ಸರ್ಕಾರಿ ಕೋಟಾದಲ್ಲಿ 42, 291 ಕೋವಿಡ್ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ- ಆರೋಗ್ಯ ಇಲಾಖೆ 

ಕೋವಿಡ್‌ ಸೋಂಕು ಆರಂಭಗೊಂಡಂದಿನಿಂದ ಇಂದಿನವರೆಗೆ ಸರ್ಕಾರದ ಪೂರ್ವಾನುಮತಿ ಪಡೆದು ಖಾಸಗಿ ಆಸ್ಪತ್ರೆಗಳಲ್ಲಿ ಆ.28ರವರೆಗೆ 42,291 ರೋಗಿಗಳಿಗೆ ಚಿಕಿತ್ಸೆ ನೀಡಲಾಗಿದ್ದು, ಒಟ್ಟು 169.55 ಕೋಟಿ ರೂ. ವೆಚ್ಚವಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಕೋವಿಡ್‌ ಸೋಂಕು ಆರಂಭಗೊಂಡಂದಿನಿಂದ ಇಂದಿನವರೆಗೆ ಸರ್ಕಾರದ ಪೂರ್ವಾನುಮತಿ ಪಡೆದು ಖಾಸಗಿ ಆಸ್ಪತ್ರೆಗಳಲ್ಲಿ ಆ.28ರವರೆಗೆ 42,291 ರೋಗಿಗಳಿಗೆ ಚಿಕಿತ್ಸೆ ನೀಡಲಾಗಿದ್ದು, ಒಟ್ಟು 169.55 ಕೋಟಿ ರೂ. ವೆಚ್ಚವಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಈ ಕುರಿತು ತಮ್ಮ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಮಾಹಿತಿ ನೀಡಿರುವ ಇಲಾಖೆ, ಖಾಸಗಿ ಆಸ್ಪತ್ರೆಗಳು ಸರ್ಕಾರಕ್ಕೆ 14,789 ಕ್ಲೇಮುಗಳನ್ನು ಸಲ್ಲಿಸಿದ್ದು ಅದರಲ್ಲಿ  9136 ಕ್ಲೇಮುಗಳನ್ನು ಇತ್ಯರ್ಥಗೊಳಿಸಲಾಗಿದೆ. ಇದರ ಒಟ್ಟು ಮೊತ್ತ 22.14 ಕೋಟಿ ರೂ. ಆಗಿದೆ.ಇಲ್ಲಿಯವರೆಗೆ ಖಾಸಗಿ ಆಸ್ಪತ್ರೆಗಳು ಸಲ್ಲಿಸಿದ್ದ ಶೇ. 60ರಷ್ಟು ಪ್ರಕರಣಗಳನ್ನು ಸರ್ಕಾರ ಇತ್ಯರ್ಥಗೊಳಿಸಿದೆ ಎಂದು ಇಲಾಖೆ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com