ಮೊಸಳೆ ದಾಳಿಗೆ ಯುವಕ ಬಲಿ: ಬಾಲಕನ ತಲೆ ಬುರುಡೆ ಮಾತ್ರ ಪತ್ತೆ

ಕೃಷ್ಣ ನದಿಯಲ್ಲಿ‌ ಮೊಸಳೆಯೊಂದು ಬಾಲಕನ ಮೇಲೆ ದಾಳಿ ಮಾಡಿ ಬಲಿಪಡೆದಿರುವ ಮನಕಲಕುವ ಘಟನೆ ಜಿಲ್ಲೆಯ ಡೊಂಗಾರಾಂಪುರ ಗ್ರಾಮದಲ್ಲಿ ವರದಿಯಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ರಾಯಚೂರು: ಕೃಷ್ಣ ನದಿಯಲ್ಲಿ‌ ಮೊಸಳೆಯೊಂದು ಬಾಲಕನ ಮೇಲೆ ದಾಳಿ ಮಾಡಿ ಬಲಿಪಡೆದಿರುವ ಮನಕಲಕುವ ಘಟನೆ ಜಿಲ್ಲೆಯ ಡೊಂಗಾರಾಂಪುರ ಗ್ರಾಮದಲ್ಲಿ ವರದಿಯಾಗಿದೆ.

12 ವರ್ಷದ ಮಲ್ಲಿಕಾರ್ಜುನ ಮೊಸಳೆಗೆ ಬಲಿಯಾದ ದುರ್ದೈವಿ. ಬುಧವಾರ ಮಲ್ಲಿಕಾರ್ಜುನ ತನ್ನ ಸ್ನೇಹಿತರೊಂದಿಗೆ ದನ ಮೇಯಿಸಲು ತೆರಳಿದ್ದನು. ಈ ವೇಳೆ ನೀರು‌ ಕುಡಿಯಲು ಆತ ಕೃಷ್ಣ ನದಿಗೆ ಇಳಿದಿದ್ದ. ಆಗ ಮೊಸಳೆಯೊಂದು ಆತನ ಮೇಲೆ ದಾಳಿ ಮಾಡಿ ಎಳೆದೊಯ್ದಿದೆ. ಇದನ್ನು ಕಣ್ಣಾರೆಕಂಡ ಮಲ್ಲಿಕಾರ್ಜುನ್ ಸ್ನೇಹಿತರು ತಕ್ಷಣವೇ ವಿಷಯವನ್ನು ಗ್ರಾಮಸ್ಥರಿಗೆ ತಿಳಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಸ್ಥಳೀಯ ಮೀನುಗಾರರ ಎರಡು ತೆಪ್ಪ ಬಳಸಿ ಮಲ್ಲಿಕಾರ್ಜುನನಿಗಾಗಿ ಶೋಧಕಾರ್ಯ ನಡೆಸಿದರು ಬಾಲಕ ಸುಳಿವು ಪತ್ತೆಯಾಗಲಿಲ್ಲ. 

ಬುಧವಾರ ರಾತ್ರಿ ಬಾಲಕನ ತಲೆ ಬುರುಡೆ ದೊರೆತಿದ್ದು, ಮೊಸಳೆ ಬಾಲಕನ ಇಡೀ ದೇಹವನ್ನು ಸಂಪೂರ್ಣವಾಗಿ ತಿಂದು ಹಾಕಿದೆ. 

ವಿದ್ಯಾಗಮ ಯೋಜನೆ ಸದ್ಯ ಬಂದ್ ಆದ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ನಿತ್ಯ ಕೂಲಿ ಕೆಲಸಕ್ಕೆ ತೆರಳುತ್ತಿದ್ದ. ಆದರೆ, ಬಾಲ ಕಾರ್ಮಿಕರನ್ನು ಪತ್ತೆ ಹಚ್ಚಿ‌ ದೂರು ದಾಖಲಿಸಿದ್ದ ಹಿನ್ನೆಲೆಯಲ್ಲಿ ನಿನ್ನೆ ಕೂಲಿ ಕೆಲಸ ಬಿಟ್ಟು ದನ ಕಾಯಲು ತೆರಳಿದ್ದ. ಮಧ್ಯಾಹ್ನ ಉಟ ಮಾಡಿ ನದಿ ದಂಡೆಯಲ್ಲಿ ನೀರು ಕುಡಿಯಲು ಹೋಗಿದ್ದಾಗ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.

ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಯಾಪಲದಿನ್ನಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com