ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವು: ಸಚಿವ ಕೆ.ಎಸ್. ಈಶ್ವರಪ್ಪ ವಿಶ್ವಾಸ

ರಾಜ್ಯದಲ್ಲಿ ಯಾವುದೇ ಚುನಾವಣೆ ಇದ್ದರೂ ಅಲ್ಲಿ ಭಾರತೀಯ ಜನತಾ ಪಾರ್ಟಿಯ ಗೆಲುವು ಮತ್ತು ಕಾಂಗ್ರೆಸ್ ಪಕ್ಷದ ಸೋಲು ಎಂಬುದು ತೀರ್ಮಾನವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

Published: 03rd December 2020 08:26 PM  |   Last Updated: 03rd December 2020 08:26 PM   |  A+A-


KSEshwarappa1

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ

Posted By : Nagaraja AB
Source : UNI

ತುಮಕೂರು: ರಾಜ್ಯದಲ್ಲಿ ಯಾವುದೇ ಚುನಾವಣೆ ಇದ್ದರೂ ಅಲ್ಲಿ ಭಾರತೀಯ ಜನತಾ ಪಾರ್ಟಿಯ ಗೆಲುವು ಮತ್ತು ಕಾಂಗ್ರೆಸ್ ಪಕ್ಷದ ಸೋಲು ಎಂಬುದು ತೀರ್ಮಾನವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ಇಂದು ನಡೆದ ಗ್ರಾಮ ಸ್ವರಾಜ್ಯ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜರಾಜೇಶ್ವರಿ ನಗರ, ಶಿರಾ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ, ವಿಧಾನ ಪರಿಷತ್ ನ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಜಯಭೇರಿಯಿಂದ ಇದು ಸಾಬೀತಾಗಿದೆ. ಹಿಂದಿ ಉಪ ಚುನಾವಣೆಗಳಲ್ಲೂ ಬಿಜೆಪಿ ಅಭ್ಯರ್ಥಿಗಳು ಗರಿಷ್ಠ ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ. ದೇಶ, ರಾಜ್ಯಗಳಲ್ಲಿ ಬಿಜೆಪಿ ನಿರಂತರ ಗೆಲುವು ಸಾಧಿಸುತ್ತಿರುವುದಕ್ಕೆ ಪಕ್ಷದ ಕಾರ್ಯಕರ್ತರೇ ಕಾರಣ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಜಾರಿಗೊಳಿಸಿದ ಅಭಿವೃದ್ಧಿ ಕಾರ್ಯಗಳು, ರಾಜ್ಯ ಸರ್ಕಾರದ ಅತ್ಯುತ್ತಮ ಯೋಜನೆಗಳು ಪಕ್ಷದ ಗೆಲುವಿಗೆ ಸಹಕಾರಿಯಾಗಲಿವೆ. ಪಕ್ಷದ ಅಭೂತಪೂರ್ವ ಗೆಲುವಿಗೆ ಶಾಸಕರು, ಜಿಲ್ಲಾ ಪಂಚಾಯತ್ ಸದಸ್ಯರು ಶ್ರಮಿಸಬೇಕು ಎಂದು ಅವರು ಮನವಿ ಮಾಡಿದರು.

Stay up to date on all the latest ರಾಜ್ಯ news
Poll
Farmers_ride_tractors1

ರೈತರು ದೆಹಲಿಯಲ್ಲಿ ತಮ್ಮ ಗಣರಾಜ್ಯೋತ್ಸವ ದಿನದ ಟ್ರಾಕ್ಟರ್ ರ್ಯಾಲಿಯನ್ನು ನಿಲ್ಲಿಸಬೇಕೇ?


Result
ಹೌದು
ಬೇಡ
flipboard facebook twitter whatsapp