ನಂಜನಗೂಡು ತಾಲೂಕು ಆರೋಗ್ಯಾಧಿಕಾರಿ ನೇಣಿಗೆ ಶರಣು: ಕೊರೋನಾ ವಾರಿಯರ್ಸ್ ಗೆ ಸಚಿವ ಸುಧಾಕರ್ ವಿಶೇಷ ಮನವಿ

ಮೈಸೂರಿನಲ್ಲಿ ಕೊರೋನಾ ವಾರಿಯರ್ ಆಗಿದ್ದ ನಂಜನಗೂಡು  ತಾಲೂಕು ಆರೋಗ್ಯಾಧಿಕಾರಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಸಚಿವ ಡಾ. ಕೆ. ಸುಧಾಕರ್ ರಾಜ್ಯದ ಕೊರೋನಾ ವಾರಿಯರ್ಸ್ ಗಳಲ್ಲಿ ವಿಶೇಷ ಮನವಿ ಮಾಡಿಕೊಂಡಿದ್ದಾರೆ.

Published: 20th August 2020 04:49 PM  |   Last Updated: 20th August 2020 04:49 PM   |  A+A-


Posted By : raghavendra
Source : Online Desk

ನಂಜನಗೂಡು: ಮೈಸೂರಿನಲ್ಲಿ ಕೊರೋನಾ ವಾರಿಯರ್ ಆಗಿದ್ದ ನಂಜನಗೂಡು  ತಾಲೂಕು ಆರೋಗ್ಯಾಧಿಕಾರಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಸಚಿವ ಡಾ. ಕೆ. ಸುಧಾಕರ್ ರಾಜ್ಯದ ಕೊರೋನಾ ವಾರಿಯರ್ಸ್ ಗಳಲ್ಲಿ ವಿಶೇಷ ಮನವಿ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೆ ಶರಣಾಗಿರುವ ಆರೋಗ್ಯಾಧಿಕಾರಿಯನ್ನು ನಾಗೇಂದ್ರ ಎಂದು ಗುರುತಿಸಲಾಗಿದ್ದು ಇವರೌ ನಂಜನಗೂಡಿನಲ್ಲಿ 1 ವರ್ಷದಿಂದ ತಾಲೂಕು ಆರೋಗ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. 

ಕೊರೋನಾ ಕಾಲಘಟ್ಟದ ಈ ಸಮಯದಲ್ಲಿ ಕೆಲಸದ ಒತ್ತಡ ತಾಳಲಾಗದೆ ನಾಗೇಂದ್ರ ಆತ್ಮಹತ್ಯೆಗೆ ಶರಣಾದರೆಂದು ಹೇಳಲಾಗಿದೆ. 

ಸಚಿವ ಸುಧಾಕರ್ ಮನವಿ

ನಾಗೇಂದ್ರ ಅವರ ಆತ್ಮಹತ್ಯೆಯ ಸಂಬಂಧ ಸಚಿವ ಡಾ. ಕೆ. ಸುಧಾಕರ್ ರಾಜ್ಯದ ಕೊರೋನಾ ವಾರಿಯರ್ಸ್ ಗಳಲ್ಲಿ ವಿಶೇಷ ಮನವಿ ಮಾಡಿಕೊಂಡಿದ್ದಾರೆ.

"ಮೈಸೂರಿನ ನಂಜನಗೂಡು ತಾ,ಕೋವಿಡ್‌ ವಾರಿಯರ್‌ ಆರೋಗ್ಯಾಧಿಕಾರಿ ನಾಗೇಂದ್ರ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ತಿಳಿಯಿತು. ಅವರ ಸಾವು ನನಗೆ ಅತ್ಯಂತ ಬೇಸರ ತಂದಿದೆ. ಪ್ರೀತಿಯ ಕೊರೊನಾ ವಾರಿಯರ್ಸ್‌ಗಳಿಗೆ ನನ್ನದೊಂದು ಮನವಿ. ನಿಮಗೆ ಎಷ್ಟೇ ಒತ್ತಡಗಳಿದ್ದರೂ ನಿಮ್ಮ ಮೇಲಾಧಿಕಾರಿಗಳ ಜೊತೆ ಹೇಳಿಕೊಳ್ಳಿ. ನಿಮ್ಮಕಷ್ಟಗಳಿಗೆ ಸರ್ಕಾರ ಯಾವತ್ತೂಜೊತೆಗಿದೆ.

