ಅರಸೀಕೆರೆ ಜೆಡಿಎಸ್ ಶಾಸಕ ಶಿವಲಿಂಗೇಗೌಡರಿಗೆ ಕೊರೋನಾ ಸೋಂಕು

ಜಿಲ್ಲೆಯ ಅರಸೀಕೆರೆ ಕ್ಷೇತ್ರದ ಶಾಸಕ ಶಿವಲಿಂಗೇಗೌಡ ಅವರಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ.
ಶಿವಲಿಂಗೇಗೌಡ
ಶಿವಲಿಂಗೇಗೌಡ

ಹಾಸನ: ಜಿಲ್ಲೆಯ ಅರಸೀಕೆರೆ ಕ್ಷೇತ್ರದ ಶಾಸಕ ಶಿವಲಿಂಗೇಗೌಡ ಅವರಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ.

ಈ ಬಗ್ಗೆ ವಿಡಿಯೋ ಬಿಡುಗಡೆ ಮಾಡಿರುವ ಶಿವಲಿಂಗೇಗೌಡ ನನಗೆ ಕೊರೊನಾ ಪಾಸಿಟಿವ್ ಬಂದಿದ್ದು, ಆರೋಗ್ಯವಾಗಿದ್ದೇನೆ. ನನ್ನ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದವರು ಪರೀಕ್ಷೆ ಮಾಡಿಸಿಕೊಳ್ಳುವಂತೆ ಶಾಸಕ ಶಿವಲಿಂಗೇಗೌಡ ಮನವಿ ಮಾಡಿದ್ದಾರೆ.

ನಿನ್ನೆಯಷ್ಟೇ ಶಾಸಕ ಶಿವಲಿಂಗೇಗೌಡ ಅರಸೀಕೆರೆ ನಗರಸಭೆಯಲ್ಲಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಜೊತೆ ಸಭೆ ನಡೆಸಿದ್ದರು. ಹೀಗಾಗಿ ಶಾಸಕರ ಜೊತೆ ಹಲವರು ಪ್ರಾಥಮಿಕ ಸಂಪರ್ಕದಲ್ಲಿದ್ದು ಎಲ್ಲರೂ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕಾಗಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com