ಬೀದರ್ ಜಿಲ್ಲಾ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ

ನಾಲ್ಕುವರೆ ವರ್ಷಗಳಲ್ಲಿ ಎರಡನೇ ಬಾರಿಗೆ, ಬೀದರ್ ಜಿಲ್ಲಾ ಪಂಚಾಯತ್ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಜಾತಿ ರಾಜಕಾರಣದಿಂದಾಗಿ ಅವಿಶ್ವಾಸ ನಿರ್ಣಯದ ಮೂಲಕ ಕೆಳಗಿಳಿಸಲಾಗಿದೆ ಎಂದು ಆರೋಪಿಸಲಾಗಿದೆ.
ಬೀದರ್ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮತ್ತು ಉಪಾಧ್ಯಕ್ಷ
ಬೀದರ್ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮತ್ತು ಉಪಾಧ್ಯಕ್ಷ

ಬೀದರ್: ನಾಲ್ಕುವರೆ ವರ್ಷಗಳಲ್ಲಿ ಎರಡನೇ ಬಾರಿಗೆ, ಬೀದರ್ ಜಿಲ್ಲಾ ಪಂಚಾಯತ್ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಜಾತಿ ರಾಜಕಾರಣದಿಂದಾಗಿ ಅವಿಶ್ವಾಸ ನಿರ್ಣಯದ ಮೂಲಕ ಕೆಳಗಿಳಿಸಲಾಗಿದೆ ಎಂದು ಆರೋಪಿಸಲಾಗಿದೆ.

ಏಪ್ರಿಲ್ 2019 ರಲ್ಲಿಯೂ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಅವಿಶ್ವಾಸ ನಿರ್ಣಯದ ಮೂಲಕ ಉಚ್ಛಾಟಿಸಲಾಯಿತು. ಹೊಸ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಆಯ್ಕೆ ಮಾಡಲು ಡಿಸೆಂಬರ್ 14 ರಂದು ಬೀದರ್ ಜಿಲ್ಲಾ ಪಂಚಾಯತ್ ಸಭೆ ಕರೆಯಲಾಗಿದೆ. ಇತ್ತೀಚಿನ ಅವಿಶ್ವಾಸ ನಿರ್ಣಯವನ್ನು ಅಧ್ಯಕ್ಷ ಗೀತಾ ಪಂಡಿತ್ ಚಿದ್ರಿ ಉಪಾಧ್ಯಕ್ಷ ಲಕ್ಷ್ಮಣ ರಾವ್ ಬುಲ್ಲಾ ವಿರುದ್ಧ ಮಂಡಿಸಲಾಯಿತು.

ಕಲಬುರ್ಗಿ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಕರೆದಿದ್ದ ಅವಿಶ್ವಾಸ ಗೊತ್ತುವಳಿ ಮಂಡನೆ ಸಭೆಗೆ ತಡೆಯಾಜ್ಞೆ ನೀಡುವಂತೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಗೀತಾ ಚಿದ್ರಿ ಹಾಗೂ ಉಪಾಧ್ಯಕ್ಷ ಲಕ್ಷ್ಮಣರಾವ್ ಬುಳ್ಳಾ ಪರವಾಗಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಕಲಬುರ್ಗಿ ಹೈಕೋರ್ಟ್‌ ವಜಾಗೊಳಿಸಿದೆ. ಮುಂದಿನ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಪ್ರಾದೇಶಿಕ ಆಯುಕ್ತರಿಗೆ ನಿರ್ದೇಶನ ನೀಡಿದೆ.

ಪ್ರಾದೇಶಿಕ ಆಯುಕ್ತ ಎನ್‌.ವಿ. ಗುರುಪ್ರಸಾದ ಸಮ್ಮುಖದಲ್ಲಿ ಅಕ್ಟೋಬರ್‌ 23 ರಂದು ಜಿಲ್ಲಾ ಪಂಚಾಯಿತಿ ಸದಸ್ಯರ ವಿಶೇಷ ಸಭೆ ಕರೆಯಲಾಗಿತ್ತು. ಹಾಲಿ ಅಧ್ಯಕ್ಷೆ ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿ ಸಲ್ಲಿಸಿದ ಕಾರಣ ಅವರ ವಿರುದ್ಧದ ಅವಿಶ್ವಾಸ ಸಭೆಯ ನಡುವಳಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು. ನವೆಂಬರ್ 30 ರಂದು ಹೈಕೋರ್ಟ್ ಅರ್ಜಿ ವಜಾಗೊಳಿಸಿದೆ.

ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದ ಉಪಾಧ್ಯಕ್ಷ ಸ್ಥಾನವನ್ನು ಎಸ್ ಸಿ ಸಮುದಾಯಕ್ಕೆ ನೀಡಲಾಗಿದೆ ಎಂದು ಗೀತಾ ಛಿದ್ರಿ ಆರೋಪಿಸಿದ್ದು , ಈ ಸಂಬಂಧ ಕೋರ್ಟ್ ಮೆಟ್ಟಿಲೇರಿ ಹೊಸದಾಗಿ ಚುನವಾಣೆ ನಡೆಸಲು ಕೋರುವುದಾಗಿ ತಿಳಿಸಿದ್ದಾರೆ.

ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸ್ಥಾನದ ಅವಧಿ ನಿಗದಿ ವಿಷಯದಲ್ಲಿ ಸರ್ಕಾರದ ಆದೇಶದಲ್ಲೇ ಗೊಂದಲ ಇರುವ ಕಾರಣ ಜಿಲ್ಲಾ ಪಂಚಾಯಿತಿ ನಿಕಟಪೂರ್ವ ಅಧ್ಯಕ್ಷೆ ಗೀತಾ ಚಿದ್ರಿ ಕಲಬುರ್ಗಿ ಹೈಕೋರ್ಟ್ ದ್ವಿಸದಸ್ಯ ಪೀಠಕ್ಕೆ ಅರ್ಜಿ ಸಲ್ಲಿಸಿದ್ದಾರೆ.

30 ತಿಂಗಳ ಅವಧಿ ಮುಗಿಯುವ ಮೊದಲೇ ಅಧ್ಯಕ್ಷರ ಚುನಾವಣೆ ನಡೆಸುವ ಸರ್ಕಾರದ ಆದೇಶ ಗೊಂದಲದಿಂದ ಕೂಡಿದೆ. ಮೊದಲ ಅವಧಿಯ ಅಧ್ಯಕ್ಷರು 30 ತಿಂಗಳ ಅವಧಿ ಪೂರ್ಣಗೊಳಿಸಿದ್ದಾರೆ. ಎರಡನೇ ಅವಧಿಯ ಅಧ್ಯಕ್ಷರಿಗೂ ಅವಕಾಶ ಕಲ್ಪಿಸಿಕೊಡಬೇಕು ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಹೈಕೋರ್ಟ್ ದ್ವಿಸದಸ್ಯ ಪೀಠಕ್ಕೆ ಡಿ.2ರಂದು ಅರ್ಜಿ ದಾಖಲಿಸಲಾಗಿದೆ. ಪೀಠವು ಡಿಸೆಂಬರ್ 4ರಂದು ಅರ್ಜಿ ವಿಚಾರಣೆ ನಡೆಸಲಿದೆ ಎಂದು ಗೀತಾ ಚಿದ್ರಿ ತಿಳಿಸಿದ್ದಾರೆ.

ಪ್ರಸ್ತುತ ಸಮಿತಿಯನ್ನು 2016 ರ ಮೇ 2 ರಂದು ರಚಿಸಿದಾಗ, ಅಧ್ಯಕ್ಷ ಹುದ್ದೆಯನ್ನು ಎಸ್ಟಿ (ಮಹಿಳಾ) ವರ್ಗಕ್ಕೆ ಮತ್ತು ಉಪಾಧ್ಯಕ್ಷರ ಹುದ್ದೆಯನ್ನು ಸಾಮಾನ್ಯ ವರ್ಗಕ್ಕೆ ಕಾಯ್ದಿರಿಸಲಾಗಿದೆ ಎಂದು  ಉಪಾಧ್ಯಕ್ಷ ಹುದ್ದೆಯ ಆಕಾಂಕ್ಷಿಯಾಗಿದ್ದ ವಿಜಯಕುಮಾರ್ ಪಾಟೀಲ್ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com