ರಾಜ್ಯದ ಪ್ರಗತಿಯ ಹಾದಿಯಲ್ಲಿ ಇರುವ ಕಂಟಕ ದೂರಮಾಡಲಿ; ಗಣೇಶ ಚತುರ್ಥಿಗೆ ಶುಭಕೋರಿದ ಮುಖ್ಯಮಂತ್ರಿ

ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಅನೇಕ ಗಣ್ಯರು ನಾಡಿನ ಸಮಸ್ತ ಜನತೆಗೆ ಶುಭಾಶಯ ಕೋರಿದ್ದಾರೆ.

Published: 22nd August 2020 08:40 AM  |   Last Updated: 22nd August 2020 11:18 AM   |  A+A-


BSY

ಬಿಎಸ್ ಯಡಿಯೂರಪ್ಪ

Posted By : raghavendra
Source : UNI

ಬೆಂಗಳೂರು: ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಅನೇಕ ಗಣ್ಯರು ನಾಡಿನ ಸಮಸ್ತ ಜನತೆಗೆ ಶುಭಾಶಯ ಕೋರಿದ್ದಾರೆ.

ಗಣೇಶ ಹಬ್ಬದ ಶುಭಾಶಯಗಳು, ರಾಜ್ಯದ ಪ್ರಗತಿಯ ಹಾದಿಯಲ್ಲಿ ಇರುವ ಕಂಟಕ, ಅಡಚಣೆಗಳನ್ನು ಗಣಪತಿಯು ದೂರಮಾಡಲಿ ಹಾಗೂ ರಾಜ್ಯದ ಜನತೆಗೆ ವಿನಾಯಕ ಸನ್ಮಂಗಳವನ್ನುಂಟು ಮಾಡಲಿ. ಕೊರೋನಾ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಎಲ್ಲ ಸುರಕ್ಷತಾ ಕ್ರಮಗಳನ್ನು ಪಾಲಿಸೋಣ ಎಂದು ಮುಖ್ಯಮಂತ್ರಿ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

 

 

ಗಣೇಶ ಚತುರ್ಥಿ ಹಬ್ಬದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ನಾಡಿನ ಜನತೆಗೆ ಶುಭಾಶಯ ಕೋರಿದ್ದಾರೆ. ವಿಘ್ನೇಶ್ವರನು ಲೋಕದಲ್ಲಿರುವ ಸಕಲ ವಿಘ್ನಗಳನ್ನು ನಿವಾರಿಸಿ, ಸುಖ-ಶಾಂತಿ, ಆರೋಗ್ಯ, ಸಕಾರಾತ್ಮಕತೆಯನ್ನು ತಂದು ಎಲ್ಲರನ್ನೂ ಆಶೀರ್ವದಿಸಲಿ ಎಂದು ಪ್ರಾರ್ಥಿಸುತ್ತೇನೆ. ಆಚರಣೆ ಸರಳವಾಗಿರಲಿ, ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಿ ಎಂದು ಅವರು ಟ್ವೀಟ್ ಮೂಲಕ ಮನವಿ ಮಾಡಿದಾರೆ.


Stay up to date on all the latest ರಾಜ್ಯ news
Poll
CBSE board exam

12 ನೇ ತರಗತಿ ಮೌಲ್ಯಮಾಪನಕ್ಕೆ 10 ನೇ ತರಗತಿ ಅಂಕಗಳನ್ನು ಸೇರಿಸುವ ಸಿಬಿಎಸ್‌ಇ ಸೂತ್ರವನ್ನು ನೀವು ಬೆಂಬಲಿಸುತ್ತೀರಾ?


Result
ಹೌದು
ಇಲ್ಲ
flipboard facebook twitter whatsapp