ರೈತರನ್ನು ಹೇಡಿ ಎಂದು ಕರೆದಿಲ್ಲ: ಕೃಷಿ ಸಚಿವ ಬಿಸಿ ಪಾಟೀಲ್ ಸ್ಪಷ್ಟನೆ

ತಮ್ಮ ಹೇಳಿಕೆ ವಿವಾದದ ರೂಪ ಪಡೆದುಕೊಳ್ಳುತ್ತಿದ್ದಂತೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಗುರುವಾರ ಸ್ಪಷ್ಟನೆ ನೀಡಿದ್ದಾರೆ.
ಬಿಸಿ ಪಾಟೀಲ್
ಬಿಸಿ ಪಾಟೀಲ್

ಬೆಂಗಳೂರು: ತಮ್ಮ ಹೇಳಿಕೆ ವಿವಾದದ ರೂಪ ಪಡೆದುಕೊಳ್ಳುತ್ತಿದ್ದಂತೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಗುರುವಾರ ಸ್ಪಷ್ಟನೆ ನೀಡಿದ್ದಾರೆ.

ತಾವು ರೈತರನ್ನು ಹೇಡಿ ಎಂದು ಎಂದಿಗೂ ಸಂಬೋಧಿಸಿಲ್ಲ. ಆತ್ಮಹತ್ಯೆಯಂತಹ ಕೆಲಸ ಹೇಡಿತನದ್ದು ಎಂದಿದ್ದೇನೆ‌. ಯಾರೇ ಆಗಲೀ ಆತ್ಮಹತ್ಯೆಯಂತಹ ಹೇಡಿತನದ‌ ಕೆಲಸಕ್ಕೆ ಮುಂದಾಗಬಾರದು. ಕಷ್ಟನಷ್ಟಗಳನ್ನು ಈಜಿ ಜಯಿಸಬೇಕು ಎಂದು ಹೇಳಿದ್ದೇನೆ ಎಂದಿದ್ದಾರೆ.

ಕಷ್ಟಗಳು ಇಂದಿದ್ದಂತೆ ನಾಳೆ ಇರುವುದಿಲ್ಲ. ಕತ್ತಲಾದ ಮೇಲೆ ಬೆಳಕು ಬಂದೇ ಬರುತ್ತದೆ. ಕೋಲಾರ ಜಿಲ್ಲೆಯ ರೈತರು ಆತ್ಮಹತ್ಯೆ ಮಾಡಿಕೊಳ್ಳುವುದಿಲ್ಲ ಎಂದು ಸಮಗ್ರ ಕೃಷಿ‌ನೀತಿಯನ್ನು ಅಳವಡಿಸಿಕೊಂಡು ಮಾದರಿಯಾಗಿದ್ದಾರೆ.

ಕೋಲಾರ ರೈತರು ಮಾದರಿ ಎಂದಿದ್ದೇನೆ. ರೈತರ ಆತ್ಮಹತ್ಯೆ ಪ್ರಯತ್ನಗಳನ್ನು ತಡೆಯುವ ನಿಟ್ಟಿನಲ್ಲಿ ರೈತರೊಂದಿಗೆ ಒಂದು ದಿನ ಕಾರ್ಯಕ್ರಮ ಹಮ್ಮಿಕೊಂಡಿದ್ದೇನೆ. ಸಮಗ್ರ ಕೃಷಿ ನೀತಿಯನ್ನು ರೈತರು ಹೆಚ್ಚೆಚ್ಚು ಅಳವಡಿಸಿಕೊಳ್ಳಬೇಕು ಎಂದು ಕೃಷಿ ಸಚಿವರು ತಿಳಿಸಿದ್ದಾರೆ.

ಇಂದು ಬೆಳಗ್ಗೆ ಮಡಿಕೇರಿಯ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ಕಾಯ೯ಕ್ರಮದಲ್ಲಿ ಮಾತನಾಡಿದ ಬಿಸಿ ಪಾಟೀಲ್, ಸಮಸ್ಯೆಗಳಲ್ಲಿ ಸಿಲುಕಿರುವ ರೈತರು ಶ್ರಮವಹಿಸಿ ಸಮಸ್ಯೆಗಳ ಸುಳಿಯಿಂದ ಹೊರಬರುವಂತಾಗಬೇಕು. ಅದು ಬಿಟ್ಟು ಹೇಡಿಗಳಂತೆ ಸಾವಿಗೆ ಶರಣಾಗಬಾರದು. ಹೆಂಡತಿ, ಮಕ್ಕಳನ್ನು ನೋಡಿಕೊಳ್ಳಲಾಗದೇ ಆತ್ಮಹತ್ಯೆ ಮಾಡಿಕೊಳ್ಳುವಾತ ಹೇಡಿ ಎಂದು ಹೇಳಿದ್ದರು. ಸಚಿವರ ಈ ಹೇಳಿಕೆಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದವು ಮತ್ತು ಬಿಸಿ ಪಾಟೀಲ್ ಅವರು ಈ ಕೂಡಲೇ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದವು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com