ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಮತ್ತಿತರರು
ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಮತ್ತಿತರರು

ರಾಷ್ಟ್ರೀಯ ಶಿಕ್ಷಣ ನೀತಿ ಪರಿಣಾಮಕಾರಿ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಬದ್ಧ - ಗೋವಿಂದ ಕಾರಜೋಳ

ಕೇಂದ್ರ ಸರ್ಕಾರವು ಯುವಪೀಳಿಗೆಗೆ ಅನುಗುಣವಾಗಿ ರೂಪಿಸಿರುವ  ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು  ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ ಬದ್ದವಾಗಿದೆ ಎಂದು  ಉಪ ಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಹೇಳಿದ್ದಾರೆ.

ಬೆಂಗಳೂರು: ಕೇಂದ್ರ ಸರ್ಕಾರವು ಯುವಪೀಳಿಗೆಗೆ ಅನುಗುಣವಾಗಿ ರೂಪಿಸಿರುವ  ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು  ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ ಬದ್ದವಾಗಿದೆ ಎಂದು  ಉಪ ಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಹೇಳಿದ್ದಾರೆ.

ಬೆಂಗಳೂರು ವಿಶ್ವವಿದ್ಯಾಲಯವು ಆಯೋಜಿಸಿದ್ದ 5 ದಿನಗಳ ರಾಷ್ಟ್ರೀಯ ಶಿಕ್ಷಣ ನೀತಿ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಶಿಕ್ಷಣ ಕ್ಷೇತ್ರದಲ್ಲೂ ಕರ್ನಾಟಕ  ಎಂದೆಂದೂ ನಂಬರ್ ಒನ್ ಆಗಿರುವಂತೆ ಶ್ರಮಿಸಬೇಕು  ಕರೆ ನೀಡಿದರು.

ಇಂದಿನ ಪೀಳಿಗೆಗೆ ಅನುಗುಣವಾಗಿ,ಅತ್ಯಾಧುನಿಕ ಆವಿಷ್ಕಾರ, ತಂತ್ರಜ್ಞಾನಗಳಿಗೆ ತಕ್ಕಂತೆ  ಆಧುನಿಕ ಶಿಕ್ಷಣಕ್ಕೆ ಪೂರಕವಾಗಿರುವ ರಾಷ್ಟ್ರೀಯ ಶಿಕ್ಷಣ ನೀತಿ ಯನ್ನು  ಕೇಂದ್ರ ಸರ್ಕಾರ  ಅಂಗೀಕರಿಸಿ,ಜಾರಿಗೊಳಿಸುತ್ತಿದೆ.ಶಿಕ್ಷಣ ರಂಗದಲ್ಲೂ ಹೊಸ ಕ್ರಾಂತಿ ಮೂಡಿಸುವ ಹಾಗೂ ಯುವಪೀ ಳಿಗೆ ಅನುಗುಣವಾದ ಶಿಕ್ಷಣವನ್ನು ದೊರಕಿಸಿಕೊಡುವ ಉದ್ದೇಶ ಕೇಂದ್ರ ಸರ್ಕಾರ ದ್ದಾಗಿದೆ. ಕರ್ನಾಟಕ ಸರ್ಕಾರವು ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅನುಷ್ಠಾನಗೊಳಿಸುವ ರಾಜ್ಯದಲ್ಲಿ ಮೊದಲ ರಾಜ್ಯ ಎನ್ನುವ ಹೆಗ್ಗಳಿಗೆ ಪಾತ್ರವಾಗಲಿದೆ ಎಂದು ಅವರು ತಿಳಿಸಿದರು.

ರಾಷ್ಟ್ರೀಯ ಶಿಕ್ಷಣ ನೀತಿ ಅನ್ನು ಅನುಷ್ಠಾನಗೊಳಿಸಲು  ರಾಜ್ಯ ಸರ್ಕಾರ ಈಗಾಗಲೇ  ತೀರ್ಮಾನ ಕೈಗೊಂಡಿದೆ. ಪ್ರಸ್ತುತ ಚಾಲ್ತಿಯಲ್ಲಿರುವ ಶಿಕ್ಷಣ ನೀತಿಯನ್ನು  ರಾಷ್ಟ್ರೀಯ ಶಿಕ್ಷಣ ನೀತಿಗನುಗುಣವಾಗಿ ರೂಪಿಸಲಾಗುವುದು. ಶಿಕ್ಷಣ ತಜ್ಞರು, ಸಾರ್ವಜನಿಕರ ಸಲಹೆಗಳನ್ನು ಸ್ವೀಕರಿಸಲು ಸರ್ಕಾರ ಸಿದ್ದವಾಗಿದ್ದು, ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುವುದು ಎಂದು ಗೋವಿಂದ ಕಾರಜೋಳ ಹೇಳಿದರು.

ಕರ್ನಾಟಕ ಕೇಂದ್ರ ವಿಶ್ವವಿದ್ಯಾಲಯದ  ಕುಲಾಧಿಪತಿ  ಪ್ರೊ.ಎನ್. ಆರ್‌‌.ಶೆಟ್ಟಿ, ನ್ಯಾಕ್ ನಿರ್ದೇಶಕ  ಪ್ರೊ. ಎಸ್.ಸಿ. ಶರ್ಮ, ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊಫೆಸರ್ ವೇಣುಗೋಪಾಲ್ ಮತ್ತಿತರರು ಉಪಸ್ಥಿತರಿದ್ದರು.

Related Stories

No stories found.

Advertisement

X
Kannada Prabha
www.kannadaprabha.com