ಬೆಂಗಳೂರು ಗಲಭೆ ಪ್ರಕರಣ: ಕ್ಲೇಮ್ ಕಮಿಷನರ್ ನೇಮಕ ಮಾಡುವಂತೆ ಹೈಕೋರ್ಟ್'ಗೆ ರಾಜ್ಯ ಸರ್ಕಾರ ಮನವಿ

ಆಗಸ್ಟ್ 11 ರಂದು ನಗರದ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಗಲಭೆಯಲ್ಲಿ ಉಂಟಾಗಿದ್ದ ಸಾರ್ವಜನಿಕ ಆಸ್ತಿ-ಪಾಸ್ತಿ ನಷ್ಟದ ಅಂದಾಜು ಮಾಡಿ ಹೊಣೆಗಾರಿಕೆ ನಿಗದಿಪಡಿಸಲು ಕ್ಲೇಮ್ ಕಮಿಷನರ್ ನೇಮಕ ಮಾಡುವಂತೆ ರಾಜ್ಯ ಸರ್ಕಾರ ಹೈಕೋರ್ಟ್'ಗೆ ಮನವಿ ಸಲ್ಲಿಸಿದೆ. 

Published: 20th August 2020 08:11 AM  |   Last Updated: 20th August 2020 08:11 AM   |  A+A-


File photo

ಸಂಗ್ರಹ ಚಿತ್ರ

Posted By : Manjula VN
Source : The New Indian Express

ಬೆಂಗಳೂರು: ಆಗಸ್ಟ್ 11 ರಂದು ನಗರದ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಗಲಭೆಯಲ್ಲಿ ಉಂಟಾಗಿದ್ದ ಸಾರ್ವಜನಿಕ ಆಸ್ತಿ-ಪಾಸ್ತಿ ನಷ್ಟದ ಅಂದಾಜು ಮಾಡಿ ಹೊಣೆಗಾರಿಕೆ ನಿಗದಿಪಡಿಸಲು ಕ್ಲೇಮ್ ಕಮಿಷನರ್ ನೇಮಕ ಮಾಡುವಂತೆ ರಾಜ್ಯ ಸರ್ಕಾರ ಹೈಕೋರ್ಟ್'ಗೆ ಮನವಿ ಸಲ್ಲಿಸಿದೆ. 

ಸರ್ಕಾರದ ಹೆಚ್ಚುವರಿ ಅಡ್ವೋಕೇಟ್ ಜನರಲ್ ಧ್ಯಾನ್ ಚಿನ್ನಪ್ಪ, ಬುಧವಾರ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ಸರ್ಕಾರದ ಪರ ತ್ವರಿತ ಅರ್ಜಿಸಲ್ಲಿಸಿ ಕ್ಲೇಮ್ ಕಮಿಷನರ್ ನೇಮಕ ಮಾಡುವಂತೆ ಮನವಿ ಮಾಡಿದರು. 

ವಿಚಾರಣೆ ನಡೆಸಿದ ನ್ಯಾಯಪೀಠ, ಕನ್ನಡ ಚಳವಳಿ ಪಕ್ಷದ ವಾಟಾಳ್ ನಾಗರಾಜ್ ಕರೆ ನೀಡಿದ್ದ ಬಂದ್ ವೇಳೆ ಹಾಗೂಮಾಜಿ ಸಚಿವ ಡಿಕೆ.ಶಿವಕುಮಾರ್ ಬಂಧನ ಖಂಡಿಸಿ ನಡೆಸಲಾದ ಬಂದ್ ಸಂದರ್ಭದಲ್ಲಿ ಉಂಟಾದ ನಷ್ಟದ ಅಂದಾಜಿಗೆ ಕ್ಲೇಮ್ ಕಮಿಷನರ್ ನೇಮಕ ಮಾಡಿದ್ದ ಆದೇಶವನ್ನು ಹಾಜರುಪಡಿಸಲು ಸೂಚನೆ ನೀಡಿ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿತು. 

ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆಯಲ್ಲಿ 80ಕ್ಕೂ ಪೊಲೀಸರು ಗಾಯಗೊಂಡಿದ್ದಾರೆ. ಎರಡು ಪೊಲೀಸ್ ಠಾಣೆಗಳಿಗೆ ಹಾನಿಯುಂಟು ಮಾಡಲಾಗಿದೆತ ಸಾಕಷ್ಟು ಪ್ರಮಾಣದಲ್ಲಿ ಸಾರ್ವಜನಿಕ ಮತ್ತು ಖಾಸಗಿ ಆಸ್ತಿಗಳಿಗೆ ಹಾನಿ ಮಾಡಲಾ8ಗಿದೆ. ಪೊಲೀಸ್ ವಾಹನಗಳು ಸೇರಿದಂತೆ ನೂರಾರು ವಾಹನಗಳನ್ನು ಸುಟ್ಟು ಹಾಕಲಾಗಿದೆ. ಈ ಸಂಬಂಧ ಈವರೆಗೂ 65ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳಉ ದಾಖಲಾಗಿವೆ. ಸುಪ್ರೀಂಕೋರ್ಟ್ ನಿರ್ದೇಶನದಂತೆ ನಷ್ಟದ ಅಂದಾಜು ಮಾಡಿ , ಹೊಣೆಗಾರಿಕೆ ನಿಗದಿಪಡಿಸಿ, ನಷ್ಟ ಅನುಭವಿಸಿದವರಿಗೆ ಪರಿಹಾರ ದೊರಕಿಸಲು ಕ್ಲೇಮ್ ಕಮಿಷನರ್ ನೇಮಕ ಮಾಡುವಂತೆ ಅರ್ಜಿಯಲ್ಲಿ ಮನವಿ ಮಾಡಲಾಗಿದೆ. 

Stay up to date on all the latest ರಾಜ್ಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp