ಲಾಲ್ ಬಹದ್ದೂರ ಶಾಸ್ತ್ರಿ ಸಾಗರಕ್ಕೆ ಬಾಗಿನ ಅರ್ಪಿಸಿದ ಸಿಎಂ ಯಡಿಯೂರಪ್ಪ!

ಆಲಮಟ್ಟಿಯ ಲಾಲ್‌ಬಹದ್ದೂರ ಶಾಸ್ತ್ರಿ ಸಾಗರಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಮಂಗಳವಾರ ಬಾಗಿನ ಅರ್ಪಿಸಿದರು.
ಬಿಎಸ್ ಯಡಿಯೂರಪ್ಪ
ಬಿಎಸ್ ಯಡಿಯೂರಪ್ಪ

ಬಾಗಲಕೋಟೆ: ಆಲಮಟ್ಟಿಯ ಲಾಲ್‌ಬಹದ್ದೂರ ಶಾಸ್ತ್ರಿ ಸಾಗರಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಮಂಗಳವಾರ ಬಾಗಿನ ಅರ್ಪಿಸಿದರು.

ಇತ್ತೀಚೆಗೆ ಮಹಾರಾಷ್ಟ್ರ ಮತ್ತು ಕೃಷ್ಣಾ ನದಿ ಭಾಗದಲ್ಲಿ ವ್ಯಾಪಕ ಮಳೆಯಾಗಿರುವ ಹಿನ್ನೆಲೆಯಲ್ಲಿ ಜಲಾಶಯ ಭರ್ತಿಯಾಗಿದ್ದು, ಮುಖ್ಯಮಂತ್ರಿ ಬಾಗೀನ ಅರ್ಪಿಸಿ ಸಮೃದ್ಧಿಗಾಗಿ ಪ್ರಾರ್ಥಿಸಿದರು.

ಉಪ ಮುಖ್ಯಮಂತ್ರಿ ಹಾಗೂ ಬಾಗಲಕೋಟೆ ಜಿಲ್ಲಾ‌ ಉಸ್ತುವಾರಿ ಸಚಿವರಾದ ಗೋವಿಂದ‌ ಕಾರಜೋಳ, ಕಂದಾಯ ಸಚಿವ ಆರ್.ಅಶೋಕ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳೆ, ವಿಧಾನ ಪರಿಷತ್ ವಿರೋಧ ಪಕ್ಷದ‌ನಾಯಕ ಎಸ್.ಅರ್.ಪಾಟೀಲ,  ಶಾಸಕರಾದ  ಮುರುಗೇಶ ನಿರಾಣಿ, ವೀರಣ್ಣ ಚರಂತಿಮಠ, ಜಿ.ಪಂ ಅದ್ಯಕ್ಷೆ ಬಾಯಕ್ಕ ಮೇಟಿ, ಮುದ್ದೇಬಿಹಾಳ ಶಾಸಕ ನಡಹಳ್ಳಿ ಸೇರಿದಂತೆ ವಿಜಯಪುರ, ಬಾಗಲಕೋಟೆ, ಗದಗ ಜಿಲ್ಲೆಯ ಜನಪ್ರತಿನಿದಿಗಳು ಇದ್ದರು.

ಯಡಿಯೂರಪ್ಪನವರು ಹೆಲಿಕಾಫ್ಟರ್ ಮೂಲಕ ಬಾಗಲಕೋಟೆ, ಬೆಳಗಾವ ಮತ್ತು ವಿಜಯಪುರ ಜಿಲ್ಲಾ ವ್ಯಾಪ್ತಿಯಲ್ಲಿ ಕೃಷ್ಣಾ, ಘಟ್ಟಪ್ರಭಾ ಮತ್ತು ಮಲಪ್ರಭಾ ನದಿಗಳ ಪ್ರವಾಹದಿಂದ ಬಾಧಿತವಾದ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ ಬಳಿಕ ಅಲಮಟ್ಟಿ ಜಲಾಶಯಕ್ಕೆ ಬಾಗಿನ ಸಮರ್ಪಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com