ಅತಿವೃಷ್ಟಿ ಮತ್ತು ಪ್ರವಾಹ ಹಾನಿಗೆ ಕೇಂದ್ರದಿಂದ ಮುಂಗಡ 395 ಕೋಟಿ ರೂ. ಬಿಡುಗಡೆ: ಆರ್.ಅಶೋಕ್

ಅತಿವೃಷ್ಟಿ ಮತ್ತು ಪ್ರವಾಹ ಹಾನಿಗೆ ಕೇಂದ್ರ ಸರ್ಕಾರ ಮುಂಗಡ 395 ಕೋಟಿ ರೂ. ಬಿಡುಗಡೆ ಮಾಡಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.
ಆರ್ ಅಶೋಕ್
ಆರ್ ಅಶೋಕ್

ಬೆಂಗಳೂರು: ಅತಿವೃಷ್ಟಿ ಮತ್ತು ಪ್ರವಾಹ ಹಾನಿಗೆ ಕೇಂದ್ರ ಸರ್ಕಾರ ಮುಂಗಡ 395 ಕೋಟಿ ರೂ. ಬಿಡುಗಡೆ ಮಾಡಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.

ರಾಜ್ಯದಲ್ಲಿ ಅತಿವೃಷ್ಟಿಯಿಂದ ಉಂಟಾದ ಹಾನಿಗೆ ಕೂಡಲೇ ಹಣ ಬಿಡುಗಡೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದ್ದೆವು. ಅದರಂತೆ ರಾಜ್ಯದ ಮನವಿಗೆ ಕೂಡಲೇ ಸ್ಪಂದಿಸಿದ ಕೇಂದ್ರ ಸರ್ಕಾರ, ಎಸ್ ಡಿಆರ್ ಎಫ್ ಅಡಿ  ₹395.5 ಕೋಟಿ ಹಣವನ್ನು ಈಗ ಮುಂಗಡವಾಗಿ ಬಿಡು ಗಡೆ ಮಾಡಿರುವುದು ಸಂತಸ ತಂದಿದೆ ಎಂದು ಆರ್.ಅಶೋಕ್ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿದ ಅವರು, ಇತ್ತೀಚಗೆ ರಾಜ್ಯದಲ್ಲಿ ಮಳೆ ಹಾಗೂ ಪ್ರವಾಹದಿಂದ  ಹಾನಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಜ್ಯ ಸರ್ಕಾರ ಮನವಿ ಮಾಡಿತ್ತು. ಇತ್ತೀಚಗೆ ವಿಡಿಯೋ ಕಾನ್ಫರೆನ್ ಮೂಲಕ ರಾಜ್ಯದಲ್ಲಿ ಮಳೆ ಹಾನಿ ಬಗ್ಗೆ ತುರ್ತಾಗಿ 4000 ಕೋಟಿ ರೂ. ಮುಂಗಡ ಹಣ ನೀಡುವಂತೆ ಮನವಿ ಮಾಡಿದ್ದರು. ನಾಲ್ಕು ಸಾವಿರ ಕೋಟಿ ರೂ ನಷ್ಟ ಸಂಭವಿಸಿದೆ ಎಂದು ಕೇಂದ್ರಕ್ಕೆ ಮನವಿ ಮಾಡಿದ್ದರು.

ಎಸ್ ಡಿಆರ್ ಎಫ್ ಅಡಿಯಲ್ಲಿ ಮುಂಗಡ 395 ಕೋಟಿ ರೂ ಬಿಡುಗಡೆ ಮಾಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗು ಕೇಂದ್ರ ಗೃಹ ಸಚಿವ ಅಮಿತ್ ಷಾಗೆ ರಾಜ್ಯದ ಜನತೆಯ ಪರವಾಗಿ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com