ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿ: ಯೋಗಿ ಆದಿತ್ಯನಾಥ್ ಭೇಟಿ ಮಾಡಿದ ಪ್ರಭು ಚೌಹಾಣ್

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿ‌ ಕುರಿತು ಪರ ಹಾಗೂ ವಿರೋಧದ ಚರ್ಚೆ ನಡೆಯುತ್ತಿವೆ. ಇದೇ ಸಂದರ್ಭದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ರಾಜ್ಯ ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಅವರು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. 
ಯೋಗಿ ಆದಿತ್ಯನಾಥ್ ಭೇಟಿ ಮಾಡಿದ ಪ್ರಭು ಚೌಹಾಣ್
ಯೋಗಿ ಆದಿತ್ಯನಾಥ್ ಭೇಟಿ ಮಾಡಿದ ಪ್ರಭು ಚೌಹಾಣ್

ಬೆಂಗಳೂರು: ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿ‌ ಕುರಿತು ಪರ ಹಾಗೂ ವಿರೋಧದ ಚರ್ಚೆ ನಡೆಯುತ್ತಿವೆ. ಇದೇ ಸಂದರ್ಭದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ರಾಜ್ಯ ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಅವರು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. 

ಇದೇ ಡಿಸೆಂಬರ್ 7 ರಿಂದ ಆರಂಭವಾಗಲಿರುವ ಚಳಿಗಾಲದ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಮಂಡನೆ ಮಾಡಲಿದ್ದು, ಅದಕ್ಕೆ ಬೇಕಾದ ಎಲ್ಲ ಪೂರ್ವ ತಯಾರಿಗಳನ್ನು ಮಾಡಿಕೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಮತ್ತು ಗುಜರಾತ್ ಗೆ ತೆರಳಿರುವ ಸಚಿವ ಪ್ರಭು ಚೌಹಾಣ್  ಸಿಎಂ ಯೋಗಿ ಆದಿತ್ಯ ನಾಥ್ ಅವರನ್ನು ಭೇಟಿ ಮಾಡಿದ್ದಾರೆ, ಉತ್ತರ ಪ್ರದೇಶದಲ್ಲಿ ಗೋಹತ್ಯೆ ನಿಷೇಧಕ್ಕೆ ಸಂಬಂಧಿಸಿದಂತೆ, ಅತ್ಯಂತ ಕಠಿಣ ಕ್ರಮಗಳನ್ನು ಜರುಗಿಸಲಾಗಿದ್ದು, ಗೋಹತ್ಯೆ ನಿಷೇಧ ಕಾಯ್ದೆ ಯಶಸ್ವಿಯಾಗಿದೆ. ಕರ್ನಾಟಕ ಸರ್ಕಾರವೂ ಇದೇ ಮಾದರಿ ಕಾಯ್ದೆ ಜಾರಿಗೊಳಿಸಲು ಮಂದಾಗಿರುವುದಕ್ಕೆ ಸಿಎಂ ಯೋಗಿ ಆದಿತ್ಯನಾಥ್ ಸಂತಸ ವ್ಯಕ್ತ ಪಡಿಸಿದ್ದಾರೆ.

ಗೋಹತ್ಯೆ ನಿಷೇಧ ಕಾಯಿದೆ ಉತ್ತರ ಪ್ರದೇಶದಲ್ಲಿ ಅನುಷ್ಠಾನವಾದ ರೀತಿ ಬಗ್ಗೆ ಪ್ರಭು ಚವಾಣ್ ಅಲ್ಲಿನ ಅಧಿಕಾರಿಗಳೊಂದಿಗೆ ಸಮಗ್ರ ಚರ್ಚೆ ನಡೆಸಿದರು, ಈ ಸಂದರ್ಭದಲ್ಲಿ ಗೋ ಶಾಲೆಗಳ ನಿರ್ವಹಣೆ ಮತ್ತು ಗೋವುಗಳ ಆರೈಕೆ ಬಗ್ಗೆ ಅವರು ಮಾಹಿತಿ ಪಡೆದರು.

1964 ರ ಕರ್ನಾಟಕ ಗೋವುಗಳ ವಧೆ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ ಅಡಿಯಲ್ಲಿ ಕರ್ನಾಟಕದಲ್ಲಿ ಗೋಹತ್ಯೆಯನ್ನು ಈಗಾಗಲೇ ನಿಷೇಧಿಸಲಾಗಿದೆ. ಸರ್ಕಾರ ಪರಿಚಯಿಸಲು ಉದ್ದೇಶಿಸಿರುವ ಹೊಸ ಮಸೂದೆಯನ್ನು 2008 ರಲ್ಲಿ ಉಭಯ ಸದನಗಳು ಅಂಗೀಕರಿಸಿದವು, ಆದರೆ ನಂತರ ಅದನ್ನು ಕಾಂಗ್ರೆಸ್ ಸರ್ಕಾರ ಹಿಂತೆಗೆದುಕೊಂಡಿತು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com