ಕೆಪಿಎಸ್ ಸಿ ಪರೀಕ್ಷೆ ಮುಂದೂಡುವಂತೆ ಯಡಿಯೂರಪ್ಪಗೆ ಪ್ರಿಯಾಂಕ್ ಖರ್ಗೆ ಪತ್ರ 

ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಸಂದರ್ಭದಲ್ಲಿ ಕೆಪಿಎಸ್‍ಸಿ 2017-18 ನೇ ಸಾಲಿನ 106 ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆ ನಡೆಸಲು ಮುಂದಾಗಿರುವುದರಿಂದ ಅಭ್ಯರ್ಥಿಗಳು ಆತಂಕಕ್ಕೆ ಒಳಗಾಗಿದ್ದು, ಸರ್ಕಾರ ಪರೀಕ್ಷೆಯನ್ನು ಮುಂದೂಡಬೇಕೆಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹಿಸಿದ್ದಾರೆ.
ಪ್ರಿಯಾಂಕ್ ಖರ್ಗೆ
ಪ್ರಿಯಾಂಕ್ ಖರ್ಗೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಸಂದರ್ಭದಲ್ಲಿ ಕೆಪಿಎಸ್‍ಸಿ 2017-18 ನೇ ಸಾಲಿನ 106 ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆ ನಡೆಸಲು ಮುಂದಾಗಿರುವುದರಿಂದ ಅಭ್ಯರ್ಥಿಗಳು ಆತಂಕಕ್ಕೆ ಒಳಗಾಗಿದ್ದು, ಸರ್ಕಾರ ಪರೀಕ್ಷೆಯನ್ನು ಮುಂದೂಡಬೇಕೆಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹಿಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಪತ್ರ ಬರೆದಿರುವ ಪ್ರಿಯಾಂಕ ಖರ್ಗೆ ಕೆಪಿಎಸ್‍ಸಿ ಆಗಸ್ಟ್ 24 ರಂದು ಪೂರ್ವಭಾವಿ ಪರೀಕ್ಷೆ ನಡೆಸಲು ತೀರ್ಮಾನಿಸಿರುವುದರಿಂದ ಈಗಾಗಲೇ ಅಭ್ಯರ್ಥಿಗಳು ಕೊರೊನಾ ಸೋಂಕಿಗೆ ಒಳಗಾದವರು ಹಾಗೂ ಸೋಂಕಿನ ಲಕ್ಷಣ ಹೊಂದಿರುವವರು ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. 

ಪರೀಕ್ಷೆಗೆ ಹಾಜರಾಗುವ ಮುನ್ನ ಸರ್ಕಾರ ಅಭ್ಯರ್ಥಿಗಳಿಗೆ ಕೊರೊನಾ ಟೆಸ್ಟ್ ಮಾಡಲು ನಿರ್ಧರಿಸಿದ್ದು, ಒಂದು ವೇಳೆ ದೃಢಪಟ್ಟ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲು ಅವಕಾಶ ದೊರೆಯುತ್ತದೆಯೇ ಅಥವಾ ಅವರು ಹಾಜರಾಗದಿದ್ದರೆ ಮತ್ತೆ ಪರೀಕ್ಷೆ  ಬರೆಯಲು ಅವಕಾಶ ಕೊಡಲಾಗುತ್ತದೆಯೇ ಎನ್ನುವುದರ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲದಿರುವುದರಿಂದ ಅಭ್ಯರ್ಥಿಗಳು ಗೊಂದಲಕ್ಕೆ ಒಳಗಾಗಿದ್ದಾರೆ.

ಉದ್ಯೋಗಕ್ಕಾಗಿ ವರ್ಷಗಟ್ಟಲೆ ಕಾದು ಕಷ್ಟ ಪಟ್ಟು ಓದಿರುವ ಅಭ್ಯರ್ಥಿಗಳ ಮುಂದಿನ ಭವಿಷ್ಯದ ಬಗ್ಗೆ ಕಿಂಚಿತ್ತೂ ಯೋಚನೆ ಮಾಡದೇ ಪರೀಕ್ಷೆ ನಡೆಸಲು ತೀರ್ಮಾನ ತೆಗೆದುಕೊಳ್ಳಲಾಗಿದೆ.ಇಂತಹ ಸಂದರ್ಭದಲ್ಲಿ ಪೂರ್ವಭಾವಿ ಪರೀಕ್ಷೆ ನಡೆಸಲುತೀರ್ಮಾನಿಸಿರುವುದರ ಹಿಂದೆ ಸರ್ಕಾರದ ಬೇಜವಾಬ್ದಾರಿ ತನ ಎದ್ದು ಕಾಣುತ್ತಿದೆ. ಅಭ್ಯರ್ಥಿಗಳ ಭವಿಷ್ಯದ ದೃಷ್ಟಿಯಿಂದ ಸರ್ಕಾರ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡುವಂತೆ ಪ್ರಿಯಾಂಕ್ ಖರ್ಗೆ ಆಗ್ರಹಿಸಿದ್ದಾರೆ.    

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com