ಯುಗಾದಿ ನಮಗೆ ಹೊಸ ವರ್ಷ, ಸಂಕಷ್ಟ ಸ್ಥಿತಿಯಲ್ಲಿ ಸಂಭ್ರಮಾಚರಣೆ ಅಗತ್ಯವಿದೆಯೇ? ಸುಧಾಕರ್ ಪ್ರಶ್ನೆ

ಹೊಸ ವರ್ಷಚಾರಣೆ ಮತ್ತು ಕ್ರಿಸ್ಮಸ್ ನಮ್ಮ ಸಂಸ್ಕೃತಿಯಲ್ಲ. ಕೋವಿಡ್‌ನ ಸಂಕಷ್ಟ ಸ್ಥಿತಿಯಲ್ಲಿ ಸಂಭ್ರಮಾಚರಣೆ ಅಗತ್ಯವಾದರೂ ಏನಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಪ್ರಶ್ನಿಸಿದ್ದಾರೆ. 
ಸುಧಾಕರ್
ಸುಧಾಕರ್

ಬೆಂಗಳೂರು: ಹೊಸ ವರ್ಷಚಾರಣೆ ಮತ್ತು ಕ್ರಿಸ್ಮಸ್ ನಮ್ಮ ಸಂಸ್ಕೃತಿಯಲ್ಲ. ಕೋವಿಡ್‌ನ ಸಂಕಷ್ಟ ಸ್ಥಿತಿಯಲ್ಲಿ ಸಂಭ್ರಮಾಚರಣೆ ಅಗತ್ಯವಾದರೂ ಏನಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಪ್ರಶ್ನಿಸಿದ್ದಾರೆ. 

ಬೆಂಗಳೂರಿನಲ್ಲಿ ಮಾತನಾಡಿದ ಅವರು.ಇದು ಭಾರತೀಯ ಕ್ಯಾಲೆಂಡರ್‌ನ ಹೊಸ ವರ್ಷ ಅಲ್ಲ. ಯುಗಾದಿ ನಮ್ಮ ಹೊಸ ವರ್ಷ. ಎಲ್ಲಕ್ಕಿಂತ ಮಿಗಿಲಾಗಿ ಕೊರೋನಾ ಸಂಕಷ್ಟದಲ್ಲಿ ಸಂಭ್ರಮಾಚರಣೆ ಅವಶ್ಯಕತೆ ಇದೆಯೆ ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹೊಸವರ್ಷ ಮತ್ತು ಕ್ರಿಸ್ಮಸ್‌ ಸಂದರ್ಭದಲ್ಲಿ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಚರ್ಚಿಸಲಾಗುತ್ತದೆ. ಕೆಲ ನಿರ್ಬಂಧಗಳ ಅವಶ್ಯಕತೆ ಇದೆ. ಆ ಬಗ್ಗೆ ಸಿಎಂ ಜತೆ ಚರ್ಚಿಸಿ ಪ್ರಕಟಿಸಲಾಗುವುದು. ಆದರೆ ಕರ್ಫ್ಯೂ ಜಾರಿ ಅಗತ್ಯ ಇದೆ ಅನ್ನಿಸುತ್ತಿಲ್ಲ. ಆದರೂ ತಜ್ಞರ ಜತೆ ಚರ್ಚಿಸಿದ ಬಳಿಕವಷ್ಟೇ ಈ ಕುರಿತು ನಿರ್ಧರಿಸಲಾಗುವುದು ಎಂದರು.

ಇದೇ ಮೊದಲ ಸಲ ಕಡ್ಡಾಯ ಸೇವೆಗಾಗಿ ರಾಜ್ಯಾದ್ಯಂತ ರೆಸಿಡೆಂಟ್‌ ಡಾಕ್ಟರ್‌ಗಳನ್ನು ನಿಯೋಜಿಸಲಾಗಿದ್ದು ಅವರಿಗೆ ವೇತನ ಬಿಡುಗಡೆ ಆಗಿಲ್ಲ ಎಂಬ ಸಂಗತಿ ಗಮನಕ್ಕೆ ಬಂದಿದೆ. ತಾಂತ್ರಿಕ ಕಾರಣಗಳಿಂದ ತಡವಾಗಿದೆ. ವಾರದೊಳಗಾಗಿ ವೇತನ ಬಿಡುಗಡೆ ಆಗಲಿದೆ. ಅಲ್ಲಿಯವರೆಗೆ ಆಯಾ ಕಾಲೇಜುಗಳ ಆಡಳಿತ ಮಂಡಳಿ ಅವರಿಗೆ ವೇತನ ನೀಡಲು ಸೂಚಿಸಲಾಗಿದೆ. ಹಣಕಾಸು ಇಲಾಖೆ ಜತೆ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರು ಈ ವಿಷಯದ ಬಗ್ಗೆ ಚರ್ಚಿಸಿದ್ದಾರೆ ಎಂದು ಸ್ಪಷ್ಟಪಡಿಸಿದರು.

ವ್ಯಾಕ್ಸಿನ್‌ ವಿತರಣೆ ಮತ್ತು ದಾಸ್ತಾನು ಸಂಬಂಧ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಶೈತ್ಯಾಗಾರ, ವಿತರಣಾ ಸಿಬ್ಬಂದಿ ಸಹಿತ ಎಲ್ಲಾ ವಿಷಯಗಳ ಬಗ್ಗೆ ಅನೇಕ ಸುತ್ತುಗಳ ಸಮಾಲೋಚನೆ ಪೂರ್ಣಗೊಳಿಸಿದ್ದೇವೆ. ಹಿಂದೆ ಅನೇಕ ಸಲ ವ್ಯಾಕ್ಸಿನ್‌ ಬಳಕೆ ಮಾಡಿರುವ ಅನುಭವ ಇದೆ. ಕೋವಿಡ್‌ ಬರುವ ಮೊದಲಿಗಿಂತ ಈಗ ಮೂಲಸೌಕರ್ಯದಲ್ಲಿ ಸಾಕಷ್ಟು ಸುಧಾರಣೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com