ಮಂಗಳೂರು ದೋಣಿ ದುರಂತ: ಮತ್ತಿಬ್ಬರ ಮೃತದೇಹ ಪತ್ತೆ, ಉಳಿದವರಿಗಾಗಿ ಹುಡುಕಾಟ ತೀವ್ರ

ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ಪರ್ಸೀನ್ ಬೋಟ್ ಮಗುಚಿ ಸಂಭವಿಸಿದ್ದ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರ ಮೃತದೇಹಗಳು ಬುಧವಾರ ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ನಾಲ್ವರ ಮೃತದೇಹ ಪತ್ತೆಯಾದಂತಾಗಿದೆ. 

Published: 02nd December 2020 12:40 PM  |   Last Updated: 02nd December 2020 01:00 PM   |  A+A-


Boats look for the missing fishermen whose vessel capsized in the Arabian Sea.

ಶೋಧ ಕಾರ್ಯಾಚರಣೆ

Posted By : Manjula VN
Source : Online Desk

ಮಂಗಳೂರು: ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ಪರ್ಸೀನ್ ಬೋಟ್ ಮಗುಚಿ ಸಂಭವಿಸಿದ್ದ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರ ಮೃತದೇಹಗಳು ಬುಧವಾರ ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ನಾಲ್ವರ ಮೃತದೇಹ ಪತ್ತೆಯಾದಂತಾಗಿದೆ. 

ಬೊಕ್ಕಪಟ್ಣ ನಿವಾಸಿ ಚಿಂತನ್ (21) ಮತ್ತು ಕಸ್ಬಾ ಬೆಂಗ್ರೆ ನಿವಾಸಿ ಹಸೈನಾರ್ (25) ಅವರ ಮೃತದೇಹ ಇಂದು ಪತ್ತೆಯಾಗಿದೆ. 

ದುರಂತ ಸಂಭವಿಸಿದ ನಿನ್ನೆ ಬೊಕ್ಕಪಟ್ಣ ಬೆಂಗ್ರೆಯ ಪಾಂಡುರಂಗ ಸುವರ್ಣ (58) ಮತ್ತು ಪ್ರೀತಂ (25) ಎಂಬುವವರ ಮೃತದೇಹ ಪತ್ತೆಯಾಗಿತ್ತು.

ಉಳ್ಳಾಲದ ಅರಬ್ಬೀ ಸಮುದ್ರ ತೀರದಿಂದ ಸುಮಾರು 25 ಕಿ.ಮೀ ದೂರದಲ್ಲಿ ಮಂಗಳವಾರ ನಸುಕಿನ ಜಾವ ಘಟನೆ ಸಂಭವಿಸಿತ್ತು. ಬೋಳಾರದ ಉದ್ಯಮಿಯೋರ್ವರಿಗೆ ಸೇರಿದ ಶ್ರೀರಕ್ಷಾ ಬೋಟ್'ನಲ್ಲಿ ಸೋಮವಾರ ನಸುಕಿನ ಜಾವ 5ರ ವೇಳೆಗೆ ಧಕ್ಕೆಯಿಂದ ಆಳಸಮುದ್ರ ಮೀನುಗಾರಿಕೆಗೆ 25 ಮಂದಿ ತೆರಳಿದ್ದರು. ಬೆಳಗ್ಗಿನಿಂದ ಸಂಜೆಯವರೆಗೆ ಮೀನುಗಾರಿಕೆ ನಡೆಸಿ, ಮಂಗಳವಾರ ಮುಂಜಾನೆ ವಾಪಸ್ ಧಕ್ಕೆ ತಲುಪುವುದಿತ್ತು. ಆದರೆ, ಸಮಯ ಕಳೆದರೂ ಬೋಟ್ ವಾಪಸಾಗದ ಹಿನ್ನೆಲೆಯಲ್ಲಿ ಬೋಟ್ ಮಾಲೀಕರು ವಯರ್ ಲೆಸ್ ಮೂಲಕ ದೋಣಿಯಲ್ಲಿದ್ದವರನ್ನು ಸಂಪರ್ಕಿಸಲು ಯತ್ನಿಸಿದಾಗ ಸಂಪರ್ಕ ಸಾಧ್ಯವಾಗಿರಲಿಲ್ಲ. ಇದರಿಂದ ಸಂಶಯಗೊಂಡು ಉಳಿದ ಮೀನುಗಾರಿಕಾ ಬೋಟ್'ನವರನ್ನು ಸಂಪರ್ಕಿಸಿ ಬೋಟ್ ಹುಡುಕುವಂತೆ ತಿಳಿಸಿದ್ದಾರೆ. 

ಅದರಂತೆ ಇತರೆ ಮೀನುಗಾರಿಕಾ ಬೋಟ್'ನವರು ಆಳಸಮುದ್ರದಲ್ಲಿ ಹುಟುಕಾಟ ನಡೆಸಿದಾಗ ಒಂದು ಕಡೆಯಲ್ಲಿ ಖಾಲಿ ಬಲೆ ಪತ್ತೆಯಾಗಿತ್ತು. ಅಲ್ಲಿಂದ ಹಲವು ನಾಟಿಕಲ್ ಮೈಲ್ ದೀರದಲ್ಲಿ ಡೆಂಗೀಯಲ್ಲಿ 16 ಮಂದಿ ಕುಳಿತಿರುವುದು ಕಂಡು ಬಂದಿತ್ತು. ಕೂಡಲೇ ಅವರನ್ನು ಇತರೆ ಬೋಟ್'ನವರು ರಕ್ಷಿಸಿದ್ದಾರೆ. ಈ ವೇಳೆ ಆರು ಮಂದಿ ಬೋಟ್'ನ ಕ್ಯಾಬಿನ್ ಒಳಗಿದ್ದವರು ನಾಪತ್ತೆಯಾಗಿರುವ ಕುರಿತು ಮಾಹಿತಿ ನೀಡಿದ್ದಾರೆ. 

ಇದರಂತೆ ಕಾರ್ಯಾಚರಣೆ ಆರಂಭಿಸಿದ್ದ ಅಪರಾಹ್ನ ಮುಳುಗು ತಜ್ಞರು, ತೀವ್ರ ಹುಡುಕಾಟ ನಡೆಸಿ ಇಬ್ಬರ ಮೃತದೇಹಗಳನ್ನು ಮೇಲಕ್ಕೆತ್ತಿದ್ದರು. ಸಮುದ್ರದ ಅಲೆಗಳ ಏರಿಳಿತ ಹೆಚ್ಚಾದ ಹಿನ್ನೆಲೆಯಲ್ಲಿ ಮತ್ತು ಸಂಜೆಯಾದ ಕಾರಣ ರಕ್ಷಣಾ ಕಾರ್ಯಾಚರಣೆಯನ್ನು ದಿನದ ಮಟ್ಟಿಗೆ ಸ್ಥಗಿತಗೊಳಿಸಲಾಗಿತ್ತು. ಇದರಂತೆ ಇಂದು ಬೆಳಿಗ್ಗೆ ಪುನಃ ಕಾರ್ಯಾಚರಣೆ ಆರಂಭಿಸಿ ಮತ್ತಿಬ್ಬರ ಮೃಹದೇಹವನ್ನು ಮೇಲಕ್ಕೆತ್ತಿದ್ದಾರೆ. ಮತ್ತಿಬ್ಬರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಪ್ರಸ್ತುತ ಪತ್ತೆಯಾಗಿರುವ ನಾಲ್ವರ ಮೃತದೇಹಗಳನ್ನು ವೆನ್ಲಾಕ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕೊಂಡೊಯ್ಯಲಾಗಿದೆ. 

Stay up to date on all the latest ರಾಜ್ಯ news
Poll
Narendra Singh Tomar

ಕೃಷಿ ಕಾನೂನು ಸಂಬಂಧ ರೈತರು ಮತ್ತು ಕೇಂದ್ರದ ನಡುವಣ ಬಿಕ್ಕಟ್ಟಿಗೆ ಹೊರಗಿನ ಶಕ್ತಿಗಳು ಕಾರಣ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್‌ ಹೇಳಿದ್ದಾರೆ.


Result
ಹೌದು
ಇಲ್ಲ
flipboard facebook twitter whatsapp