ರೈತರ 'ದೆಹಲಿ ಚಲೋ' ಪ್ರತಿಭಟನೆಗೆ ಬೆಂಬಲ; ಹೊಸಪೇಟೆ-ಬಳ್ಳಾರಿ‌ ಹೆದ್ದಾರಿಯಲ್ಲಿ‌ ರಸ್ತೆ ತಡೆದು ಪ್ರತಿಭಟನೆ

ಕೃಷಿ ಸಂಬಂಧಿತ ತಿದ್ದುಪಡಿ ಕಾಯ್ದೆ ಹಿಂಪಡೆಯುವಂತೆ ಒತ್ತಾಯಿಸಿ ಹಾಗೂ ನವದೆಹಲಿಯಲ್ಲಿ ರೈತರು ನಡೆಸುತ್ತಿರುವ ಧರಣಿಯನ್ನು ಬೆಂಬಲಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು‌ ಸೇನೆಯ ಕಾರ್ಯಕರ್ತರು ಹೊಸಪೇಟೆ-ಬಳ್ಳಾರಿ‌ ಹೆದ್ದಾರಿಯಲ್ಲಿ‌ ರಸ್ತೆತಡೆದು ಬುಧವಾರ ಪ್ರತಿಭಟನೆ ನಡೆಸಿದರು.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಹೊಸಪೇಟೆ: ಕೃಷಿ ಸಂಬಂಧಿತ ತಿದ್ದುಪಡಿ ಕಾಯ್ದೆ ಹಿಂಪಡೆಯುವಂತೆ ಒತ್ತಾಯಿಸಿ ಹಾಗೂ ನವದೆಹಲಿಯಲ್ಲಿ ರೈತರು ನಡೆಸುತ್ತಿರುವ ಧರಣಿಯನ್ನು ಬೆಂಬಲಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು‌ ಸೇನೆಯ ಕಾರ್ಯಕರ್ತರು ಹೊಸಪೇಟೆ-ಬಳ್ಳಾರಿ‌ ಹೆದ್ದಾರಿಯಲ್ಲಿ‌ ರಸ್ತೆತಡೆದು ಬುಧವಾರ ಪ್ರತಿಭಟನೆ ನಡೆಸಿದರು.

ನವದೆಹಲಿಯಲ್ಲಿ ರೈತರ ಮೇಲೆ ನಡೆಸುತ್ತಿರುವ ದೌರ್ಜನ್ಯ ಖಂಡಿಸಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನಕಾರರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು .

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರಧಾನ ಕಾರ್ಯದರ್ಶಿ ಜೆ. ಕಾರ್ತಿಕ್ ಮಾತನಾಡಿ, ಕೋವಿಡ್ -19 ಲಾಕ್‌ ಡೌನ್‌ ಸಮಯದಲ್ಲಿ ಕೇಂದ್ರ ಸರ್ಕಾರ ರೈತರಿಗೆ ಮಾರಕವಾಗುವ ಕಾಯ್ದೆಗಳನ್ನು ಜಾರಿಗೆ ತಂದಿದೆ. ಇದನ್ನು ವಿರೋಧಿಸಿ ಪಂಜಾಬ್, ಹರಿಯಾಣ ಸೇರಿ ದೇಶದ ವಿವಿಧ ಭಾಗಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದರೂ ತಕ್ಕ ಸ್ಪಂದನೆ ಸರ್ಕಾರದಿಂದ ಸಿಗುತ್ತಿಲ್ಲ ಎಂದು ಅವರು ಆರೋಪಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com