ಕರ್ನಾಟಕದ ಮೊದಲ ರೋ-ರೋ ರೈಲು ಸೇವೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಚಾಲನೆ

ಬೆಂಗಳೂರು ಗ್ರಾಮಾಂತರದ  ನೆಲಮಂಗಲದಿಂದ ಸೋಲಾಪುರದ ಬಾಲೆ ರೈಲ್ವೆ ನಿಲ್ದಾಣದ ನಡುವೆ ಸಂಚರಿಸುವ ರೋಲ್ಆನ್-ರೋಲ್ಆಫ್ ರೈಲು(ರೋ-ರೋ ರೈಲು)  ಸೇವೆಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಚಾಲನೆ ನಿಡಿದ್ದಾರೆ.
 

Published: 30th August 2020 10:59 AM  |   Last Updated: 30th August 2020 11:00 AM   |  A+A-


Posted By : Raghavendra Adiga
Source : Online Desk

ಬೆಂಗಳುರು: ಬೆಂಗಳೂರು ಗ್ರಾಮಾಂತರದ  ನೆಲಮಂಗಲದಿಂದ ಸೋಲಾಪುರದ ಬಾಲೆ ರೈಲ್ವೆ ನಿಲ್ದಾಣದ ನಡುವೆ ಸಂಚರಿಸುವ ರೋಲ್ಆನ್-ರೋಲ್ಆಫ್ ರೈಲು(ರೋ-ರೋ ರೈಲು)  ಸೇವೆಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಚಾಲನೆ ನಿಡಿದ್ದಾರೆ.

ನಋತ್ಯ ರೈಲ್ವೆ ವಿಭಾಗದಲ್ಲಿ ಇದೇ ಮೊದಲ ಬಾರಿಗೆ ರೋ-ರೋ ಸೇವೆ ಪ್ರಾರಂಭವಾಗಿದ್ದು ಕರ್ನಾಟಕ, ಆಂಧ್ರಪ್ರದೇಶ, ಮಹಾರಾಷ್ಟ್ರ ಹಾಗೂ ತೆಲಂಗಾಣಗಳ ಕೃಷಿ ಬಳಕೆ ಕೇಂದ್ರಗಳ ನಡುವೆ ಈ ರೈಲು ಸಂಪರ್ಕ ಸಾಧಿಸುತ್ತದೆ.

ಮುಖ್ಯಮಂತ್ರಿ ಯಡಿಯೂರಪ್ಪ ರೈಲಿಗೆ ರು ಹಸಿರು ನಿಶಾನೆ ತೋರುವ ಮೂಲಕ ಇಂದು ಚಾಲನೆ ನೀಡಿದರು. 

 

 

ಈ ಸಂದರ್ಭದಲ್ಲಿ ಮಾನ್ಯ ಕೇಂದ್ರ ರೈಲ್ವೆ ರಾಜ್ಯಸಚಿವ ಸುರೇಶ್ ಅಂಗಡಿ,  ಕಂದಾಯ ಸಚಿವ ಆರ್. ಅಶೋಕ್, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೋಳಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಶಂಕರ್ ಗೌಡ ಪಾಟೀಲ್ ಶಾಸಕ ನಾರಾಯಣಸ್ವಾಮಿ ಉಪಸ್ಥಿತರಿದ್ದರು. 
 

Stay up to date on all the latest ರಾಜ್ಯ news
Poll
Covid-_Vaccine1

ರಾಜಕಾರಣಿಗಳಿಗೆ ಮೊದಲು ಕೋವಿಡ್-19 ಲಸಿಕೆ ನೀಡಬೇಕೇ?


Result
ಇಲ್ಲ, ಸಾಮಾನ್ಯ ಜನರಿಗೆ ಮೊದಲು
ಹೌದು, ಅವರು ನಮ್ಮ ನಾಯಕರು
flipboard facebook twitter whatsapp