ನೆರೆ ಪರಿಹಾರ ವಿತರಣೆಯಲ್ಲಿ ಸರ್ಕಾರ ವಿಫಲ: ವಿಡಿಯೋ ಕಾನ್ಪ್ ರೆನ್ಸ್  ನಲ್ಲಿ ದೇವೇಗೌಡ ಆರೋಪ

ರಾಜ್ಯ ಸರ್ಕಾರ ನೆರೆ ಪರಿಹಾರ ಹಾಗೂ ಅಗತ್ಯ ಸೌಲಭ್ಯ ಕಲ್ಪಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಆರೋಪಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು : ರಾಜ್ಯ ಸರ್ಕಾರ ನೆರೆ ಪರಿಹಾರ ಹಾಗೂ ಅಗತ್ಯ ಸೌಲಭ್ಯ ಕಲ್ಪಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಆರೋಪಿಸಿದ್ದಾರೆ.

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ದೇವೇಗೌಡರ ಅಧ್ಯಕ್ಷತೆಯಲ್ಲಿ  ಬೆಳಗಾವಿ, ಚಿಕ್ಕೋಡಿ, ವಿಜಯಪುರ, ಬಾಗಲಕೋಟೆ, ಧಾರವಾಡ, ಹುಬ್ಬಳ್ಳಿ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ತಾಲೂಕಿನ ಅಧ್ಯಕ್ಷರು, ಜಿಲ್ಲಾಧ್ಯಕ್ಷರು ಹಾಗೂ ಕಳೆದ ಬಾರಿಯ ಪರಾಜಿತ ಅಭ್ಯರ್ಥಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. 

ವಿಡಿಯೋ ಸಂವಾದದಲ್ಲಿ ಮಾತನಾಡಿದ ದೇವೇಗೌಡ ರಾಜ್ಯದ ನೆರೆ ಹಾವಳಿಯಿಂದ ತತ್ತರಿಸಿದ ಪ್ರದೇಶಗಳ ಕುರಿತು ಮಾಹಿತಿಯನ್ನು ಕಲೆಹಾಕಿದ್ದಾರೆ. ಈ ವೇಳೆ ಮಾತನಾಡಿದ ಅವರು ರಾಜ್ಯದ ಬಹುತೇಕ ಜಿಲ್ಲೆಗಳು ಕಳೆದ ಎರಡು ವರ್ಷಗಳಿಂದ ನೆರೆ ಹಾವಳಿಯಿಂದ ತತ್ತರಿಸಿದ್ದು ಸರ್ಕಾರವು ನೊಂದವರಿಗೆ ಅಗತ್ಯ ನೆರವು ಹಾಗೂ ಸೌಲಭ್ಯ ಕಲ್ಪಿಸುವುದರಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ದೇವೇಗೌಡರು ಆರೋಪಿಸಿದರು.

ಕಳೆದ ಎರಡು ವರ್ಷಗಳಿಂದ ಪ್ರವಾಹದ ನಂತರ ಪರಿಹಾರ ಪಡಲು ಜನರು ಹರ ಸಾಹಸ ಪಡುವಂತಾಗಿದೆ ಎಂದು ಆರೋಪಿಸಿದ ಅವರು ಕೊರೋನಾ ಸಮಸ್ಯೆಯಿಂದಾಗಿ ಪ್ರವಾಹಸ್ಥಳಗಳಿಗೆ ಖುದ್ದು ಭೇಟಿ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಬೇಸರ ವ್ಯಕ್ತ ಪಡಿಸಿದರು.

ಸಮಸ್ಯೆಗಳನ್ನು ಸರ್ಕಾರಕ್ಕೆ ತೋರಿಸಲು ಇದು ಮೊದಲ ಹೆಜ್ಜೆಯಾಗಿದೆ. ಕೊರೋನಾ ಹಾವಳಿ ನಿಂತ ನಂತರರಾಜ್ಯಾದ್ಯಂತ ಪ್ರವಾಸ ಕೈಗೊಂಡು ರೈತ ಪರ ಹೋರಾಟ ನಡೆಸುವುದಾಗಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com