ಕೊರೋನಾ ಕರ್ತವ್ಯದಿಂದ ಮುಖ್ಯಶಿಕ್ಷಕರ ಕೈಬಿಟ್ಟ ಸರ್ಕಾರ!

ಕೊರೋನಾ ಕರ್ತವ್ಯದಿಂದ ಶಾಲಾ ಮುಖ್ಯೋಪಾಧ್ಯಾಯರ ಕೈಬಿಡುವಂತೆ ಅಧಿಕಾರಿಗಳಿಗೆ ಸಚಿವ ಸುರೇಶ್ ಕುಮಾರ್ ಅವರು ಸೂಚಿಸಿದ್ದಾರೆ.
ಸಚಿವ ಸುರೇಶ್ ಕುಮಾರ್
ಸಚಿವ ಸುರೇಶ್ ಕುಮಾರ್

ಬೆಂಗಳೂರು: ಕೊರೋನಾ ಕರ್ತವ್ಯದಿಂದ ಶಾಲಾ ಮುಖ್ಯೋಪಾಧ್ಯಾಯರ ಕೈಬಿಡುವಂತೆ ಅಧಿಕಾರಿಗಳಿಗೆ ಸಚಿವ ಸುರೇಶ್ ಕುಮಾರ್ ಅವರು ಸೂಚಿಸಿದ್ದಾರೆ.

ಈ ಸಂಬಂಧ ಆಯುಕ್ತರಿಗೆ ಪತ್ರ ಬರೆದಿರುವ ಸುರೇಶ್ ಕುಮಾರ್ ಅವರು, ಕೋವಿಡ್ ಸಂದರ್ಭದಲ್ಲಿ ಸರ್ಕಾರಿ ಶಾಲಾ ಶಿಕ್ಷಕರು ಹಾಗೂ ಮುಖ್ಯೋಪಾಧ್ಯಾಯರುಗಳನ್ನು ತುರ್ತು ಸೇವೆಗೆ ಬಳಸಿಕೊಳ್ಳಲಾಗಿದೆ. ಶೈಕ್ಷಣಿಕ ಚಟುವಟಿಕೆಗಳಿಗೆ ಶಾಲೆಗಳಲ್ಲಿ ಶಿಕ್ಷಕರ, ವಿಶೇಷವಾಗಿ ಮುಖ್ಯ ಶಿಕ್ಷಕರ ಅಲಭ್ಯತೆಯ ಹಿನ್ನೆಲೆಯಲ್ಲಿ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ತಿಳಿಸಿದ್ದಾರೆ. 

ವಿದ್ಯಾರ್ಥಿಗಳ ಕಲಿಕೆಯನ್ನು ಮುಂದವರೆಸುವ ದೂರದೃಷ್ಟಿ ಯೋಜನೆಯಾದ ವಿದ್ಯಾಗಮನ ಅನುಷ್ಠಾನ, ಮಧ್ಯಾಹ್ನ ಉಪಹಾರ ಯೋಜನೆಯ ಅನುಷ್ಠಾನವು ಸಮರ್ಪಕವಾಗಬೇಕಾದಲ್ಲಿ ಶಾಲೆಗಳಲ್ಲಿ ಕನಿಷ್ಠ ಪಕ್ಷ ಮುಖ್ಯೋಪಾಧ್ಯಾಯರು ಲಭ್ಯವಿರಬೇಕಾದ ಅವಶ್ಯಕತವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ಹಾಗೂ ಅನುದಾನಿಕ ಶಾಲೆಗಳ ಮುಖ್ಯ ಶಿಕ್ಷಕರುಗಳಿಗೆ ಕೋವಿಡ್ ಜವಾಬ್ದಾರಿಯಿಂದ ಮುಕ್ತಗೊಳಿಸುವಲ್ಲಿ ಅವಶ್ಯಕ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಪತ್ರದಲ್ಲಿ ತಿಳಿಸಿದ್ದಾರೆಂದು ತಿಳಿದುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com