ಶಿಕ್ಷಕರ ಸಮಸ್ಯೆಗಳನ್ನು ನೀಗಿಸುವ ಶಿಕ್ಷಕ ಮಿತ್ರ ಆ್ಯಪ್ ಬಿಡುಗಡೆಗೊಳಿಸಿದ ಮುಖ್ಯಮಂತ್ರಿ ಯಡಿಯೂರಪ್ಪ

ಶಿಕ್ಷಕರ ಅನುಕೂಲಕ್ಕಾಗಿ ಅಭಿವೃದ್ಧಿ ಪಡಿಸಿರುವ ಶಿಕ್ಷಕ ಮಿತ್ರ ಆ್ಯಪ್ ನ್ನು ಸಿಎಂ ಯಡಿಯೂರಪ್ಪ ಬಿಡುಗಡೆ ಮಾಡಿದರು.ಶಿಕ್ಷಕರ ಆಡಳಿತಾತ್ಮಕ ಸಮಸ್ಯೆಗಳನ್ನು ಬಗೆ ಹರಿಸಲು ಆಪ್ ಅಭಿವೃದ್ಧಿ ಪಡಿಸಲಾಗಿದೆ.ಇದೇ ವೇಳೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಬರೆದ ವಿದ್ಯಾ ವಿನೀತ ಪುಸ್ತಕ ವನ್ನೂ ಮುಖ್ಯಮಂತ್ರಿ ಬಿಡುಗಡೆ ಮಾಡಿದರು. 
ಶಿಕ್ಷಕ ಮಿತ್ರ ಆ್ಯಪ್ ನ್ನು ಬಿಡುಗಡೆ ಮಾಡಿದ ಮುಖ್ಯಮಂತ್ರಿ
ಶಿಕ್ಷಕ ಮಿತ್ರ ಆ್ಯಪ್ ನ್ನು ಬಿಡುಗಡೆ ಮಾಡಿದ ಮುಖ್ಯಮಂತ್ರಿ

ಬೆಂಗಳೂರು: ಶಿಕ್ಷಕರ ಅನುಕೂಲಕ್ಕಾಗಿ ಅಭಿವೃದ್ಧಿ ಪಡಿಸಿರುವ ಶಿಕ್ಷಕ ಮಿತ್ರ ಆ್ಯಪ್ ನ್ನು ಸಿಎಂ ಯಡಿಯೂರಪ್ಪ ಬಿಡುಗಡೆ ಮಾಡಿದರು.
ರಾಜ್ಯದಲ್ಲಿ ಸುಮಾರು 2.50 ಲಕ್ಷ ಶಿಕ್ಷಕರು ಸೇವೆ ಸಲ್ಲಿಸುತ್ತಿದ್ದು, ಶಿಕ್ಷಕರ ಆಡಳಿತಾತ್ಮಕ ಸಮಸ್ಯೆಗಳನ್ನು ಬಗೆ ಹರಿಸಲು ಆಪ್ ಅಭಿವೃದ್ಧಿ ಪಡಿಸಲಾಗಿದೆ.ಇದೇ ವೇಳೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಬರೆದ ವಿದ್ಯಾ ವಿನೀತ ಪುಸ್ತಕ ವನ್ನೂ ಮುಖ್ಯಮಂತ್ರಿ ಬಿಡುಗಡೆ ಮಾಡಿದರು. 

ವಿಧಾನ ಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪುಸಕ್ತ ಹಾಗೂ ಅ್ಯಪ್ ಲೋಕಾರ್ಪಣೆ ಬಳಿಕ ಮಾತನಾಡಿದ ಯಡಿಯೂರಪ್ಪ, ಆ್ಯಪ್ ಮೂಲಕ‌ ಶಿಕ್ಷಕರು ತಮ್ಮ ಸೇವಾ ವಿಷಯ ಹಾಗೂ ಸಮಸ್ಯೆಗಳನ್ನು ಬಗೆಹರಿಸಬಹುದು.ಇದರಿಂದ ಶಿಕ್ಷಕರ ಅಲೆದಾಟ ಮುಗಿಯಲಿದೆ. ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನೂ ಆ್ಯಪ್ ಮೂಲಕ ಮಾಡಲಾಗುತ್ತದೆ ಎಂದು ತಿಳಿಸಿದರು.

ಸಚಿವ ಸುರೇಶ್ ಕುಮಾರ್ ಶಿಕ್ಷಕರ ವರ್ಗಾವಣೆ ನೀತಿಯನ್ನು ತರುವ ಮೂಲಕ ವರ್ಗಾವಣೆ‌ ಪ್ರಕ್ರಿಯೆ ಸುಗಮಗೊಳಿಸಿದ್ದಾರೆ. ಅನೇಕ ವಿದ್ಯಾರ್ಥಿಗಳು ಖಾಸಗಿ ಶಾಲೆಯಿಂದ ಸರ್ಕಾರಿ ಶಾಲೆಗಳಿಗೆ ಸೇರುತ್ತಿದ್ದಾರೆ.ಒಬ್ಬ ಸಚಿವರು ಹೇಗೆ ಜನಮುಖಿಯಾಗಿ ಕೆಲಸ ಮಾಡಬಹುದೆಂಬುದಕ್ಕೆ ಸುರೇಶ್ ಕುಮಾರ್ ಮಾದರಿಯಾಗಿದ್ದಾರೆ ಎಂದು ಯಡಿಯೂರಪ್ಪ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com