ಕ್ರಿಸ್ಮಸ್, ಹೊಸ ವರ್ಷಾಚರಣೆಯಲ್ಲಿ ನೈಟ್ ಕರ್ಫ್ಯೂ ಇಲ್ಲ: ಬಸವರಾಜ ಬೊಮ್ಮಾಯಿ

ಕೊರೊನಾ ವೈರಸ್ ಸೋಂಕು ಮತ್ತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ನೈಟ್ ಕರ್ಫ್ಯೂ ಹೇರುವ ಚಿಂತನೆಯನ್ನು ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ತಳ್ಳಿ ಹಾಕಿದ್ದಾರೆ.
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ

ಉಡುಪಿ/ಬೆಂಗಳೂರು: ಕೊರೊನಾ ವೈರಸ್ ಸೋಂಕು ಮತ್ತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ನೈಟ್ ಕರ್ಫ್ಯೂ ಹೇರುವ ಚಿಂತನೆಯನ್ನು ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ತಳ್ಳಿ ಹಾಕಿದ್ದಾರೆ.

ಉಡುಪಿಯಲ್ಲಿ ಮಾತನಾಡಿದ ಅವರು, ಕ್ರಿಸ್ಮಸ್ ಮತ್ತು ಹೊಸ ವರ್ಷಾಚರಣೆಯ ವೇಳೆ ನೈಟ್ ಕರ್ಫ್ಯೂ ಬಗ್ಗೆ ಯಾವುದೇ ಸಭೆ ಕರೆದಿಲ್ಲ. ಆದರೆ ಜನ ಸೇರದಂತೆ ನೋಡಿಕೊಳ್ಳಬೇಕು ಎಂದು ತಜ್ಞರು ಹೇಳಿದ್ದಾರೆ.  ನಾಳೆ ಸರ್ಕಾರ ಒಂದು ತೀರ್ಮಾನ ಮಾಡಲಿದ್ದು ನೈಟ್ ಕರ್ಫ್ಯೂ ಬಗ್ಗೆ ಯಾವುದೇ ಚಿಂತನೆ ಇಲ್ಲ ಎಂದು ಹೇಳಿದ್ದಾರೆ.

ಹೊಸ ವರ್ಷಾಚರಣೆಯಲ್ಲಿ ಜನಸಂದಣಿ ಆಗದಂತೆ ನೋಡಿಕೊಳ್ಳುವ ಜವಾಬ್ದಾರಿ ಇದೆ.  ಸಾಮಾಜಿಕ ಅಂತರ ಕಾಯ್ದು ಕೊಳ್ಳುವುದರ ಜೊತೆಗೆ ಸ್ವಚ್ಛತೆ ಕಾಪಾಡಬೇಕಾಗಿದೆ, ನೈಟ್ ಕರ್ಫ್ಯೂ ಹೊರತಾಗಿಯೂ ಕ್ರಮ ಕೈಗೊಳ್ಳಬಹುದಾಗಿದೆ ಎಂದರು. ಹೊಸ ವರ್ಷ ಮತ್ತು ಕ್ರಿಸ್ಮಸ್‌ ಹಿನ್ನೆಲೆಯಲ್ಲಿ ಬಿಗಿ ಕ್ರಮ ಜಾರಿಗೊಳಿಸುವ ಬಗ್ಗೆಯೂ ತಜ್ಞರ ಜತೆ ಚರ್ಚಿಸಲಾಗುವುದು ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com