ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಕಾಂಗ್ರೆಸ್-ಜೆಡಿಎಸ್ ಬೆಂಬಲ

ಕೃಷಿ ಮಸೂದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಕಾಂಗ್ರೆಸ್ ಮತ್ತು ಜೆಡಿಎಸ್ ತಮ್ಮ ಬೆಂಬಲ ಸೂಚಿಸಿದ್ದು, ಕೇಂದ್ರ ಸರ್ಕಾರ ಪ್ರತಿಭಟನಾಕಾರರ ಜೊತೆ ಸಮಾಲೋಚಿಸಬೇಕೆಂದು ಆಗ್ರಹಿಸಿವೆ.
ದೆಹಲಿಯಲ್ಲಿ ರೈತರ ಪ್ರತಿಭಟನೆ
ದೆಹಲಿಯಲ್ಲಿ ರೈತರ ಪ್ರತಿಭಟನೆ

ಬೆಂಗಳೂರು: ಕೃಷಿ ಮಸೂದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಕಾಂಗ್ರೆಸ್ ಮತ್ತು ಜೆಡಿಎಸ್ ತಮ್ಮ ಬೆಂಬಲ ಸೂಚಿಸಿದ್ದು, ಕೇಂದ್ರ ಸರ್ಕಾರ ಪ್ರತಿಭಟನಾಕಾರರ ಜೊತೆ ಸಮಾಲೋಚಿಸಬೇಕೆಂದು ಆಗ್ರಹಿಸಿವೆ.

ರೈತರು ತಮ್ಮ ಬೇಡಿಕೆಗಳಿಗೆ ನ್ಯಾಯ ಒದಗಿಸುವಂತೆ ಕೇಳುತ್ತಿದ್ದಾರೆ, ಹೀಗಾಗಿ ಅವರನ್ನು ಚರ್ಚೆಗೆ ಆಹ್ವಾನಿಸಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿಯೂ ಸರ್ಕಾರ ಜಾರಿಗೆ ತಂದಿರುವ ಎಪಿಎಂಸಿ ಮತ್ತು ಕೃಷಿ ತಿದ್ದುಪಡಿ ಮಸೂದೆಗಳಿಗೆ ರೈತರಿಂದ ಭಾರೀ ವಿರೋಧ ವ್ಯಕ್ತ ವಾಗಿತ್ತು, ಕಾರ್ಮಿಕರು ಮತ್ತು ಅನೇಕ ಪ್ರಗತಿಪರ ಸಂಸ್ಥೆಗಳು ಮತ್ತು ಸರ್ಕಾರ ಈ ವಿಭಾಗಗಳ ಹಿತದೃಷ್ಟಿಯಿಂದ ಯಾವುದೇ ನಿರ್ಧಾರ ತೆಗೆದುಕೊಳ್ಳಬಾರದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇನ್ನೂ ರೈತರ ಪ್ರತಿಭಟನೆಗೆ ತಾವು ನಿರಂತರವಾಗಿ ಬೆಂಬಲ ನೀಡುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ರೈತರ ಕುಂದುಕೊರತೆಗಳ ಬಗ್ಗೆ ಕೇಂದ್ರ ಸರ್ಕಾರ ಗಮನ ಹರಿಸಬೇಕು, ಕಳೆದ ಐದು ದಿನಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ, ಚಳಿಗಾಲವಾದ್ದರಿಂದ ಅವರನ್ನು ಈ ರೀತಿ ಬಿಡುವುದು ಸರಿಯಲ್ಲ, ಕೊರೋನಾ ಜೊತೆಗೆ ಕೊರೆಯುವ ಚಳಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ, ಅವರ ಸಮಸ್ಯೆಗಳನ್ನು ಕೇಂದ್ರ ಸರ್ಕಾರ ಆಲಿಸಬೇಕು ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಇನ್ನೂ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ತಮ್ಮ ಬೆಂಬಲ ಸೂಚಿಸಲು ರಾಜ್ಯದ ರೈತರು ಕೂಡ ಬೆಂಗಳೂರಿನಲ್ಲಿ ಸೋಮವಾರ ಸಾಂಕೇತಿಕ ಪ್ರತಿಭಟನೆ ನಡೆಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com