6 ವಾರಗಳಲ್ಲಿ ಚುನಾವಣಾ ವೇಳಾಪಟ್ಟಿ ಪ್ರಕಟಿಸಿ: ಬಿಬಿಎಂಪಿ ಚುನಾವಣೆ ನಡೆಸಲು ಆಯೋಗಕ್ಕೆ ಹೈಕೋರ್ಟ್ ಆದೇಶ

ಬಿಬಿಎಂಪಿಯ 196 ವಾರ್ಡ್ ಗಳಿಗೆ ಚುನಾವಣೆ ಘೋಷಿಸುವಂತೆ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಆದೇಶಿಸಿದೆ. 
ಬಿಬಿಎಂಪಿ
ಬಿಬಿಎಂಪಿ

ಬೆಂಗಳೂರು: ಬಿಬಿಎಂಪಿಯ 196 ವಾರ್ಡ್ ಗಳಿಗೆ ಚುನಾವಣೆ ಘೋಷಿಸುವಂತೆ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಆದೇಶಿಸಿದೆ.

ಕಾಂಗ್ರೆಸ್ ನ ಮಾಜಿ ಕಾರ್ಪೊರೇಟರ್ ಎಂ. ಶಿವರಾಜ್ ಕೋರ್ಟ್ ಮೆಟ್ಟಿಲೇರಿದ್ದು ಚುನಾವಣೆ ನಡೆಸುವಂತೆ ಆದೇಶಿಸಬೇಕು ಎಂದು ಮನವಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಸಿಜೆ ಎ.ಎಸ್ ಓಕಾ ನೇತೃತ್ವದ ವಿಭಾಗೀಯ ಪೀಠ ಮುಂದಿನ 6 ವಾರಗಳ ಒಳಗೆ ವೇಳಾಪಟ್ಟಿಯನ್ನು ಬಿಡುಗಡೆ ಮಾಡುವಂತೆ ಆಯೋಗಕ್ಕೆ ಆದೇಶಿಸಿದೆ. 

ಒಂದು ತಿಂಗಳಲ್ಲಿ ಮೀಸಲಾತಿ ಅಧಿಸೂಚನೆ ಹೊರಡಿಸಿ, ಮೀಸಲಾತಿ ಆದೇಶ ಹೊರಡಿಸಿದ 6 ವಾರಗಳಲ್ಲಿ ವೇಳಾಪಟ್ಟಿ ಪ್ರಕಟಿಸುವಂತೆ ಕೋರ್ಟ್ ಹೇಳಿದೆ. ಹೈಕೋರ್ಟ್ ಆದೇಶ ನೀಡಿದ ಹಿನ್ನೆಲೆಯಲ್ಲಿ ಮಾರ್ಚ್ ತಿಂಗಳಲ್ಲಿ ಬಿಬಿಎಂಪಿ ಚುನಾವಣೆ ನಡೆಯುವ ಸಾಧ್ಯತೆ ಇದೆ. 

ರಾಜ್ಯ ಸರ್ಕಾರ 198 ವಾರ್ಡ್ ಗಳನ್ನು 243ಕ್ಕೆ ಹೆಚ್ಚಿಸಲು ವಿಧಾನಸಮಂಡಲದಲ್ಲಿ ವಿಧೇಯಕ ಮಂಡಿಸಿ ಒಪ್ಪಿಗೆ ಪಡೆದಿತ್ತು. ಇನ್ನು ಶಾಸಕ ಎಸ್ ರಘು ನೇತೃತ್ವದ ಸಮಿತಿಯು ಅಧ್ಯಯನ ನಡೆಸಿ ಮಧ್ಯಂತರ ವರದಿ ನೀಡಿತ್ತು. ಸದ್ಯದಲ್ಲೇ ಅಂತಿಮ ವರದಿಯನ್ನು ಸಲ್ಲಿಸಲು ಮುಂದಾಗಿತ್ತು. ಈ ಕಾರಣದಿಂದಾಗಿ ಸರ್ಕಾರ ಪಾಲಿಕೆಗೆ ಚುನಾವಣೆಯನ್ನು ನಿಗದಿತ ಅವಧಿಯೊಳಗೆ ನಡೆಸದೆ ಮುಂದೂಡಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com