ಎಲ್ ಪಿಜಿ ಸಂಪರ್ಕ ಇಲ್ಲದವರಿಗೆ ಸೀಮೆಎಣ್ಣೆ ವಿತರಿಸುವ ಅಧಿಸೂಚನೆ ಪಾಲಿಸಿ: ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ಎಲ್ ಪಿಜಿ ಸಂಪರ್ಕ ಇಲ್ಲದ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ರಾಜ್ಯ ಸರ್ಕಾರ ಪ್ರತಿ ತಿಂಗಳು ಮೂರು ಲೀಟರ್ ಸೀಮೆಎಣ್ಣೆ ಒದಗಿಸಬೇಕು ಎಂದು ಹೈಕೋರ್ಟ್ ತಿಳಿಸಿದೆ.
Published: 02nd December 2020 08:34 PM | Last Updated: 02nd December 2020 08:38 PM | A+A A-

ಹೈಕೋರ್ಟ್
ಬೆಂಗಳೂರು: ಎಲ್ ಪಿಜಿ ಸಂಪರ್ಕ ಇಲ್ಲದ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ರಾಜ್ಯ ಸರ್ಕಾರ ಪ್ರತಿ ತಿಂಗಳು ಮೂರು ಲೀಟರ್ ಸೀಮೆಎಣ್ಣೆ ಒದಗಿಸಬೇಕು ಎಂದು ಹೈಕೋರ್ಟ್ ತಿಳಿಸಿದೆ. ರಾಜ್ಯ ಸರ್ಕಾರ 2016ರ ಜುಲೈನಲ್ಲಿ ಹೊರಡಿಸಿದ ಅಧಿಸೂಚನೆಯನ್ನು ಆಧರಿಸಿ ನ್ಯಾಯಾಲಯ ಈ ಆದೇಶ ಹೊರಡಿಸಿದೆ.
ವಕೀಲ ಎಸ್ . ಚಂದ್ರಶೇಖರಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ನ್ಯಾಯಪೀಠ ಈ ಆದೇಶ ನೀಡಿದೆ.
ರಾಜ್ಯ ಸರ್ಕಾರ 2016ರ ಜುಲೈ 27 ರಂದು ಎಲ್ ಪಿಜಿ ಸಂಪರ್ಕ ಹೊಂದಿಲ್ಲದ ಬಿಪಿಎಲ್ ಕಾರ್ಡ್ ಇರುವವರಿಗೆ ಸೀಮೆ ಎಣ್ಣೆ ವಿತರಿಸುವ ಕುರಿತು ಹೊರಡಿಸಿದ ಅಧಿಸೂಚನೆಯನ್ನು ಜಾರಿಗೆ ತರಬೇಕು ಎಂದು ನ್ಯಾಯಪೀಠ ಸೂಚನೆ ನೀಡಿತು.