ರಾಜ್ಯದಲ್ಲಿ ಇಂದು ಕೊರೋನಾಗೆ 136 ಬಲಿ, ಬೆಂಗಳೂರಿನಲ್ಲಿ 2721 ಸೇರಿ 8960 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಶುಕ್ರವಾರ ಒಂದೇ ದಿನ ಬರೋಬ್ಬರಿ 136 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. 
ಸಾಂದದರ್ಭಿಕ ಚಿತ್ರ
ಸಾಂದದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಶುಕ್ರವಾರ ಒಂದೇ ದಿನ ಬರೋಬ್ಬರಿ 136 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 5368ಕ್ಕೆ ಏರಿಕೆಯಾಗಿದೆ.

ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 41 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 136 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 2721 ಹೊಸ ಪ್ರಕರಣಗಳು ವರದಿಯಾಗಿದ್ದು, ರಾಜ್ಯದಲ್ಲಿ ಒಟ್ಟು 8960 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3,18,752ಕ್ಕೇರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇನ್ನು 3,18,752 ಪ್ರಕರಣಗಳ ಪೈಕಿ 2,27,019 ಮಂದಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ಧಾರೆ. 86, 346 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com