ಎಎಸ್ಐ ಆಗಿ ಬಡ್ತಿ ಹೊಂದಲಿದ್ದ ಪೊಲೀಸ್ ಮುಖ್ಯಪೇದೆ ಅಪಘಾತದಲ್ಲಿ ದುರ್ಮರಣ
ಕಾರು-ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಂದು ಎಎಸ್ಐ ಆಗಿ ಬಡ್ತಿ ಹೊಂದಲಿದ್ದ ಪೊಲೀಸ್ ಮುಖ್ಯಪೇದೆ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಚಿಕ್ಕಮಗಳೂರು ತಾಲೂಕಿನ ಹಿರೇಗೌಜ ಗ್ರಾಮದ ಬಳಿ ಬುಧವಾರ ರಾತ್ರಿ ಸಂಭವಿಸಿದೆ.
Published: 03rd December 2020 01:10 PM | Last Updated: 03rd December 2020 01:32 PM | A+A A-

ಮೃತ ಪೊಲೀಸ್ ಮುಖ್ಯಪೇದೆ ಸಿದ್ದರಾಮಪ್ಪ
ಚಿಕ್ಕಮಗಳೂರು: ಕಾರು-ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಂದು ಎಎಸ್ಐ ಆಗಿ ಬಡ್ತಿ ಹೊಂದಲಿದ್ದ ಪೊಲೀಸ್ ಮುಖ್ಯಪೇದೆ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಚಿಕ್ಕಮಗಳೂರು ತಾಲೂಕಿನ ಹಿರೇಗೌಜ ಗ್ರಾಮದ ಬಳಿ ಬುಧವಾರ ರಾತ್ರಿ ಸಂಭವಿಸಿದೆ. 48 ವರ್ಷದ ಸಿದ್ದರಾಮಪ್ಪ ಅಸುನೀಗಿದ್ದಾರೆ.
ಕಡೂರು ತಾಲೂಕಿನ ಸಖರಾಯಪಟ್ಟಣ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಿದ್ದರಾಮಪ್ಪ ಅವರು ಚಿಕ್ಕಮಗಳೂರು ನಗರದಲ್ಲಿ ವಾಸವಿದ್ದರು. ಬುಧವಾರ ಕರ್ತವ್ಯ ಮುಗಿಸಿ ಚಿಕ್ಕಮಗಳೂರು ನಗರಕ್ಕೆ ಹಿಂದಿರುಗುತ್ತಿದ್ದಾಗ ಚಿಕ್ಕಮಗಳೂರು ತಾಲೂಕಿನ ಹಿರೇಗೌಜ ಬಳಿ ಕಾರು-ಬೈಕ್ ಮುಖಾಮುಖಿಯಾಗಿ ಡಿಕ್ಕಿಯಾಗಿದ್ದು, ಈ ದುರ್ಘಟನೆಯಲ್ಲಿ ಮೃತಪಟ್ಟಿದ್ದಾರೆ.
ಮಾಹಿತಿ ಸಿಕ್ಕಿದೊಡನೆ ಸಖರಾಯಪಟ್ಟಣ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಜಿಲ್ಲೆಯ ವಿವಿಧ ಠಾಣೆಯಲ್ಲಿ 25 ವರ್ಷಗಳ ಕಾಲ ಸೇವೆ ಸಲ್ಲಿಸಿ ಇಂದು ಎಎಸ್‍ಐ ಆಗಬೇಕಿದ್ದ ಸಿಬ್ಬಂದಿಯನ್ನು ಕಳೆದುಕೊಂಡಿದ್ದರಿಂದ ಅವರ ಇಲಾಖೆ ಸಹೋದ್ಯೋಗಿಗಳು, ಸಿಬ್ಬಂದಿ ಕಂಬನಿ ಮಿಡಿದಿದ್ದಾರೆ.