ಭಾರತೀಯ ರೈಲ್ವೆಯಲ್ಲಿ ಬೃಹತ್ 1.4 ಲಕ್ಷ ನೇಮಕಾತಿ ಪ್ರಕ್ರಿಯೆ: ಡಿ.15ರಂದು ಪರೀಕ್ಷೆ ಆರಂಭ 

ಭಾರತೀಯ ರೈಲ್ವೆಯಲ್ಲಿ ಅತಿದೊಡ್ಡ ನೇಮಕಾತಿ ಪ್ರಕ್ರಿಯೆ ನಡೆಯಲಿದ್ದು 1 ಲಕ್ಷದ 40 ಸಾವಿರದ 640 ಹುದ್ದೆಗಳ ಭರ್ತಿಗೆ ಡಿಸೆಂಬರ್ 15ರಿಂದ ಕಂಪ್ಯೂಟರ್ ಆಧಾರಿತ ಪರೀಕ್ಷೆಗಳು ವಿವಿಧ ವರ್ಗಗಳಲ್ಲಿ ನಡೆಯಲಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಭಾರತೀಯ ರೈಲ್ವೆಯಲ್ಲಿ ಅತಿದೊಡ್ಡ ನೇಮಕಾತಿ ಪ್ರಕ್ರಿಯೆ ನಡೆಯಲಿದ್ದು 1 ಲಕ್ಷದ 40 ಸಾವಿರದ 640 ಹುದ್ದೆಗಳ ಭರ್ತಿಗೆ ಡಿಸೆಂಬರ್ 15ರಿಂದ ಕಂಪ್ಯೂಟರ್ ಆಧಾರಿತ ಪರೀಕ್ಷೆಗಳು ವಿವಿಧ ವರ್ಗಗಳಲ್ಲಿ ನಡೆಯಲಿದೆ. 

ಕೋವಿಡ್-19 ಸಾಂಕ್ರಾಮಿಕ ಮತ್ತು ಲಾಕ್ ಡೌನ್ ಹಿನ್ನೆಲೆಯಲ್ಲಿ ನೇಮಕಾತಿ ಪ್ರಕ್ರಿಯೆ ಮುಂದೂಡಲ್ಪಟ್ಟಿತ್ತು. ಈ ಸಂಬಂಧ ಪ್ರಕಟಣೆ ಹೊರಡಿಸಿರುವ ನೈರುತ್ಯ ರೈಲ್ವೆ, ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು, ಉದ್ಯೋಗ ಕೊಡಿಸುತ್ತೇವೆ ಎಂದು ಸುಳ್ಳು ಭರವಸೆ, ಆಮಿಷ ಒಡ್ಡುವವರಿಗೆ ಬಲಿಯಾಗಬೇಡಿ, ಅನಧಿಕೃತವಾಗಿ ಉದ್ಯೋಗ ಪಡೆಯಲು ಪ್ರಯತ್ನಿಸಿದವರು ಮತ್ತು ಕೊಡಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದೆ.

ರೈಲ್ವೆ ಇಲಾಖೆಯಲ್ಲಿ ಮೂರು ವಿಧದ ನೇಮಕಾತಿ ಪ್ರಕ್ರಿಯೆ ನಡೆಯಲಿದ್ದು ಕಳೆದ ವರ್ಷ ಫೆಬ್ರವರಿಯಲ್ಲಿ ನೇಮಕಾತಿ ಪ್ರಕಟಣೆ ಹೊರಡಿಸಲಾಗಿತ್ತು. 35 ಸಾವಿರದ 208 ತಾಂತ್ರಿಕರಹಿತ ವಿಭಾಗಗಳು, 1,663 ಪ್ರತ್ಯೇಕ ಮತ್ತು ಸಚಿವಾಲಯ ವಿಭಾಗಗಳು ಮತ್ತು 1 ಲಕ್ಷದ 03 ಸಾವಿರದ 769 ಒಂದನೇ ಹಂತದ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಪರೀಕ್ಷೆಗಳು ಮತ್ತು ನೇಮಕಾತಿಗೆ ಸಂಬಂಧಪಟ್ಟಂತೆ ಭಾರತೀಯ ರೈಲ್ವೆ ನೇಮಕಾತಿ ಮಂಡಳಿಯ ಅಧಿಕೃತ ವೆಬ್ ಸೈಟ್ ನಲ್ಲಿ ನೋಡಬಹುದು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com