ಬಿಬಿಎಂಪಿ ಚುನಾವಣೆ ನಡೆಸಲು ಹೈಕೋರ್ಟ್ ಆದೇಶ ಸ್ವಾಗತಾರ್ಹ: ಡಿ.ಕೆ.ಶಿವಕುಮಾರ್
ಮುಂದಿನ ಆರು ವಾರಗಳ ಅವಧಿಯಲ್ಲಿ ಬೆಂಗಳೂರು ಮಹಾನಗರ ಪಾಲಿಕೆಯ 198 ವಾರ್ಡ್ ಗಳಿಗೆ ಚುನಾವಣೆ ನಡೆಸುವಂತೆ ಹೈಕೋರ್ಟ್ ನೀಡಿರುವ ಆದೇಶವನ್ನು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಸ್ವಾಗತಿಸಿದ್ದಾರೆ.
Published: 04th December 2020 08:47 PM | Last Updated: 04th December 2020 08:47 PM | A+A A-

ಡಿಕೆ ಶಿವಕುಮಾರ್
ಬೆಂಗಳೂರು: ಮುಂದಿನ ಆರು ವಾರಗಳ ಅವಧಿಯಲ್ಲಿ ಬೆಂಗಳೂರು ಮಹಾನಗರ ಪಾಲಿಕೆಯ 198 ವಾರ್ಡ್ ಗಳಿಗೆ ಚುನಾವಣೆ ನಡೆಸುವಂತೆ ಹೈಕೋರ್ಟ್ ನೀಡಿರುವ ಆದೇಶವನ್ನು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಸ್ವಾಗತಿಸಿದ್ದಾರೆ.
ಪ್ರಜಾತಂತ್ರ ವ್ಯವಸ್ಥೆಯಲ್ಲಿ ಅವಧಿಗೆ ಅನುಗುಣವಾಗಿ ಚುನಾವಣೆಗಳು ನಡೆಯಬೇಕು. ಆದರೆ, ಬಿಜೆಪಿ ಸರ್ಕಾರ ಇದನ್ನು ಮುಂದಕ್ಕೆ ತಳ್ಳಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ತರುವ ಪ್ರಯತ್ನ ಮಾಡಿತ್ತು. ಆದರೆ, ನ್ಯಾಯಾಲಯ ಅದರ ಹುನ್ನಾರಕ್ಕೆ ಕಡಿವಾಣ ಹಾಕಿ, ಚುರುಕು ಮುಟ್ಟಿಸಿದೆ. ನ್ಯಾಯಾಲಯದ ಈ ತೀರ್ಪನ್ನು ಸ್ವಾಗತಿಸುವುದಾಗಿ ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಬಿಜೆಪಿಯವರು ಗ್ರಾಮ ಪಂಚಾಯಿತಿ ಚುನಾವಣೆಯನ್ನು ಮುಂದೂಡಲು ಪ್ರಯತ್ನಿಸಿದ್ದರು. ಜನಸಾಮಾನ್ಯರಿಗೆ ಅಧಿಕಾರ ಸಿಗಬೇಕು ಎಂಬುದು ಕಾಂಗ್ರೆಸ್ ಉದ್ದೇಶ. ಹೀಗಾಗಿ ಸರ್ಕಾರದ ತೀರ್ಮಾನದ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ್ದೇವು. ಆಗಲೂ ನ್ಯಾಯಾಲಯ ನಮ್ಮ ಅಹವಾಲಿಗೆ ಮನ್ನಣೆ ನೀಡಿತ್ತು ಎಂದು ತಿಳಿಸಿದರು.