ಶೀಘ್ರ ಗುಣಮುಖರಾಗಿ ಡಿ.ಕೆ.ಶಿಗೆ ಸೋನಿಯಾ, ರಾಹುಲ್ ದೂರವಾಣಿ ಕರೆ

ಕೊರೋನಾ ಸೋಂಕಿಗೆ ಒಳಗಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ದೂರವಾಣಿ ಕರೆ ಮಾಡಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ.
ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್

ಬೆಂಗಳೂರು: ಕೊರೋನಾ ಸೋಂಕಿಗೆ ಒಳಗಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ದೂರವಾಣಿ ಕರೆ ಮಾಡಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ.

ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಡಿ.ಕೆ ಶಿವಕುಮಾರ್ ಅವರಿಗೆ ಸೋನಿಯಾ, ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಮತ್ತಿತರ ಗಣ್ಯರು ಕರೆ ಮಾಡಿ ಆರೋಗ್ಯ ವಿಚಾರಿಸಿದರು. ಆದಷ್ಟು ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.

ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ, ಕೊರೋನಾ ಸೋಂಕಿನಿಂದ ಶೀರ್ಘ ಚೇತರಿಸಿಕೊಂಡು ಮತ್ತೆ ಜನ ಸೇವೆಗೆ ಮರಳುವಂತೆ ಶುಭ ಕೋರಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಳೆದ ಕೆಲ ದಿನಗಳಿಂದ  ಜ್ವರ ಹಾಗೂ ಬೆನ್ನು ನೋವಿನಿಂದ ಬಳಲುತ್ತಿದ್ದು ಮಂಗಳವಾರ (ಆ.೨೫) ಕೋವಿಡ್ ಸೋಂಕು ದೃಢವಾಗಿತ್ತು.  ಕೊರೋನಾ ದೃಢವಾಗುತ್ತಲೇ ಶಿವಕುಮಾರ್ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಇತ್ತೀಚಿಗಷ್ಟೇ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೊರೋನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದನ್ನು ನಾವಿಲ್ಲಿ ನೆನೆಯಬಹುದು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com