ಹುಬ್ಬಳ್ಳಿ: ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರು ಯುವಕರ ಕೊಲೆ 

ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರು ಯುವಕರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹುಬ್ಬಳ್ಳಿಯ ಗೋಪನಕೊಪ್ಪ ಬಸ್ಸು ನಿಲ್ದಾಣದ ಬಳಿ ಮಧ್ಯರಾತ್ರಿ ನಡೆದಿದ್ದು, ಜನ ಬೆಚ್ಚಿಬಿದ್ದಿದ್ದಾರೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಹುಬ್ಬಳ್ಳಿ: ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರು ಯುವಕರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹುಬ್ಬಳ್ಳಿಯ ಗೋಪನಕೊಪ್ಪ ಬಸ್ಸು ನಿಲ್ದಾಣದ ಬಳಿ ಮಧ್ಯರಾತ್ರಿ ನಡೆದಿದ್ದು, ಜನ ಬೆಚ್ಚಿಬಿದ್ದಿದ್ದಾರೆ. 

ಮಂಜುನಾಥ್ ಕಬ್ಬಿನ್, ನಿಯಾಜ್ ಕೊಲೆಯಾದವರು. ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಈ ಯುವಕರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಆದರೆ ಕೊಲೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.

ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಆರ್ ದಿಲೀಪ್ ಗುರುವಾರ ಬೆಳಿಗ್ಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಸಂಬಂಧ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ‌  ‌ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com