ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಮೂರು ದಿನ ಮಳೆ: ಹವಾಮಾನ ಇಲಾಖೆ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ವರುಣನ ಆರ್ಭಟ ಆರಂಭವಾಗಿದ್ದು, ಮುಂದಿನ ಮೂರು ದಿನಗಳ ಕಾಲ ನಗರದಲ್ಲಿ ಮಳೆರಾಯ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ವರುಣನ ಆರ್ಭಟ ಆರಂಭವಾಗಿದ್ದು, ಮುಂದಿನ ಮೂರು ದಿನಗಳ ಕಾಲ ನಗರದಲ್ಲಿ ಮಳೆರಾಯ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಈ ಬಗ್ಗೆ ಮಾಹಿತಿ ನೀಡಿರುವ ರಾಜ್ಯ ಹವಾಮಾನ ಇಲಾಖೆ ಅಧಿಕಾರಿಗಳು ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಗಾಳಿಯು 30-40 ಕಿ.ಮೀವೇಗದಲ್ಲಿ ಬೀಸುತ್ತದೆ. ಬೆಂಗಳೂರು ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗಲಿದ್ದು, ಬೆಂಗಳೂರು  ನಗರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರದಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮೂಲಗಳು ತಿಳಿಸಿವೆ.

ಉಳಿದಂತೆ ಶಿವಮೊಗ್ಗ , ಹಾಸನ, ಚಾಮರಾಜನಗರ , ಮೈಸೂರು , ಮಂಡ್ಯ ಭಾರೀ ಮಳೆ ಸಾಧ್ಯತೆಯಿದೆ. ಇದರಿಂದಾಗಿ ದಕ್ಷಿಣ ಒಳನಾಡಿನಲ್ಲಿ ಕೂಡ ಸೆ. 1 ರಿಂದ 3 ರ ವರೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಿದೆ‌ ಎಂದು ಭಾರತೀಯ ಹವಾಮಾನ ಇಲಾಖೆಯ ನಿರ್ದೇಶಕ ಸಿ ಎಸ್ ಪಾಟೀಲ್ ಹೇಳಿಕೆ  ನೀಡಿದ್ದಾರೆ‌. ನಿನ್ನೆ ಕರಾವಳಿ ಭಾಗದ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಕೆಲವು ಕಡೆ ಮಾತ್ರ ಮಳೆಯಾಗಿದೆ. ಶಿರಾಡಿ, ಕುಮಟಾ, ಅಂಕೋಲಾ ತಲಾ ಎಂಟು ಸೆಂ.ಮೀ ಮಳೆಯಾಗಿದ್ದು, ಗೋಕರ್ಣಾ, ಕದರಾದಲ್ಲಿ ತಲಾ ಏಳು ಸೆಂ.ಮೀ ಮಳೆಯಾಗಿದೆ ಎಂದು ಹವಾಮಾನ  ಇಲಾಖೆ ಮಾಹಿತಿ ತಿಳಿಸಿದೆ. 

ಇನ್ನು, ಮಲೆನಾಡು ಭಾಗದಲ್ಲೂ ಮಳೆಯ ಅಬ್ಬರ ಮುಂದುವರಿಯುಲಿದೆ. ಹೀಗಾಗಿ, ಈ ಭಾಗದಲ್ಲೂ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಸೆಪ್ಟೆಂಬರ್ 1 ಮತ್ತು 2 ರಂದು ವ್ಯಾಪಕ ಮಳೆ ನಿರೀಕ್ಷೆಯಿದೆ. ಹೀಗಾಗಿ, ಕರಾವಳಿ ಹಾಗೂ ಮಲೆನಾಡು ಭಾಗದ ನದಿ ಅಂಚಿನ ಗ್ರಾಮದ ಜನರು ಕೊಂಚ ಎಚ್ಚರಿಕೆಯಿಂದ  ಇರುವಂತೆ ಸೂಚಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com