ಬೆಂಗಳೂರಿನಲ್ಲಿ ತುಂತುರು ಮಳೆಯಾಗಿರುವುದು
ಬೆಂಗಳೂರಿನಲ್ಲಿ ತುಂತುರು ಮಳೆಯಾಗಿರುವುದು

ಬುರೆವಿ ಸೈಕ್ಲೋನ್ ಎಫೆಕ್ಟ್: ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಚಳಿ ಜೊತೆಗೆ ತುಂತುರು ಮಳೆ

ಬುರೆವಿ ಚಂಡಮಾರುತ ಪ್ರಭಾವದಿಂದ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗುರುವಾರ ಚಳಿ ಜೊತೆಗೆ ತುಂತುರು ಮಳೆಯಾಗುತ್ತಿದೆ. 

ಬೆಂಗಳೂರು: ಬುರೆವಿ ಚಂಡಮಾರುತ ಪ್ರಭಾವದಿಂದ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗುರುವಾರ ಚಳಿ ಜೊತೆಗೆ ತುಂತುರು ಮಳೆಯಾಗುತ್ತಿದೆ. 

ಬೆಂಗಳೂರು ಸೇರಿದಂತೆ ಅಕ್ಕಪಕ್ಕದ ಜಿಲ್ಲೆಗಳಲ್ಲಿಯೂ ಶೀತಗಾಳಿ ಜೊತೆಗೆ ಮಳೆಯಾಗುತ್ತಿರುವುದು ಕಂಡು ಬಂದಿದೆ. ಕರಾವಳಿ ಭಾಗದಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. 

ಬುರೆವಿ ಚಂಡಮಾರುತ ಪರಿಣಾಮ ರಾಜ್ಯದ ಹಲವೆಡೆ ಮೋಡ ಕವಿದ ವಾತಾವರಣ, ತುಂತುರು ಮಳೆಯಾಗುತ್ತಿದೆ. ಇಂದು ಮತ್ತು ನಾಳೆ ಸಂಜೆ ವೇಳೆ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. 

ಈಗಾಗಲೇ ಬೆಂಗಳೂರಿನಲ್ಲಿ ತುಂತುರು ಮಳೆ ಆರಂಭವಾಗಿದ್ದು, ಮೈಕೊರೆಯುವ ಚಳಿ ಶುರುವಾಗಿದೆ. ಈ ನಡುವೆ ನೆರೆ ರಾಜ್ಯ ಕೇರಳದ 9 ಜಿಲ್ಲೆಗಳಲ್ಲಿ ಬುರೆವಿ ಅಬ್ಬರ ಜೋರಾಗಿದ್ದು, ರೆಡ್ ಮತ್ತು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ. 

Related Stories

No stories found.

Advertisement

X
Kannada Prabha
www.kannadaprabha.com