
ಕೋವಾಕ್ಸಿನ್'ನ ಮೂರನೇ ಹಂತದ ಕ್ಲಿನಿಕಲ್ ಟ್ರಯಲ್ ಗೆ ಸಿಎಂ ಚಾಲನೆ
ಬೆಂಗಳೂರು: ಕೊರೊನಾ ವ್ಯಾಕ್ಸಿನ್ ಮೂರನೇ ಹಂತದ ಕ್ಲಿನಿಕಲ್ ಟ್ರಯಲ್ ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚಾಲನೆ ನೀಡಿದರು.
ಗೃಹ ಕಚೇರಿ ಕೃಷ್ಣಾದಲ್ಲಿಂದು ನಡೆದ ಸಭೆಯಲ್ಲಿ ವೈದೇಹಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ನಡೆಯುತ್ತಿರುವ ಕ್ಲಿನಿಕಲ್ ಟ್ರಯಲ್ ಗೆ ಚಾಲನೆ ನೀಡಿದರು.
ಭಾರತ್ ಬಯೋಟೆಕ್ ನ ಕೋವ್ಯಾಕ್ಸಿನ್ ಲಸಿಕೆಯ ಮೂರನೇ ಹಂತದ ಕ್ಲಿನಿಕಲ್ ಟ್ರಯಲ್ ನಡೆಯುತ್ತಿದೆ.
ಆರೋಗ್ಯ ಸಚಿವ @mla_sudhakar, ಕ್ಲಿಂಟ್ರಾಕ್ ಇಂಟರ್ ನ್ಯಾಷನಲ್ ಪ್ರೈ.ಲಿ ಸಂಸ್ಥೆಯ ಎಂ.ಕೆ.ಶ್ರೀನಿವಾಸಮೂರ್ತಿ ಆನ್ ಲೈನ್ ಮೂಲಕ ಭಾಗವಹಿಸಿದರು. ಆರೋಗ್ಯ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಜಾವೇದ್ ಅಖ್ತರ್ ಉಪಸ್ಥಿತರಿದ್ದರು. (2/2)
— CM of Karnataka (@CMofKarnataka) December 2, 2020
ಆತ್ಮನಿರ್ಬರ್ ಭಾರತದ ಅಡಿಯಲ್ಲಿ ಕೋವಿಡ್ - 19 ರ ಕೋವ್ಯಾಕ್ಸಿನ್ ಕ್ಲಿನಿಕಲ್ ಟ್ರಯಲ್ ಗೆ ಮುಖ್ಯಮಂತ್ರಿಗಳು ಚಾಲನೆ ನೀಡಿ ಮಾತನಾಡಿ, ಕೊವಿಡ್ ಮಹಾಮಾರಿ ವಿರುದ್ಧ ವೈದೇಹಿ ಸಂಸ್ಥೆ ಲಸಿಕೆ ಕಂಡು ಹಿಡಿಯಲು ಸಂಶೋಧನೆ ನಡೆಸುತ್ತಿರುವುದು ಸಂತಸದ ಸುದ್ದಿ. ಕೊವಿಡ್ ಮಹಾಮಾರಿ ತೊಲಗಿಸಲು ಎಲ್ಲರೂ ಶ್ರಮಿಸಬೇಕಾದ ಅಗತ್ಯವಿದೆ. ರೋಗ ತಡೆಗಟ್ಟಲು ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ಕಂಡು ಹಿಡಿಯುವ ಅಗತ್ಯವಿದೆ. ದೇಶದ ಭವಿಷ್ಯಕ್ಕಾಗಿ ಇನ್ನಷ್ಟು ಕಂಪನಿಗಳು ಲಸಿಕೆ ಕಂಡು ಹಿಡಿಯಲು ಸಂಶೋಧನೆ ನಡೆಸಲು ಮುಂದೆ ಬರಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಚಿವ ಡಾ.ಸುಧಾಕರ್. ವೈದೇಹಿ ಮೆಡಿಕಲ್ ಕಾಲೇಜಿನ ನಿರ್ದೇಶಕರಾದ ಡಾ.ರಾಜೇಶ್ ನಾಯ್ಡು ಉಪಸ್ಥಿತರಿದ್ದರು.