"ನಾಗೇಂದ್ರ ಸಾವಿನ ನೋವು ಒಬ್ಬ ವೈದ್ಯನಾಗಿ ನನಗೂ  ಅರ್ಥವಾಗುತ್ತದೆ. ಶಾಂತಿ ಕಾಪಾಡಿ. ಕೋವಿಡ್‌ ಸಂಕಷ್ಟ ಕಾಲದಲ್ಲಿ ಸಂಯಮದಿಂದ ವರ್ತಿಸಿ. ನಾಗೇಂದ್ರ ಜನಪರ ಅಧಿಕಾರಿ,ಸಹೃದಯಿ, ಅತ್ಯಂತ ಸೂಕ್ಷ್ಮ ಸ್ವಭಾವದವರು ಎಂದು ತಿಳಿಯಿತು. ಅವರ ಸಾವಿನ ತನಿಖೆಗೆ ಆದೇಶಿಸಿದ್ದೇನೆ. ಅವರ ಕುಟುಂಬಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ

"ಮೈಸೂರು ಜಿಲ್ಲೆಯ ಉಸ್ತುವಾರಿ ಸಚಿವರಾದ ಶ್ರೀ  ಎಸ್ ಟಿ  ಸೋಮಶೇಖರ್ ರವರ ಜೊತೆ ನಿರಂತರವಾಗಿ ಸಂಪರ್ಕದಲ್ಲಿದ್ದು  ಮುಂದಿನ ಸೂಕ್ತ ಕ್ರಮಗಳ ಬಗ್ಗೆ ಚರ್ಚೆಮಾಡುತ್ತಿದ್ದೀವಿ.

"ಕೋವಿಡ್‌ ನಿಯಂತ್ರಿಸುವಲ್ಲಿ ಬಿಡುವಿಲ್ಲದೇ ಹಗಲಿರುಳು ಶ್ರಮಿಸುತ್ತಿರುವ ನಮ್ಮ ಎಲ್ಲಾ ಕೋವಿಡ್‌ ವಾರಿಯರ್ಸ್‌ಗಳಿಗೆ ನಾನು ಈ ಮೂಲಕ ತಿಳಿಸುವುದೇನಂದರೆ ಅಧಿಕ ಕೆಲಸದಿಂದ ನೀವು ಒತ್ತಡ, ಮಾನಸೀಕ ಖಿನ್ನತೆಗೆ ಒಳಗಾಗುತ್ತಿರುವು ನಮ್ಮ ಸರ್ಕಾರದ ಗಮನಕ್ಕೆ ಬಂದಿದೆ. ಸರ್ಕಾರದ ಪರವಾಗಿ ಭರವಸೆ ಕೊಡುತ್ತಿದ್ದೇನೆ

"ರಾಜ್ಯದ ಎಲ್ಲಾ ಭಾಗದ ವೈದ್ಯರುಗಳಿಗೆ, ಕೊರೊನಾ ಯೋಧರಿಗೆ ನೈತಿಕ  ಸ್ಫೂರ್ತಿಯನ್ನು ಮುಂದಿನ ದಿನಗಳಲ್ಲಿ ನಿಮ್ಮ ಒತ್ತಡಗಳನ್ನು ನಿಯಂತ್ರಿಸಲು ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ಬಿಡುವಿಲ್ಲದೇ ಕೆಲಸ ಮಾಡುತ್ತಿರುವ ನಿಮಗೆ ರಜೆ, ಒತ್ತಡ ಸಡಿಲ ಮಾಡಲು ಎಲ್ಲಾ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ." ಸಚಿವರು ಸರಣಿ ಟ್ವೀಟ್ ಮೂಲಕ ಹೇಳಿದ್ದಾರೆ.

