
ಕೊರೋನಾ ಆರ್ಭಟ
ಬೆಂಗಳೂರು: ರಾಜ್ಯದಲ್ಲಿ ಇಂದು 1,325 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು ಇದರೊಂದಿಗೆ ಸೋಂಕಿನ ಸಂಖ್ಯೆ 8,91,685ಕ್ಕೆ ಏರಿಕೆಯಾಗಿದೆ.
ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 12 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟಾರೆ ರಾಜ್ಯದಲ್ಲಿ ಸೋಂಕಿನಿಂದ 11,846 ಮಂದಿ ಬಲಿಯಾಗಿದ್ದಾರೆ.
ರಾಜ್ಯದಲ್ಲಿ ಇಂದು 1400 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ 8,54,861 ಮಂದಿ ಚೇತರಿಸಿಕೊಂಡಿದ್ದಾರೆ. ಇನ್ನು 24,959 ಸಕ್ರೀಯ ಪ್ರಕರಣಗಳಿದ್ದು ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರಿನಲ್ಲಿ ಇಂದು 709 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 3,73,291ಕ್ಕೆ ಏರಿಕೆಯಾಗಿದೆ. ಇನ್ನು ಸೋಂಕಿಗೆ 6 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ನಗರದಲ್ಲಿ ಒಟ್ಟಾರೆ 4,176 ಮಂದಿ ಬಲಿಯಾಗಿದ್ದಾರೆ.
Today's Media Bulletin 05/12/2020.
— K'taka Health Dept (@DHFWKA) December 5, 2020
Please click on the link below to view bulletin.@PMOIndia @narendramodi @CMofKarnataka @MoHFW_INDIA @drharshvardhan @BSYBJP @nalinkateel @drashwathcn @mla_sudhakar @siddaramaiah @hd_kumaraswamy https://t.co/DtBfwuhre3 pic.twitter.com/EYb0Gz1Q0w