ಎ.ಐ ತಂತ್ರಜ್ಞಾನ ಆಧಾರಿತ ಹೆಲ್ತ್ ಪಾಡ್ ಗೆ ಸಚಿವ ಡಾ.ಕೆ.ಸುಧಾಕರ್ ಚಾಲನೆ

ವೆವ್ರ ಸಂಸ್ಥೆ ಮತ್ತು ಪೋರ್ಚುಗೀಸ್ ನ ಇನೋವೇವ್ ಗ್ರೂಪ್ ಸಹಯೋಗದಲ್ಲಿ ಆರಂಭಿಸಿರುವ  ಹೆಲ್ತ್ ಕೇರ್ ಪಾಡ್ ಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಚಾಲನೆ ನೀಡಿದರು.

Published: 21st August 2020 05:33 PM  |   Last Updated: 21st August 2020 05:33 PM   |  A+A-


Medical Education Minister Dr.K.Sudhakar

ಎ.ಐ ತಂತ್ರಜ್ಞಾನ ಆಧಾರಿತ ಹೆಲ್ತ್ ಪಾಡ್ ಗೆ ಸಚಿವ ಡಾ.ಕೆ.ಸುಧಾಕರ್ ಚಾಲನೆ

Posted By : Srinivas Rao BV
Source : Online Desk

ಬೆಂಗಳೂರು: ವೆವ್ರ ಸಂಸ್ಥೆ ಮತ್ತು ಪೋರ್ಚುಗೀಸ್ ನ ಇನೋವೇವ್ ಗ್ರೂಪ್ ಸಹಯೋಗದಲ್ಲಿ ಆರಂಭಿಸಿರುವ ಹೆಲ್ತ್ ಕೇರ್ ಪಾಡ್ ಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಚಾಲನೆ ನೀಡಿದರು.

ನಗರದಲ್ಲಿ ಆನ್ ಲೈನ್ ಮೂಲಕ ನಡೆದ ಕಾರ್ಯಕ್ರಮದಲ್ಲಿ ಸಚಿವ ಡಾ.ಕೆ.ಸುಧಾಕರ್ ಅವರು ಪಾಲ್ಗೊಂಡು ವೆವ್ರ ಪಾಡ್ ಸೌಲಭ್ಯವನ್ನು ಉದ್ಘಾಟಿಸಿದರು.

ನಂತರ ಮಾತನಾಡಿದ ಸಚಿವರು, "ಈ ಪಾಡ್ ಗಳು ಚಲಿಸುವ ಆಸ್ಪತ್ರೆಯಂತಿದ್ದು, ಎಲ್ಲಿ ಬೇಕಾದರೂ ಅಳವಡಿಸಬಹುದಾಗಿದೆ. ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಒಳಗೊಂಡಿರುವ ಈ ವ್ಯವಸ್ಥೆಯಿಂದ ರೋಗ ಹರಡುವಿಕೆಯನ್ನು ತಡೆಗಟ್ಟಬಹುದಾಗಿದೆ. ಕೃತಕ ಬುದ್ಧಿಮತ್ತೆ ತಂತ್ರಜ್ಞಾನದಿಂದ ಆರೋಗ್ಯ ಕ್ಷೇತ್ರದಲ್ಲಿ ದೊಡ್ಡ ಸುಧಾರಣೆಯನ್ನೇ ತರಬಹುದು. ತಂತ್ರಜ್ಞಾನ ಕ್ಷೇತ್ರದ ನವೋದ್ಯಮಗಳು ಆಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಂಡು ಕಡಿಮೆ ವೆಚ್ಚದಲ್ಲಿ ಜನರಿಗೆ ಸೌಲಭ್ಯಗಳನ್ನು ಮಾಡಿಕೊಡುವ ಪ್ರಯತ್ನ ಮಾಡಬೇಕು" ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್, ಎಂಸಿಐ ಸದಸ್ಯ ಡಾ.ವಿವೇಕ್ ಜವಳಿ ಪಾಲ್ಗೊಂಡಿದ್ದರು. ಒಂದು ಪಾಡ್ ನಲ್ಲಿ 4 ರಿಂದ 9 ಹಾಸಿಗೆಗಳಿರುತ್ತವೆ. ಈ ಪಾಡ್ ಗಳನ್ನು ಅಳವಡಿಸಲು 500 ಚದರ ಅಡಿ ಜಾಗ ಬೇಕಾಗುತ್ತದೆ. ಇವುಗಳನ್ನು ಆಸ್ಪತ್ರೆ, ಪಾರ್ಕಿಂಗ್ ಅಥವಾ ಯಾವುದೇ ಸುರಕ್ಷಿತವಾದ ಜಾಗದಲ್ಲಿ ಅಳವಡಿಸಬಹುದು.

Stay up to date on all the latest ರಾಜ್ಯ news
Poll
Union Finance Minister Nirmala Sitharaman along with BJP General Secretary Bhupendra Yadav and state party President Sanjay Jaiswal releases party manifesto

ಬಿಹಾರ ಚುನಾವಣೆ: ಎಲ್ಲರಿಗೂ ಉಚಿತ ಕೋವಿಡ್ ಲಸಿಕೆ ನೀಡುವ ಬಿಜೆಪಿಯ ಪ್ರಣಾಳಿಕೆ ನೀತಿಗೆ ವಿರುದ್ಧವೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp