ಸಿಎಂ ಕಾರ್ಯದರ್ಶಿ ಎನ್ ಆರ್ ಸಂತೋಷ್ ನೇಮಕ ಪ್ರಶ್ನಿಸಿ ಪಿಐಎಲ್: ಸರ್ಕಾರಕ್ಕೆ ಹೈಕೋರ್ಟ್ ನೊಟೀಸ್

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ಎನ್ ಆರ್ ಸಂತೋಷ್ ನೇಮಕ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.
ಹೈಕೋರ್ಟ್
ಹೈಕೋರ್ಟ್

ಬೆಂಗಳೂರು: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ಎನ್ ಆರ್ ಸಂತೋಷ್ ನೇಮಕ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.

ಮುಖ್ಯಮಂತ್ರಿಯವರು ಯಾವುದೇ ನೀತಿ ನಿಯಮ ಅನುಸರಿಸದೇ ಸ್ವತಂತ್ರ್ಯವಾಗಿ ರಾಜಕೀಯ ಕಾರ್ಯದರ್ಶಿ ಹುದ್ದೆ ಸೃಷ್ಟಿಸಿ ಅದಕ್ಕೆ ಸಂಪುಟ ದರ್ಜೆ ಸ್ಥಾನಮಾನ ಕಲ್ಪಿಸಿದ್ದಾರೆ ಎಂದು ವಕೀಲ ಎಸ್‌ ಉಮಾಪತಿ ಅವರು ಮನವಿ ಸಲ್ಲಿಸಿದ್ದಾರೆ. ನಿಯಮದ ಪ್ರಕಾರ ಖಾಸಗಿ ವ್ಯಕ್ತಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡುವಂತಿಲ್ಲ, ಆದರೂ ಸರ್ಕಾರ ಸಂತೋಷ್ ಅವರನ್ನು ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿರುವುದು ಕಾನೂನು ಬಾಹಿರ ಎಂದು ಅರ್ಜಿದಾರ ಎಸ್ ಉಮಾಪತಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಯಡಿಯೂರಪ್ಪ ಅವರ ಸಂಬಂಧಿಯಾದ ಸಂತೋಷ್‌ ಅವರನ್ನು ಒಳಗೊಳ್ಳುವ ಏಕೈಕ ಉದ್ದೇಶದಿಂದ ಹುದ್ದೆ ಸೃಷ್ಟಿಸಲಾಗಿದ್ದು, ಅದನ್ನು ರದ್ದುಗೊಳಿಸಬೇಕು ಎಂದು ಅರ್ಜಿದಾರರು ನ್ಯಾಯಾಲಯವನ್ನು ಕೋರಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಒಂದು ವಾರದೊಳಗೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿದೆ. 11ನೇ ಜನವರಿ, 2021ಕ್ಕೆ ಪ್ರಕರಣದ ವಿಚಾರಣೆ ಮುಂದೂಡಲ್ಪಟ್ಟಿದೆ.

ರಾಜಕೀಯ ಕಾರ್ಯದರ್ಶಿ ಹುದ್ದೆಯನ್ನು ಯಾವ ನಿಯಮಾವಳಿ, ಅಧಿಕಾರದಡಿ ಸೃಷ್ಟಿಸಲಾಗಿದೆ ಎನ್ನುವ ಬಗ್ಗೆ ಮಾಹಿತಿ ಪಡೆದ ನಂತರ ಮುಖ್ಯ ನ್ಯಾಯಮೂರ್ತಿ ಅಭಯ್‌ ಶ್ರೀನಿವಾಸ್‌ ಓಕಾ ಅವರ ನೇತೃತ್ವದ ವಿಭಾಗೀಯ ಪೀಠವು ನೋಟಿಸ್‌ ಜಾರಿಗೊಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com