ಹೈಕೋರ್ಟ್
ಹೈಕೋರ್ಟ್

ಕರ್ನಾಟಕ ಬಂದ್ ನಿಂದ ಸಣ್ಣ ವ್ಯಾಪಾರಿಗಳಿಗೆ, ಬೀದಿ ಬದಿ ವ್ಯಾಪಾರಿಗಳಿಗೆ ಆಗುವ ನಷ್ಟವನ್ನು ಆಯೋಜಕರೇ ಭರಿಸಬೇಕಾಗುತ್ತೆ: ಹೈಕೋರ್ಟ್

ಸಣ್ಣ ವ್ಯಾಪಾರಿಗಳು ಮತ್ತು ರಸ್ತೆ ಬದಿ ವ್ಯಾಪಾರಿಗಳು ಈಗಾಗಲೇ ಕೋವಿಡ್-19 ಸಾಂಕ್ರಾಮಿಕ, ಲಾಕ್ ಡೌನ್ ನಿಂದ ಸಾಕಷ್ಟು ತೊಂದರೆ ಅನುಭವಿಸಿದ್ದು ಶನಿವಾರ ನಡೆಯುವ ಕರ್ನಾಟಕ ಬಂದ್ ನಿಂದ ಉಂಟಾಗುವ ನಷ್ಟವನ್ನು ಆಯೋಜಕರೇ ಭರಿಸುವ ಬಗ್ಗೆ ಪರಿಗಣಿಸಬೇಕು ಎಂದು ಹೈಕೋರ್ಟ್ ತಿಳಿಸಿದೆ.

ಬೆಂಗಳೂರು: ಸಣ್ಣ ವ್ಯಾಪಾರಿಗಳು ಮತ್ತು ರಸ್ತೆ ಬದಿ ವ್ಯಾಪಾರಿಗಳು ಈಗಾಗಲೇ ಕೋವಿಡ್-19 ಸಾಂಕ್ರಾಮಿಕ, ಲಾಕ್ ಡೌನ್ ನಿಂದ ಸಾಕಷ್ಟು ತೊಂದರೆ ಅನುಭವಿಸಿದ್ದು ಶನಿವಾರ ನಡೆಯುವ ಕರ್ನಾಟಕ ಬಂದ್ ನಿಂದ ಉಂಟಾಗುವ ನಷ್ಟವನ್ನು ಆಯೋಜಕರೇ ಭರಿಸುವ ಬಗ್ಗೆ ಪರಿಗಣಿಸಬೇಕು ಎಂದು ಹೈಕೋರ್ಟ್ ತಿಳಿಸಿದೆ.

ಕರ್ನಾಟಕ ಬಂದ್ ನಿಂದ ಹಲವರ ಜೀವನದ ಮೇಲೆ ತೀವ್ರ ಪರಿಣಾಮ ಬೀರುತ್ತದೆ ಎಂದು ಹೇಳಿದ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಒಕಾ ಮತ್ತು ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ನೇತೃತ್ವದ ವಿಭಾಗೀಯ ಪೀಠ, ಸಣ್ಣ ವ್ಯಾಪಾರಿಗಳಿಗೆ ಆಗಲಿರುವ ನಷ್ಟವನ್ನು ಭರಿಸುವ ಸೂಚನೆ ನೀಡಿದ್ದಾರೆ.

ಲೆಟ್ಜಿಕಿಟ್ ಫೌಂಡೇಶನ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಬಂದ್ ವೇಳೆ ಸಾಮಾಜಿಕ ಅಂತರ ಮತ್ತು ಮಾಸ್ಕ್ ಬಳಕೆಯ ನಿಯಮ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕೆಂದು ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ. ಬಂದ್ ವೇಳೆ ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ದಂಡ ಹೇರಿ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಸಹ ಎಚ್ಚರಿಕೆ ನೀಡಿದೆ.

Related Stories

No stories found.

Advertisement

X
Kannada Prabha
www.kannadaprabha.com