ಆಯುಷ್ ಇಲಾಖೆಯಲ್ಲಿನ ಹಿಂದಿ ಹೇರಿಕೆ ವಿರುದ್ಧ ಸಿಡಿದೆದ್ದ ಕುಮಾರಸ್ವಾಮಿ

ತಮಿಳುನಾಡಿನ ಸಂಸದೆ ಕನಿಮೋಳಿ ಅವರಿಗಾದ ಹಿಂದಿ ಹೇರಿಕೆ ಅವಮಾನ ವಿರೋಧಿಸಿ ಧ್ವನಿಯೆತ್ತಿದ್ದ ಮಾಜಿ ಮುಖ್ಯಮಂತ್ರಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಇದೀಗ ಮತ್ತೆ ಆಯುಷ್ ಇಲಾಖೆಯಲ್ಲಿನ ಹಿಂದಿಹೇರಿಕೆ ವಿರುದ್ಧ ಸಿಡಿದೆದ್ದಿದ್ದಾರೆ. 
ಎಚ್. ಡಿ. ಕುಮಾರಸ್ವಾಮಿ
ಎಚ್. ಡಿ. ಕುಮಾರಸ್ವಾಮಿ

ಬೆಂಗಳೂರು: ತಮಿಳುನಾಡಿನ ಸಂಸದೆ ಕನಿಮೋಳಿ ಅವರಿಗಾದ ಹಿಂದಿ ಹೇರಿಕೆ ಅವಮಾನ ವಿರೋಧಿಸಿ ಧ್ವನಿಯೆತ್ತಿದ್ದ ಮಾಜಿ ಮುಖ್ಯಮಂತ್ರಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಇದೀಗ ಮತ್ತೆ ಆಯುಷ್ ಇಲಾಖೆಯಲ್ಲಿನ ಹಿಂದಿಹೇರಿಕೆ ವಿರುದ್ಧ ಸಿಡಿದೆದ್ದಿದ್ದಾರೆ. 

ಹಿಂದಿ ಹೇರಿಕೆ ವಿಚಾರ ಮತ್ತೊಮ್ಮೆ ಕಾವು ಪಡೆದಿದ್ದು, ಕೆಲ ದಿನಗಳ ಹಿಂದಷ್ಟೇ ಈ ವಿಚಾರವಾಗಿ ಅಸಮಾಧಾನ ಹೊರ ಹಾಕಿದ್ದ ತಮಿಳುನಾಡಿನ ಡಿಎಂಕೆ ಸಂಸದೆ ಕನಿಮೋಳಿ ಇದೀಗ 'ಹಿಂದಿ ಭಾಷೆ ಗೊತ್ತಿಲ್ಲದವರು ಹೊರ ಹೋಗಬಹುದು' ಎಂದು ಹೇಳಿದ್ದ ಆಯುಷ್ ಕಾರ್ಯದರ್ಶಿ ವೈದ್ಯ ರಾಜೇಶ್ ಕೋಟೆಚಾ ಅವರನ್ನು ಅಮಾನತ್ತುಗೊಳಿಸಿವಂತೆ ಆಗ್ರಹಿಸಿದ್ದಾರೆ.

ಇದಕ್ಕೆ ಧ್ವನಿಗೂಡಿಸಿರುವ ಕುಮಾರಸ್ವಾಮಿ, ಆಯುಷ್ ಇಲಾಖೆ ಆಯೋಜಿಸಿದ್ದ ವರ್ಚುವಲ್ ತರಬೇತಿಯಲ್ಲಿ ಇಲಾಖೆಯ ಕಾರ್ಯದರ್ಶಿ ರಾಜೇಶ್ ಕೊಟೆಚಾ 'ಹಿಂದಿ ಮಾತನಾಡಲು ಆಗದವರು ತರಬೇತಿಯಿಂದ ಹೊರನಡೆಯಬಹುದು. ತಮಗೆ ಚೆನ್ನಾಗಿ ಇಂಗ್ಲಿಷ್ ಮಾತನಾಡಲು ಬರುವುದಿಲ್ಲ ಎಂದು ಹೇಳಿರುವುದು ಇಂಗ್ಲಿಷ್ ಬಾರದೆಂಬ ವಿನಂತಿಯೋ, ಹಿಂದಿ ಹೇರಬೇಕು 
ಎಂಬ ನಾಚಿಕೆ ಇಲ್ಲದ ಉತ್ಸಾಹವೋ ಎಂದು ಕೇಂದ್ರವನ್ನು ಕುಟುಕಿದ್ದಾರೆ.

ಸಂವಿಧಾನ ಬದ್ಧ ಒಕ್ಕೂಟ ವ್ಯವಸ್ಥೆ ಎಂಬುದು ಈ ದೇಶದ ಒಗ್ಗಟ್ಟಿನ ಮಂತ್ರ. ಇಲ್ಲಿನ ಪ್ರತಿ ಭಾಷೆಗಳೂ ಒಕ್ಕೂಟ ವ್ಯವಸ್ಥೆಯ ಭಾಗ. ಹೀಗಿರುವಾಗ, ಹಿಂದಿ ಮಾತನಾಡಲು ಬಾರದ ಕಾರಣಕ್ಕೆ ತರಬೇತಿ ಕಾರ್ಯಕ್ರಮದಿಂದ ಹೊರ ಹೋಗಿ ಎಂಬುದು ಒಕ್ಕೂಟ ವ್ಯಸ್ಥೆಯ ಉಲ್ಲಂಘನೆ ಹಾಗೂ ಸಂವಿಧಾನ ವಿರೋಧಿ ನಡೆ ಎಂದು ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡಿದ್ದಾರೆ.

ಹಿಂದಿ ಬಾರದೆಂಬ ಕಾರಣಕ್ಕೆ ಕನ್ನಡಿಗರೂ ಸೇರಿದಂತೆ ಮಿಕ್ಕೆಲ್ಲ ಭಾಷೆಗಳ ಜನ ಈ ದೇಶದಲ್ಲಿ ಇನ್ನೆಷ್ಟು ತ್ಯಾಗ ಮಾಡಬೇಕು ಎಂದು ಪ್ರಶ್ನಿಸಿರುವ ಕುಮಾರಸ್ವಾಮಿ, ಹಿಂದಿ ಶ್ರೇಷ್ಠತೆಯ ಗೀಳಿನಲ್ಲಿರುವ ಆಯುಷ್ ಇಲಾಖೆಯ ಕಾರ್ಯದರ್ಶಿ ರಾಜೇಶ್ ಕೊಟೆಚಾ ಅವರ ವಿರುದ್ಧ ಕೇಂದ್ರ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳ ಬೇಕು. ಒಕ್ಕೂಟ ವ್ಯವಸ್ಥೆಯನ್ನು ಗೌರವಿಸಬೇಕೆಂದು ಆಗ್ರಹಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com