ಲಂಚ ಸ್ವೀಕರಿಸುವಾಗ ಬಲೆಗೆ ಬಿದ್ದ ಅಧಿಕಾರಿ: ಎಸಿಬಿಯಿಂದ ಮೂವರ ಬಂಧನ

ಪರವಾನಗಿ ನೀಡಲು ನಿವೃತ್ತ ಕಾರ್ಮಿಕ ಇನ್‌ಸ್ಪೆಕ್ಟರ್ ಶಿವಕುಮಾರ್ ಮತ್ತು ಸಹಾಯಕ ಕಾರ್ಮಿಕ ಆಯುಕ್ತ ಸಂತೋಷ್ ಹಿಪ್ಪರಗಿ 1.80 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಬುಧವಾರ ಎಸಿಬಿ ಬೆಲೆಗೆ ಬಿದ್ದಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಭ್ರಷ್ಟಾಚಾರ ತಡೆ ಕಾಯಿದೆ ಅನ್ವಯ ಎಸಿಬಿ ತಂಡ ಮೂವರು ಅಧಿಕಾರಿ ಮತ್ತು ನಿವೃತ್ತ ಅಧಿಕಾರಿಯನ್ನು ಬಂಧಿಸಿದೆ. 

ಕಾರ್ಮಿಕ ಇಲಾಖೆ ಸಹಾಯಕ ಆಯುಕ್ತ ಶಿವಕುಮಾರ್ 1.8 ಲಕ್ಷ ರು ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದಿದ್ದಾರೆ. ಪೂನಾ ಮೂಲದ ಕಂಪನಿಯೊಂದು ಕಾರ್ಮಿಕ ನೇಮಕ ಪರವಾನಗಿ ನೀಡುವಂತೆ ಕೋರಿ ಮೂರು ವರ್ಷದ ಹಿಂದೆ ಅರ್ಜಿ ಸಲ್ಲಿಸಿದ್ದರು.

ಪರವಾನಗಿ ನೀಡಲು ನಿವೃತ್ತ ಕಾರ್ಮಿಕ ಇನ್‌ಸ್ಪೆಕ್ಟರ್ ಶಿವಕುಮಾರ್ ಮತ್ತು ಸಹಾಯಕ ಕಾರ್ಮಿಕ ಆಯುಕ್ತ ಸಂತೋಷ್ ಹಿಪ್ಪರಗಿ 1.80 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಬುಧವಾರ ಎಸಿಬಿ ಬೆಲೆಗೆ ಬಿದ್ದಿದ್ದಾರೆ.

ಡಿಸೆಂಬರ್ 1 ರಂದು ವ್ಯಕ್ತಿ ನೀಡಿದ ದೂರಿನ ಅನ್ವಯ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಸಂತೋಷ್ ಹಿಪ್ಪರಗಿ ಅವರನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ, ಸಹಾಯಕ ಕಾರ್ಮಿಕ ಆಯುಕ್ತ ಸಂತೋಷ್ ಹಿಪ್ಪರಗಿ ಅವರ ನಿವಾಸದ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು. ಈ ವೇಳೆ ಹತ್ತು ಲಕ್ಷ ರೂಪಾಯಿ ನಗದು ಪತ್ತೆಯಾಗಿದೆ. ವಿಜಯನಗರ ಆರ್‌ಪಿಸಿ ಬಡಾವಣೆಯಲ್ಲಿರುವ ಮನೆ ಮೇಲೆ ಎಸಿಬಿ ಅಧಿಕಾರಿಗಳ ತಂಡ ದಾಳಿ ಮಾಡಿದೆ.

ಇಷ್ಟು ಮೊತ್ತದ ಅಕ್ರಮ ಹಣ ಪತ್ತೆಯಾದ ಹಿನ್ನೆಲೆಯಲ್ಲಿ ಚಿನ್ನಾಭರಣ ಹಾಗೂ ಆಸ್ತಿ ವಿವರ ಗಳನ್ನು ಸಂಗ್ರಹಿಸುತ್ತಿದ್ದಾರೆ. ಆದಾಯಕ್ಕಿಂತೂ ಮೀರಿ ಅಕ್ರಮ ಆಸ್ತಿ ಗಳಿಸಿರುವುದು ಕಂಡು ಬಂದಲ್ಲಿ ಅಕ್ರಮ ಆಸ್ತಿ ಗಳಿಕೆ ಪ್ರತ್ಯೇಕ ಪ್ರಕರಣ ದಾಖಲಿಸಿದ್ದಾರೆ. 

ಇನ್ನೂ ಪ್ರಕರಣ ಸಂಬಂಧ ನಿವೃತ್ತ ಕಾರ್ಮಿಕ ಅಧಿಕಾರಿ ಶಿವಕುಮಾರ್ ಮತ್ತು ಸಂತೋಷ್ ಹಿಪ್ಪರಗಿ ಮತ್ತು ಸಂತೋಷ್ ಪರವಾಗಿ ಹಣದ ವಿಷಯದಲ್ಲಿ ಮಧ್ಯವರ್ತಿಗಳಾಗಿ ಕೆಲಸ ಮಾಡುತ್ತಿದ್ದ ಇಬ್ಬರನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com