ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಲ್ಲಿ ಕರ್ನಾಟಕವೇ ಮೊದಲಾಗಲಿದೆ: ಡಿಸಿಎಂ ಅಶ್ವತ್ಥನಾರಾಯಣ

ಹೊಸ ರಾಷ್ಟ್ರೀಯ ಶಿಕ್ಷಣ ನೀತಿ(ಎನ್ ಇಪಿ)ಯನ್ನು ಜಾರಿಗೊಳಿಸುವಲ್ಲಿ ಕರ್ನಾಟಕವೇ ಮೊದಲಿಗನಾಗಲಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥನಾರಾಯಣ ಅವರು ಸೋಮವಾರ ಹೇಳಿದ್ದಾರೆ.

Published: 24th August 2020 05:29 PM  |   Last Updated: 24th August 2020 05:29 PM   |  A+A-


Deputy Chief Minister Dr.CN Ashwathnarayan

ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ

Posted By : lingaraj
Source : UNI

ಬೆಂಗಳೂರು: ಹೊಸ ರಾಷ್ಟ್ರೀಯ ಶಿಕ್ಷಣ ನೀತಿ(ಎನ್ ಇಪಿ)ಯನ್ನು ಜಾರಿಗೊಳಿಸುವಲ್ಲಿ ಕರ್ನಾಟಕವೇ ಮೊದಲಿಗನಾಗಲಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥನಾರಾಯಣ ಅವರು ಸೋಮವಾರ ಹೇಳಿದ್ದಾರೆ.

ಇಂದು ಬೆಂಗಳೂರು ವಿಶ್ವವಿದ್ಯಾಲಯ ಹಮ್ಮಿಕೊಂಡಿದ್ದ ರಾಷ್ಟ್ರೀಯ ಶಿಕ್ಷಣ ನೀತಿಯ ಮುಖ್ಯಾಂಶಗಳು ಮತ್ತು ಜಾರಿ ಕುರಿತ ಐದು ದಿನಗಳ ಆನ್ ಲೈನ್ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದ ಅಶ್ವತ್ಥನಾರಾಯಣ ಅವರು, ರಾಜ್ಯ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಬೇಕಿರುವ ಎಲ್ಲಾ ಆಡಳಿತಾತ್ಮಕ ಸುಧಾರಣೆಗಳು ಹಾಗೂ ಕಾನೂನು ತಿದ್ದುಪಡಿಗಳ ಬಗ್ಗೆ ತಯಾರಿ ಮಾಡಿಕೊಳ್ಳುತ್ತಿದೆ ಎಂದರು.

ನಿರ್ದಿಷ್ಟ ಗುರಿ ಮತ್ತು ಸ್ಪಷ್ಟ ಕಾರ್ಯಸೂಚಿಯ ಮೂಲಕ ಸರ್ಕಾರ ಎಲ್ಲಾ ಕಾರ್ಯಕ್ರಮಗಳನ್ನು ಜಾರಿಗೊಳಿಸುತ್ತಿದೆ. ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಇಡೀ ದೇಶದಲ್ಲೇ ಮೊತ್ತ ಮೊದಲ ಬಾರಿಗೆ ಜಾರಿಗೊಳಿಸಿದ ರಾಜ್ಯವಾಗಿ ಕರ್ನಾಟಕ ಹೊರಹೊಮ್ಮಲಿದೆ ಎಂದು ಡಿಸಿಎಂ ಹೇಳಿದರು.

ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ರಾಜ್ಯ ಸರ್ಕಾರದ ಮೊದಲನಿಂದಲೂ ಉತ್ಸುಕತೆ ಹೊಂದಿದೆ. ಹೊಸ ಶಿಕ್ಷಣ ನೀತಿಯ ಪ್ರತಿ ಕೈಸೇರುತ್ತಿದ್ದಂತೆ, ಅದನ್ನು ಜಾರಿಗೊಳಿಸುವುದಕ್ಕಾಗಿ ಉನ್ನತಮಟ್ಟದ ಕಾರ್ಯಪಡೆಯನ್ನು ರಚನೆ ಮಾಡಲಾಯಿತು ಎಂದರು.

ರಾಷ್ಟ್ರೀಯ ಶಿಕ್ಷಣ ನೀತಿ ಪ್ರಕಟವಾಗುವುದಕ್ಕು ಮುನ್ನ ಮತ್ತು ಪ್ರಕಟವಾದ ನಂತರ ಕಾರ್ಯಪಡೆ ಜೊತೆ ಹಲವು ಮಹತ್ವದ ಸಭೆಗಳನ್ನು ನಡೆಸಲಾಗಿದೆ ಎಂದು ಅಶ್ವತ್ಥನಾರಾಯಣ ಅವರು ತಿಳಿಸಿದರು.


Stay up to date on all the latest ರಾಜ್ಯ news
Poll
kangana ranaut

ಗುಲಾಮರು ಇಟ್ಟಿರುವ 'ಇಂಡಿಯಾ' ಹೆಸರನ್ನು 'ಭಾರತ್' ಎಂದು ಬದಲಾಯಿಸುವಂತೆ ಕಂಗನಾ ರಣಾವತ್ ಹೇಳಿದ್ದಾರೆ. ನೀವು ಏನಂತೀರಿ?


Result
ಹೌದು, ಅವರು ಹೇಳಿದ್ದು ಸರಿ.
ಇಲ್ಲ, ಇದು ತುಂಬಾ ಸಿಲ್ಲಿ.
flipboard facebook twitter whatsapp