ಮನಮೋಹನಸಿಂಗ್ ಸರ್ಕಾರದ ಅವಧಿಯಲ್ಲಿ ರೂಪಿಸಿದ ಎನ್‍ಡಿಆರ್‍ಎಫ್ ನೀತಿಗಳಿಂದ ರಾಜ್ಯಕ್ಕೆ ಅನ್ಯಾಯ: ಅಶೋಕ್

ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಕೇಂದ್ರದಿಂದ ರಾಜ್ಯ ಸರ್ಕಾರ ನಿರೀಕ್ಷಿತ ಪರಿಹಾರ ಪಡೆಯುವಲ್ಲಿ ಮನಮೋಹನಸಿಂಗ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ರೂಪಿಸಿದ ಎನ್‍ಡಿಆರ್‍ಎಫ್ ನೀತಿಗಳಿಂದ ಅನ್ಯಾಯವಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ ಆರೋಪಿಸಿದ್ದಾರೆ.
ಅಶೋಕ್
ಅಶೋಕ್

ವಿಜಯಪುರ: ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಕೇಂದ್ರದಿಂದ ರಾಜ್ಯ ಸರ್ಕಾರ ನಿರೀಕ್ಷಿತ ಪರಿಹಾರ ಪಡೆಯುವಲ್ಲಿ ಮನಮೋಹನಸಿಂಗ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ರೂಪಿಸಿದ ಎನ್‍ಡಿಆರ್‍ಎಫ್ ನೀತಿಗಳಿಂದ ಅನ್ಯಾಯವಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ ಆರೋಪಿಸಿದ್ದಾರೆ.

ವಿಜಯಪುರದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಪ್ರವಾಹ ಸೇರಿದಂತೆ ಪ್ರಕೃತಿ ವಿಕೋಪ ಸಂದಭದಲ್ಲಿ ಸಂಭವಿಸಿದ ಬೆಳೆ ಹಾನಿ, ಆಸ್ತಿ ಹಾನಿ ಸೇರಿದಂತೆ ಇತರೆ ನಷ್ಟಕ್ಕೆ ಪರಿಹಾರ ಪಡೆಯುವಲ್ಲಿ ಮನಮೋಹನ್ ಸಿಂಗ್ ಸರ್ಕಾರ ರೂಪಿಸಿದ ನೀತಿಗಳು ತೊಡಕಾಗಿವೆ. ಕಳೆದ ವರ್ಷದ ಪ್ರವಾಹ ನಷ್ಟದ 35 ಸಾವಿರ ಕೋಟಿ  ರೂ. ನೆರವಿನೆ ಪ್ರಸ್ತಾವನೆಯಲ್ಲಿ
ಕೇವಲ 1 ಸಾವಿರ ರೂ. ಕೋಟಿ ರೂ. ಮಾತ್ರ ಬಂದಿದ್ದು, ಇದಕ್ಕೆ ಹಿಂದಿನ ಸರ್ಕಾರದ ನೀತಿಗಳೇ ಕಾರಣ ಎಂದು ದೂರಿದ್ದಾರೆ.

ರಾಜ್ಯದಲ್ಲಿ ಸಂಭವಿಸಿದ ಪ್ರವಾಹ ಹಾಗೂ ಅತಿವೃಷ್ಠಿ ಹಾನಿಯ ಅಧ್ಯಯನಕ್ಕೆ ಕೇಂದ್ರ ತಂಡವನ್ನು ಕಳಿಸುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಕೇಂದ್ರ ಅಧ್ಯಯನ ತಂಡ ಆಗಮಿಸಿದ ಸಂದರ್ಭದಲ್ಲಿ ಅಗತ್ಯ ಛಾಯಾಚಿತ್ರಗಳು, ವಿಡಿಯೋಗಳನ್ನು ಸಂಗ್ರಹಿಸಿಕೊಂಡು, ಸೂಕ್ತ ದಾಖಲೆ ನೀಡುವಂತೆ ಜಿಲ್ಲಾಡಳಿತಗಳಿಗೆ ಸೂಚಿಸಲಾಗಿದೆ ಎಂದರು.

ಈ ವರ್ಷ ಪ್ರವಾಹದಿಂದ 4500 ಕೋಟಿ ರು ನಷ್ಟವಾಗಿದ್ದು, 4 ಸಾವಿರ ಕೋಟಿ ರು ನೀಡುವಂತೆ ಸರ್ಕಾರ ಕೇಂದ್ರಕ್ಕೆ ಮನವಿ ಮಾಡಿದೆ. ಶೀಘ್ರವೇ ಕೇಂದ್ರ ಹಣಕಾಸಿನ ನೆರವು ನೀಡಲಿದೆ ಎಂದು ವಿಶ್ವಾಸ ವ್ಯಕ್ತ ಪಡಿಸಿದ ಅವರು ಕೇಂದ್ರ ಸರ್ಕಾರ ಈಗಾಗಲೇ 395 ಕೋಟಿ ರು ಹಣವನ್ನು ರಾಜ್ಯಕ್ಕೆ ನೀಡಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com