ಮಂಗಳೂರು: ಉಗ್ರರ ಪರ ಗೋಡೆ ಬರಹ ಪ್ರಕರಣ; ಓರ್ವ ಆರೋಪಿ ಬಂಧನ

ಮಂಗಳೂರು ನಗರದಲ್ಲಿ ಉಗ್ರರ ಪರ ಗೋಡೆ ಬರಹ ಬರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಗುರುವಾರ ತಿಳಿದುಬಂದಿದೆ. 

Published: 03rd December 2020 12:09 PM  |   Last Updated: 03rd December 2020 12:51 PM   |  A+A-


ಉಗ್ರರ ಪರ ಗೋಡೆ ಬರಹ

ಉಗ್ರರ ಪರ ಗೋಡೆ ಬರಹ ಬರೆದಿರುವುದು

Posted By : Manjula VN
Source : Online Desk

ಮಂಗಳೂರು: ಮಂಗಳೂರು ನಗರದಲ್ಲಿ ಉಗ್ರರ ಪರ ಗೋಡೆ ಬರಹ ಬರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಗುರುವಾರ ತಿಳಿದುಬಂದಿದೆ. 

ಆರೋಪಿಯನ್ನು ತೀರ್ಥಹಳ್ಳಿಯ ನಝೀರ್ ಮೊಹಮ್ಮದ್ (26) ಎಂದು ಗುರ್ತಿಸಲಾಗಿದೆ. ಆರೋಪಿಯನ್ನು ಕದ್ರಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು ವಿಚಾರಣೆಗೊಳಪಡಿಸಿದ್ದಾರೆಂದು ವರದಿಗಳು ತಿಳಿಸಿವೆ. 

ಬಂಧಿತ ಆರೋಪಿ ಆನ್'ಲೈನ್ ಫುಡ್ ಡೆಲಿವರಿ ಕೆಲಸ ಮಾಡಿಕೊಂಡಿದ್ದ ಎಂದು ಹೇಳಲಾಗುತ್ತಿದ್ದು, ಮೊಬೈಲ್ ದಾಖಲೆ ಆಧರಿಸಿ ಬಂಧನಕ್ಕೊಳಪಡಿಸಲಾಗಿದೆ ಎಂದು ಹೇಳಲಾಗುತ್ತಿದೆ. 

ನ.27ರಂದು ಕದ್ರಿ‌ ಪೊಲೀಸ್ ಠಾಣೆ ಸಮೀಪದ ಬಿಜೈ ಬಳಿಯ ರಸ್ತೆಯ ಗೋಡೆಯೊಂದರಲ್ಲಿ "ನಮ್ಮನ್ನು ವಿದ್ವಂಸಕ ಕೃತ್ಯ ನಡೆಸಲು ಉತ್ತೇಜಿಸಲು ಬರಬೇಡಿ, ಲಷ್ಕರ್ ಇ ತೊಯಿಬಾ ಮತ್ತು ತಾಲಿಬಾನ್ ಗಳಿಗೆ ಸಂಘಿಗಳನ್ನು ಯಾವ ರೀತಿ ನೋಡಿಕೊಳ್ಳಬೇಕು ಎನ್ನುವುದು ತಿಳಿದಿದೆ.'' ಅಲ್ಲದೆ 'ಲಷ್ಕರ್ ಝಿಂದಾಬಾದ್' ಎಂದು ಬರೆಯಲಾಗಿತ್ತು. ಬಳಿಕ ನ.29ರಂದು ನಗರದ ಪಿವಿಎಸ್ ಸಮೀಪದ ನ್ಯಾಯಾಲಯದ ಆವರಣದ ಹಳೆ ಕಟ್ಟಡದ ಗೋಡೆಯ ಮೇಲೆ "Gustak e rasool ek hi saza tan say juda" ಎಂದು ಬರಹ ಪ್ರತ್ಯಕ್ಷವಾಗಿತ್ತು. ಪ್ರವಾದಿಗೆ ಕೋಪ ಬಂದರೆ ಒಂದೇ ಶಿಕ್ಷೆ, ತಲೆಯು ದೇಹದಿಂದ ಬೇರ್ಪಡುವುದು ಎಂಬ ಅರ್ಥ ನೀಡುವ ಬರವಣಿಗೆ ಇದಾಗಿದೆ.

Stay up to date on all the latest ರಾಜ್ಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp