ಮಾಜಿ ಸಚಿವ ವರ್ತೂರು ಪ್ರಕಾಶ್ ಅಪಹರಣ ಪ್ರಕರಣ: ಪೊಲೀಸರಿಂದ 13 ಮಂದಿ ವಿಚಾರಣೆ

ಮಾಜಿ ಸಚಿವ ವರ್ತೂರು ಪ್ರಕಾಶ್ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ತೀವ್ರಗೊಳಿಸಿರುವ ಪೊಲೀಸರು ಈ ವರೆಗೂ 13 ಮಂದಿಯನ್ನು ವಿಚಾರಣೆ ನಡೆಸಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. 
ವರ್ತೂರು ಪ್ರಕಾಶ್
ವರ್ತೂರು ಪ್ರಕಾಶ್

ಕೋಲಾರ: ಮಾಜಿ ಸಚಿವ ವರ್ತೂರು ಪ್ರಕಾಶ್ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ತೀವ್ರಗೊಳಿಸಿರುವ ಪೊಲೀಸರು ಈ ವರೆಗೂ 13 ಮಂದಿಯನ್ನು ವಿಚಾರಣೆ ನಡೆಸಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. 

ಈ ಕುರಿತು ಮಾಹಿತಿ ನೀಡಿರುವ ಐಜಿಪಿ ಸೀಮಂತ್ ಕುಮಾರ್ ಸಿಂಗ್ ಅವರು, ಪ್ರಕರಣ ಸಂಬಂಧ ಪ್ರಮುಖ ಸಾಕ್ಷ್ಯಾಧಾರಗಳನ್ನು ಪೊಲೀಸರು ಕಲೆ ಹಾಕಿದ್ದಾರೆ. 1-2 ದಿನಗಳಲ್ಲಿ ಪ್ರಕರಣ ಬೇಧಿಸುವ ವಿಶ್ವಾಸವಿದೆ ೆಂದು ಹೇಳಿದ್ದಾರೆ. 

ಈ ನಡುವೆ ಪ್ರಕರಣ ಸಂಬಂಧ ಕೋಲಾರ ಎಸ್'ಪಿ ಕಾರ್ತಿಕ್ ರೆಡ್ಡಿಯವರ ಮಾತನಾಡಿ, ವರ್ತೂರು ಪ್ರಕಾಶ್ ಅವರನ್ನೂ ಕೂಡ 45 ನಿಮಿಷಗಳ ಕಾಲ ವಿಚಾರಣೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com