿಜೆಪಿ ಧುರೀಣ ಸಿ ಗುರುಸ್ವಾಮಿ (68) ಕೋವಿಡ್ ನಿಂದಾಗಿ ಸಾವನ್ನಪ್ಪಿದ್ದಾರೆ. 
ಸಿ. ಗುರುಸ್ವಾಮಿ
ಸಿ. ಗುರುಸ್ವಾಮಿ

ಚಾಮರಾಜನಗರ: ಚಾಮರಾಜನಗರ ಮಾಜಿ ಶಾಸಕ, ಬಿಜೆಪಿ ಧುರೀಣ ಸಿ. ಗುರುಸ್ವಾಮಿ (68) ಕೋವಿಡ್ ನಿಂದಾಗಿ ಸಾವನ್ನಪ್ಪಿದ್ದಾರೆ. 

ಆಗಸ್ಟ್ 5 ರಂದು ಕೋವಿಡ್ ದೃಢಪಟ್ಟ ಹಿನ್ನೆಲೆ ಅವರು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಿಸದೆ ಬುಧವಾರ ಬೆಳಿಗ್ಗೆ ಮೃತರಾದರು

ಮೃತರಿಗೆ ಪತ್ನಿ, ಇಬ್ಬರು ಪುತ್ರಿಯರಿದ್ದಾರೆ. 

ವಕೀಲರಾಗಿದ್ದ ಸಿ. ಗುರುಸ್ವಾಮಿಯವರು ಜನತಾ ಪಕ್ಷ, ಜನತಾದಳದಿಂದ ರಾಜಕೀಯ ಪ್ರವೇಶಿಸಿದ್ದು ಮೈಸೂರು  ಜಿಲ್ಲಾ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದ ಗುರುಸ್ವಾಮಿ ಹಿರಿಯ ರಾಜಕೀಯ ನಾಯಕ, ಕೇಂದ್ರದ ಮಾಜಿ ಸಚಿವ ರಾಜಶೇಖರಮೂರ್ತಿಯವರ ಶಿಷ್ಯರಾಗಿದ್ದರು. ರಾಜಶೇಖರ ಮೂರ್ತಿಯವರು ಬಿಜೆಪಿ ಸೇರಿದ ಸಂದರ್ಭದಲ್ಲಿ ಅವರನ್ನು ಅನುಸರಿಸಿ ಗುರುಸ್ವಾಮಿ ಸಹ ಬಿಜೆಪಿ ಸೇರಿದರು.

1999ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಚಾಮರಾಜನಗರ ಕ್ಷೇತ್ರದಿಂದ ಜಯಗಳಿಸಿದ್ದರು. 1999-2004 ಎರಡು ಅವಧಿಯಲ್ಲಿ ಶಾಸಕರಾಗಿದ್ದ ಗುರುಸ್ವಾಮಿ ಬಳಿಕ ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರಿದ್ದರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕೆಲ ಸಮಯ ಸೇವೆ ಸಲ್ಲಿಸಿದ್ದ ಅವರು ಮತ್ತೆ ಬಿಜೆಪಿಗೆ ಸೇರ್ಪಡೆಯಾಗಿ ಜಿಲ್ಲೆಯ ಪ್ರಭಾವಿ ಬಿಜೆಪಿ ಮುಖಂಡರಾಗಿ ಗುರುತಿಸಿಕೊಂಡಿದ್ದರು,

ಗುರುಸ್ವಾಮಿಯವರ ಅಂತ್ಯಕ್ರಿಯೆ ಅವರ ಸ್ವಗ್ರಾಮ ಯಾನಗಹಳ್ಳಿಯ ತೋಟದಲ್ಲಿ ಕೋವಿಡ್ ಶಿಷ್ಟಾಚಾರ ದಂತೆ ನಡೆಯಲಿದೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com