ಬೆಂಗಳೂರು: 14 ವರ್ಷಗಳ ಬಳಿಕ ಆಗಸ್ಟ್ ತಿಂಗಳಿನಲ್ಲಿ ಅತ್ಯಂತ ಕಡಿಮೆ ಮಳೆ

ಉದ್ಯಾನನಗರಿ ಬೆಂಗಳೂರಿನಲ್ಲಿ ಬರೊಬ್ಬರಿ 14 ವರ್ಷಗಳ ಮೊದಲ ಬಾರಿಗೆ ಆಗಸ್ಟ್ ತಿಂಗಳಿನಲ್ಲಿ ಅತ್ಯಂತ ಕನಿಷ್ಠ ಮಳೆಯಾಗಿದೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಉದ್ಯಾನನಗರಿ ಬೆಂಗಳೂರಿನಲ್ಲಿ ಬರೊಬ್ಬರಿ 14 ವರ್ಷಗಳ ಮೊದಲ ಬಾರಿಗೆ ಆಗಸ್ಟ್ ತಿಂಗಳಿನಲ್ಲಿ ಅತ್ಯಂತ ಕನಿಷ್ಠ ಮಳೆಯಾಗಿದೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಹವಾಮಾನ ಇಲಾಖೆ, ಬೆಂಗಳೂರು ನಗರ ಪ್ರದೇಶದಲ್ಲಿ 75.9 ಮಿ.ಮೀ ಮಳೆಯಾಗಿದೆ. ಇದು ಕಳೆದ 14 ವರ್ಷಗಳಲ್ಲೇ ಆಗಸ್ಟ್ ತಿಂಗಳಿನ ಅತ್ಯಂತ ಕನಿಷ್ಠ ಮಳೆಯಾಗಿದೆ. ಹೆಚ್ಎಎಲ್ ನಲ್ಲಿ 83.8 ಮಿ.ಮೀ ಮಳೆಯಾಗಿದ್ದು, ಕೆಐಎಎಲ್ ನಲ್ಲಿ  56.6 ಮಿ.ಮೀ ಮಳೆಯಾಗಿದೆ. 

ಸಾಮಾನ್ಯವಾಗಿ ಆಗಸ್ಟ್ ತಿಂಗಳಿನಲ್ಲಿ ಬೆಂಗಳೂರಿನಲ್ಲಿ ಸರಾಸರಿ 147 ಮಿ.ಮೀ ಮಳೆಯಾಗುತ್ತಿತ್ತು. ಆದರೆ ಈ ಬಾರಿ ಕೇವಲ 75.9 ಮಿ.ಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಅಂತೆಯೇ ನಿನ್ನೆ 5 ವರ್ಷಗಳಲ್ಲಿಯೇ ಆಗಸ್ಟ್ ತಿಂಗಳಿನಲ್ಲಿ ಗರಿಷ್ಠ ತಾಪಮಾನ ದಾಖಲಾಗಿದೆ. ನಿನ್ನೆ ನಗರದಲ್ಲಿ 31.6c ಉಷ್ಣಾಂಶ ದಾಖಲಾಗಿತ್ತು. ಇದು ಕಳೆದ ಐದು ವರ್ಷಗಳಲ್ಲಿ ಬೆಂಗಳೂರಿನಲ್ಲಿ ಉಂಟಾದ ಗರಿಷ್ಠ ಉಷ್ಣಾಂಶವಾಗಿದೆ.

ಆದರೆ ಸೆಪ್ಟೆಂಬರ್ ನಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದ್ದು, ಬೆಂಗಳೂರು ಸೇರಿದಂತೆ ದಕ್ಷಿಣ ಕರ್ನಾಟಕ ಭಾಗದಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com