ಅಲ್ಲದೆ "ನಾಗೇಂದ್ರ ಅವರ ಸಾವಿನಲ್ಲಿ ಗೊಂದಲ ಸೃಷ್ಟಿಮಾಡುವುದು ಅಮಾನವೀಯವಾಗುತ್ತದೆ. ವೈದ್ಯಕೀಯ ಸಂಘದ ಎಲ್ಲಾ ಆತ್ಮೀಯರಿಗೆ ಮನವಿ ಮಾಡುವುದೇನೆಂದರೆ ನಾಗೇಂದ್ರ ಅವರ ಅಂತ್ಯ ಸಂಸ್ಕಾರವನ್ನು ನೆರವೇರಿಸುವ ಆದ್ಯತೆ ಕೊಡಿ. ಅವರ ಕುಟುಂಬ ವರ್ಗದವರಿಗೆ ಮುಖ್ಯ ಮಂತ್ರಿ ಬಿಎಸ್‌ವೈ ಜೊತೆ ಚರ್ಚೆಸಿ ನ್ಯಾಯ ಕೊಡಿಸುತ್ತೇವೆ.

"ನಾಗೇಂದ್ರ ಅವರು ಆತ್ಮಹತ್ಯೆ ಮಾಡಿಕೊಂಡಿದ್ದು ಅವರ ಪ್ರಾಣವನ್ನು ಹಿಂದಿರುಗಿ ತರಲು ಸಾಧ್ಯವಿಲ್ಲವೆಂದು ಗೊತ್ತಿದೆ. ಆದರೆ ಅವರ ಕುಟುಂಬದ ಸದಸ್ಯರಿಗೆ ಶಾಶ್ವತವಾದ ಪರಿಹಾರವನ್ನು ಸರ್ಕಾರ ಖಂಡಿತವಾಗಿಯೂ ಮಾಡುತ್ತದೆ. ಎಲ್ಲಾ ಕೋವಿಡ್‌ ಯೋಧರ ಜೊತೆ ಸರ್ಕಾರ ಇದೆ ಎಂದು ಹೇಳಲು ಇಚ್ಛಿಸುತ್ತೇನೆ

 

 

"ಯಾರೂ ಕೂಡಾ ನಾಗೇಂದ್ರ ಅವರ ಸಾವನ್ನು  ಅನ್ಯ ಕಾರಣಗಳಿಗೆ ದುರ್ಬಳಕೆ ಮಾಡಬಾರದು ಎಂದು ಕಳಕಳಿಯ ಮನವಿ ಮಾಡುತ್ತಿದ್ದೇನೆ. ಈಗಾಗಲೇ ವೈದ್ಯಾಧಿಕಾರಿಗಳ ಸಂಘದ ಪದಾಧಿಕಾರಿಗಳ ಜೊತೆ ಸಭೆ ಕರೆದಿದ್ದೇನೆ. ಕೋವಿಡ್‌ ಯೋಧರ ನೆರವಿಗೆ ನಮ್ಮ ಸರ್ಕಾರ ಜೊತೆಗಿದೆ. ಇನ್ಮುಂದೆ ಇಂತಹ ಘಟನೆಗಳು ನಡೆಯದಂತೆ ಮತ್ತಷ್ಟು ಸೂಕ್ತ ಕ್ರಮಗಳು ಕೈಗೊಳ್ಳಲಾಗುವುದು." ಎಂದು ಸಚಿವರು ಭರವಸೆ ನೀಡಿದ್ದಾರೆ. 

 

 


Stay up to date on all the latest ರಾಜ್ಯ news
Poll
Yediyurappa

ಯಡಿಯೂರಪ್ಪ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ತಮ್ಮ ಅವಧಿಯನ್ನು ಪೂರ್ಣಗೊಳಿಸಲು ಸಾಧ್ಯವಾಗುವುದೇ?


Result
ಹೌದು
ಇಲ್ಲ
flipboard facebook twitter whatsapp